ಕೇಂದ್ರ ಬಜೆಟ್ ಬಗ್ಗೆ ಖಾದರ್, ರಮಾನಾಥ ರೈ ಹೇಳಿದ್ದೇನು?
ಅಪನಗದೀಕರಣದಿಂದ ದೇಶದಲ್ಲಿ ಉದ್ಯೋಗಾವಕಾಶ ತಗ್ಗುತ್ತಿದೆ. ಇದಕ್ಕೆ ಬಜೆಟಿನಲ್ಲಿ ಏನೂ ಮಾಡಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ ಖಾದರ್ ಹೇಳಿದ್ದಾರೆ. ಇದೇ ವೇಳೇ ಬಜೆಟಿನಲ್ಲಿ ಕರಾವಳಿಯ ರೈಲ್ವೇ ಬೇಡಿಕೆಗಳನ್ನು ಇಡೇರಿಸಿಲ್ಲ ಅಂತ
ಮಂಗಳೂರು, ಫೆಬ್ರವರಿ 2: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಮಂಡಿಸಿದ 2017ರ ಬಜೆಟ್ ಬಗ್ಗೆ ಕರಾವಳಿ ಮೂಲದ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಪನಗದೀಕರಣದಿಂದ ದೇಶದಲ್ಲಿ ಉದ್ಯೋಗಾವಕಾಶ ತಗ್ಗುತ್ತಿದೆ. ಇದಕ್ಕೆ ಬಜೆಟಿನಲ್ಲಿ ಏನೂ ಮಾಡಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ ಖಾದರ್ ಹೇಳಿದ್ದಾರೆ. ಇದೇ ವೇಳೇ ಬಜೆಟಿನಲ್ಲಿ ಕರಾವಳಿಯ ರೈಲ್ವೇ ಬೇಡಿಕೆಗಳನ್ನು ಇಡೇರಿಸಿಲ್ಲ ಅಂತ ಪರಿಸರ ಮತ್ತು ಅರಣ್ಯ ಸಚಿವ ರಮಾನಾಥ್ ರೈ ಹೇಳಿದ್ದಾರೆ.[ಅಭಿವೃದ್ಧಿ, ಉದ್ಯೋಗ ಸೃಷ್ಟಿಗೆ ಪೂರಕವಲ್ಲದ ಬಜೆಟ್:ಸಿದ್ದರಾಮಯ್ಯ]

"ನೋಟು ನಿಷೇಧದ ನಂತರ ದೇಶದ ಬ್ಯಾಂಕುಗಳಲ್ಲಿ ಎಷ್ಟು ಹಣ ಠೇವಣಿಯಾಗಿದೆ ಎಂಬ ಮಾಹಿತಿಯನ್ನು ಬಜೆಟ್ ನಲ್ಲಿ ಬಹಿರಂಗಪಡಿಸಿಲ್ಲ. ಜನಸಾಮಾನ್ಯರ ಉಳಿತಾಯವನ್ನು ಕಪ್ಪು ಹಣ ಎಂದು ಹೇಳಿ ಕೇಂದ್ರ ಹೆಮ್ಮೆಪಡುತ್ತಿದೆ. ನೋಟು ನಿಷೇಧದ ಹಿಂದಿನ ಮೂರು ತಿಂಗಳಲ್ಲಿ ದೇಶದಲ್ಲಿ 2.5. ಲಕ್ಷ ಕೋಟಿ ರೂಪಾಯಿ ಹೂಡಿಕೆಯಾಗಿದ್ದರೆ, ನೋಟು ನಿಷೇಧ ನಂತರದ 3 ತಿಂಗಳಲ್ಲಿ ಇದು 1.5 ಲಕ್ಷ ಕೋಟಿಗೆ ತಗ್ಗಿದೆ. ಇದರಿಂದ ದೇಶದಲ್ಲಿ ಉದ್ಯೋಗಾವಕಾಶಗಳು ತಗ್ಗುತ್ತಿದೆ," ಎಂದು ಯು.ಟಿ ಖಾದರ್ ಹೇಳಿದ್ದಾರೆ.[ಜೇಟ್ಲಿ ಬಜೆಟನ್ನು ಠುಸ್ ಪಟಾಕಿ ಎಂದ ರಾಹುಲ್ ಗಾಂಧಿ]

2017ರ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ರಮಾನಾಥ ರೈ, "ಕುಸಿಯುತ್ತಿರುವ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತರಲು ಬಜೆಟಿನಲ್ಲಿ ಯಾವುದೇ ಪರಿಹಾರ ಕ್ರಮಗಳನ್ನು ಕೈಗೊಂಡಿಲ್ಲ. ಉದ್ಯೋಗ ಸೃಷ್ಟಿಗೂ ಆದ್ಯತೆ ನೀಡಿಲ್ಲ. ಇದರಿಂದ ಕೆಳಹಂತದ ಆರ್ಥ ವ್ಯವಸ್ಥೆಯ ಮೇಲೆ ಕರಾಳ ಪರಿಣಾಮ ಬೀರುವ ಸಾಧ್ಯತೆ ಇದೆ. ರೈಲ್ವೆ ಬಜೆಟನ್ನೂ ಇದೇ ಬಜೆಟ್‌ನಲ್ಲಿ ಮಂಡಿಸಲಾಗಿದೆ. ಮಂಗಳೂರಿಗೆ ಆರ್ಥಿಕ ಶಕ್ತಿಯನ್ನು ವೃದ್ಧಿಸಲು ಆರ್ಥಿಕ ಆಧಾರಿತ ರೈಲ್ವೇ ಯೋಜನೆಗಳ ಅಗತ್ಯವಿತ್ತು. ಆದರೆ ಕರಾವಳಿಯ ಜನತೆಯ ದೀರ್ಘಕಾಲದ ರೈಲ್ವೆ ಬೇಡಿಕೆಗಳನ್ನು ಬಜೆಟಿನಲ್ಲಿ ಕಡೆಗಣಿಸಲಾಗಿದೆ," ಎಂದು ದೂರಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications