ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಕ್ಷಿಣ ಕನ್ನಡದಲ್ಲಿ ಉಕ್ಕಿ ಹರಿದ ನದಿಗಳು: ಬಹು ಭಾಗ ರಸ್ತೆ ಸಂಪರ್ಕ ಕಡಿತ

|
Google Oneindia Kannada News

ಮಂಗಳೂರು, ಆಗಸ್ಟ್ 14: ಕರಾವಳಿ ಸೇರಿದಂತೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕಳೆದ 23 ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಪಶ್ಚಿಮ ಘಟ್ಟ ತಪ್ಪಲಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ನದಿಗಳು ಉಕ್ಕಿಹರಿಯುತ್ತಿದ್ದು, ಹೆಚ್ಚಿನ ಭಾಗದ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಕರಾವಳಿ ಹಾಗು ಪಶ್ಚಿ ಘಟ್ಟದ ತಪ್ಪುಲು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತ್ರಿಶಂಕು ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯಿಂದ ಹೊರ ಹೋಗುವ ಮೂರು ರಾಷ್ಟ್ರೀಯ ಹೆದ್ದಾರಿ ಭಾರೀ ಮಳೆಯಿಂದಾಗಿ ಬಂದ್ ಆಗಿವೆ. ಚಾರ್ಮಾಡಿ, ಮಾಣಿ-ಮೈಸೂರು,ಶಿರಾಡಿ ಘಾಟ್ ಹೆದ್ದಾರಿ ಬಂದ್ ಆಗಿವೆ.

Bridges in Dakshina Kannada submerged in flood water

ಉಡುಪಿಯಲ್ಲೂ ಅನಾಹುತ ಸೃಷ್ಟಿಸಿದ ಮಳೆ, ರೆಡ್ ಅಲರ್ಟ್ ಘೋಷಣೆಉಡುಪಿಯಲ್ಲೂ ಅನಾಹುತ ಸೃಷ್ಟಿಸಿದ ಮಳೆ, ರೆಡ್ ಅಲರ್ಟ್ ಘೋಷಣೆ

ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿದ ಕಾರಣ ರಸ್ತೆ ಸಂಚಾರಕ್ಕೆ ತೊಡಕುಂಟಾಗಿದೆ. ಮಾಣಿ-ಮೈಸೂರು ಹೆದ್ದಾರಿ, ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದ್ದು, ಬೆಂಗಳೂರು - ಮಂಗಳೂರು ರಸ್ತೆ ಸಂಪರ್ಕ ಕಡಿತಗೊಂಡಿದೆ.

Bridges in Dakshina Kannada submerged in flood water

ರಸ್ತೆ ಮೇಲೆ ನದಿಯ ಪ್ರವಾಹದ ನೀರು ಹರಿಯುತ್ತಿದ್ದು ಹೆಚ್ಚಿನ ಸೇತುವೆಗಳ ಮೇಲೆ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ನೀರಿನ ಹರಿವು ಕಡಿಮೆಯಾದ ಬಳಿಕ ಮತ್ತೇ ವಾಹನ ಸಂಚಾರ ಆರಂಭವಾಗಲಿದೆ. ಪರಿಣಾಮ ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ಹಾಗು ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುವ ವಾಹನಗಳು ನಡು ರಸ್ತೆಯಲ್ಲೇ ಸಾಲುಗಟ್ಟಿ ನಿಂತಿವೆ.

English summary
Heavy rain lashed Dakshina Kannada district. Western Ghats range receiving heavy rainfall science 5 days. water has started to flow in downstream channels. Because of this most of the bridges in the districts submerged in flood water
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X