ವಿಮಾನ ನಿಲ್ದಾಣದಲ್ಲಿ ಬಾಂಬ್; ಆದಿತ್ಯರಾವ್‌ಗೆ ಬ್ರೈನ್ ಮ್ಯಾಪಿಂಗ್ ಪರೀಕ್ಷೆ

ಮಂಗಳೂರು, ಏಪ್ರಿಲ್ 14 : ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಆರೋಪಿ ಆದಿತ್ಯರಾವ್‌ಗೆ ಬ್ರೈನ್ ಮ್ಯಾಪಿಂಗ್ ಪರೀಕ್ಷೆ ನಡೆಸಲು ಪೊಲೀಸರು ತೀರ್ಮಾನಿಸಿದ್ದಾರೆ. ಆದರೆ. ಲಾಕ್ ಡೌನ್ ಪರಿಣಾಮ ಬೆಂಗಳೂರಿಗೆ ಕರೆದುಕೊಂಡು ಹೋಗಲು ಆಗುತ್ತಿಲ್ಲ.

2020ರ ಜನವರಿ 20ರಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣದ ಕುರಿತ ಆರೋಪ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಆದರೆ, ಅದನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಪೊಲೀಸರು ರಾಜ್ಯ ಸರ್ಕಾರದ ಅನುಮತಿಗಾಗಿ ಕಾಯುತ್ತಿದ್ದಾರೆ.

ಆದಿತ್ಯರಾವ್‌ಗೆ ಬ್ರೈನ್ ಮ್ಯಾಪಿಂಗ್ ಪರೀಕ್ಷೆ ಮಾಡಲು ಪೊಲೀಸರು ತೀರ್ಮಾನಿಸಿದ್ದಾರೆ. ಆದರೆ, ಲಾಕ್ ಡೌನ್ ಇರುವುದರಿಂದ ಬೆಂಗಳೂರಿಗೆ ಕರೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ. ಲಾಕ್ ಡೌನ್ ಮುಗಿದ ಬಳಿಕ ಬ್ರೈನ್ ಮ್ಯಾಪಿಂಗ್ ಮಾಡಿಸಿ, ಅದರ ವರದಿಯನ್ನು ಚಾರ್ಜ್‌ ಶೀಟ್‌ನಲ್ಲಿ ಸೇರಿಸಲಾಗುತ್ತದೆ.

Brain Mapping Test For Adithya Rao

ಆರೋಪ ಪಟ್ಟಿ ಸಲ್ಲಿಕೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಅನುಮತಿ ಸಿಕ್ಕಿದೆ. ಆದರೆ, ಸರ್ಕಾರದ ಅನುಮತಿ ನೀಡಿದ ಕಾರಣ ಆರೋಪ ಪಟ್ಟಿ ಸಲ್ಲಿಸಲು ನಿಗದಿಪಡಿಸಿದ ಅವಧಿಯನ್ನು ವಿಸ್ತರಣೆ ಮಾಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗಿದೆ.

ಆದಿತ್ಯರಾವ್ ಜನವರಿ 20ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ. ಬಳಿಕ ಆಟೋದಲ್ಲಿ ವಿಮಾನ ನಿಲ್ದಾಣದಿಂದ ಪರಾರಿಯಾಗಿದ್ದ.

ಬಾಂಬ್ ವಶಕ್ಕೆ ಪಡೆದಿದ್ದ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ಕೆಂಜಾರಿನ ನಿರ್ಜನ ಪ್ರದೇಶದಕ್ಕೆ ಅದನ್ನು ತೆಗೆದುಕೊಂಡು ಹೋಗಿ ಸ್ಫೋಟಿಸಿದ್ದರು. ಈ ಪ್ರಕರಣ ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿತ್ತು.

ಘಟನೆ ನಡೆದ ಎರಡು ದಿನಗಳ ಬಳಿಕ ಬೆಂಗಳೂರಿನಲ್ಲಿ ಡಿಜಿ&ಐಜಿಪಿ ಮುಂದೆ ಆದಿತ್ಯರಾವ್ ಶರಣಾಗಿದ್ದ. ಬಳಿಕ ಆತನನ್ನು ಮಂಗಳೂರು ಪೊಲೀಸರ ವಶಕ್ಕೆ ನೀಡಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+