ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಸಂಭ್ರಮ

|
Google Oneindia Kannada News

ಮಂಗಳೂರು, ಮಾರ್ಚ್ 13:ತುಳುನಾಡಿನ ಶಕ್ತಿ ಪೀಠಗಳಲ್ಲಿ ಒಂದಾಗಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಇಂದು ಬ್ರಹ್ಮಕಲಶೋತ್ಸವದ ಸಂಭ್ರಮ. ಮುಂಜಾನೆಯಿಂದಲೇ ಮಂಗಳೂರು ಹೊರವಲಯದ ಪೊಳಲಿ ದೇವಾಲಯದಲ್ಲಿ ಬ್ರಹ್ಮಕಲಶಾಭಿಷೇಕ ನಡೆಯುತ್ತಿದೆ.

ಈ ಸಂಭ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದಾರೆ. ಮುಂಜಾನೆಯಿಂದಲೇ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ವೈದಿಕ ವಿಧಿ ವಿಧಾನಗಳು ಆರಂಭವಾಗಿವೆ. ವೈಧಿಕ ವಿಧಿ ವಿಧಾನಗಳು ನಡೆಯುತ್ತಿರುವುದರಿಂದ ಬೆಳಗ್ಗೆ 10 ಗಂಟೆಯವರೆಗೆ ಭಕ್ತರಿಗೆ ದೇಗುಲ ಪ್ರವೇಶಾವಕಾಶ ನೀಡಲಾಗಿರಲಿಲ್ಲ. ಸಂಜೆ 5.30ರಿಂದ 8.30ರ ತನಕವೂ ಭಕ್ತರ ದೇಗುಲ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ.

ಪೊಳಲಿ ರಾಜರಾಜೇಶ್ವರಿ ದೇವಾಲಯದ ಧ್ವಜಸ್ತಂಭ ಪ್ರತಿಷ್ಠೆ ವೇಳೆ ಪವಾಡ!ಪೊಳಲಿ ರಾಜರಾಜೇಶ್ವರಿ ದೇವಾಲಯದ ಧ್ವಜಸ್ತಂಭ ಪ್ರತಿಷ್ಠೆ ವೇಳೆ ಪವಾಡ!

ಇಂದು ಬುಧವಾರ ಬೆಳಗ್ಗೆ ಮೀನ ಲಗ್ನ ಸುಮುಹೂರ್ತದಲ್ಲಿ ಬ್ರಹ್ಮಕಲಶಾಭಿಷೇಕ. ಮಹಾಪೂಜೆ, ಮಧ್ಯಾಹ್ನ 12 ಗಂಟೆಗೆ ಪಲ್ಲಪೂಜೆ, ಬ್ರಾಹ್ಮಣ ಸುವಾಸಿನಿ ಆರಾಧನೆ ನಡೆಯಿತು. ಬ್ರಹ್ಮಕಲಶೋತ್ಸವದ ಪವಿತ್ರ ಅನ್ನಪ್ರಸಾದ ವಿತರಣೆ ಕೂಡ ನಡೆಯಲಿದೆ.

Bramakalashotsava celebration in Polali Sri Rajarajeshwari Temple

 ಶಿವರಾತ್ರಿಯಂದೇ ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ಭಾರೀ ಅಪಚಾರ ಶಿವರಾತ್ರಿಯಂದೇ ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ಭಾರೀ ಅಪಚಾರ

ಕ್ಷೇತ್ರದ ತಂತ್ರಿಗಳಾದ ವೇ ಮೂ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ಪೊಳಲಿ ರಾಜರಾಜೇಶ್ವರಿ ದೇವಿಗೆ 501 ಕಲಶಾಭಿಷೇಕ, ದುರ್ಗಾಪರಮೇಶ್ವರಿ ದೇವಿಗೆ 501 ಕಲಶಾಭಿಷೇಕ ಹಾಗೂ ಪರಿವಾರ ದೇವರುಗಳಿಗೆ 108 ಕಲಶಗಳ ಅಭಿಷೇಕ ನಡೆಯಲಿದೆ. ಭಕ್ತರಿಗೆ ನಿರಂತರ ಊಟೋಪಚಾರದ ವ್ಯವಸ್ಥೆ ಇದೆ.

Bramakalashotsava celebration in Polali Sri Rajarajeshwari Temple

ಇಂದು ರಾತ್ರಿ ಶ್ರೀ ಕ್ಷೇತ್ರದಲ್ಲಿ ಶ್ರೀ ಕೊಡಮಣಿತ್ತಾಯ ಮತ್ತು ಅರ್ಕುಳ ಶ್ರೀ ಉಳ್ಳಾಕ್ಲು ದೈವಗಳ ನೇಮ ನಡೆಯಲಿದೆ. ಜತೆಗೆ ಅರ್ಧ ಶತಮಾನಕ್ಕೂ ಅಧಿಕ ಕಾಲದ ಬಳಿಕ ಇದೇ ಮೊದಲ ಬಾರಿಗೆ ನಡೆಯುವ ಮಗೃಂತಾಯಿ ದೈವದ ನೇಮವನ್ನು ಕಣ್ತುಂಬಿಕೊಳ್ಳಲು ಭಕ್ತರು ಕಾತರರಾಗಿದ್ದಾರೆ.

English summary
Bramakalashotsava celebration in Very famous Polali Sri Rajarajeshwari Temple.For this reason large number of devotees arrived to temple.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X