ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಿಷೇಧವಿದ್ದರೂ ಕರಾವಳಿಯಲ್ಲಿ ಮತ್ತೆ ಕಾಣಿಸಿಕೊಂಡ ಬುಲ್ ಟ್ರಾಲ್ ಮೀನುಗಾರಿಕೆ

|
Google Oneindia Kannada News

Recommended Video

ಮಂಗಳೂರಿನಲ್ಲಿ ನಿಷೇಧವಾಗಿದ್ದ ಬುಲ್ ಟ್ರಾಲ್ ಮೀನುಗಾರಿಕೆ ಮತ್ತೆ ಶುರು | Oneindia Kannada

ಮಂಗಳೂರು, ಸೆಪ್ಟೆಂಬರ್.05: ಸಮುದ್ರದಲ್ಲಿ ಮತ್ಸ್ಯ ಕ್ಷಾಮವುಂಟಾಗಿದೆ. ಆಳ ಸಮುದ್ರಕ್ಕೆ ತೆರಳಿದರೂ ಬೊಗಸೆ ತುಂಬಾ ಮೀನು ಸಿಗುತ್ತಿಲ್ಲ. ಮೀನುಗಾರರು ಬರಿಗೈಯ್ಯಲ್ಲಿ ಮರಳುತ್ತಿದ್ದಾರೆ.
ಇದಕ್ಕೆಲ್ಲಾ ನಿಷೇಧಿತ ಬುಲ್ ಟ್ರಾಲ್ ಮೀನುಗಾರಿಕೆ ಕಾರಣ ಎಂಬ ಆರೋಪ ಮೀನುಗಾರರಿಂದ ಕೇಳಿ ಬರುತ್ತಲೇ ಇದೆ.

ಆದರೆ ಮೀನುಗಾರರೇ ನಿಯಮ ಉಲ್ಲಂಘಿಸಿ ಕಡಲತಡಿಯ ಸಮೀಪವೇ ಬುಲ್ ಟ್ರಾಲ್ ಮೀನುಗಾರಿಕೆ ನಡೆಸಿದ ಘಟನೆ ಮಂಗಳೂರು ಸಮೀಪ ನಡೆದಿದೆ. ಕೇಂದ್ರ ಸರಕಾರ ನಿಷೇಧಿಸಿರುವ, ಬುಲ್ ಟ್ರಾಲ್ ಮೀನುಗಾರಿಕೆ ಮಂಗಳೂರು ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಮತ್ತೆ ಕಾಣಿಸಿಕೊಂಡಿದೆ.

Bull trawl fishing appeared again on the coast despite a ban

ಬಿಸ್ಮಿಲ್ಲಾ ಹೆಸರಿನ ಎರಡು ಮೀನುಗಾರಿಕಾ ದೋಣಿಗಳು ಸಮುದ್ರ ಮಧ್ಯದಲ್ಲಿ ಕಾನೂನು ಬಾಹಿರವಾಗಿ ಬುಲ್ ಟ್ರಾಲ್ ಮೀನುಗಾರಿಕೆ ನಡೆಸುತ್ತಿದ್ದಾಗ ಸ್ಥಳೀಯ ಮೀನುಗಾರರು ಆಕ್ಷೇಪಿಸಿದ್ದಾರೆ. ಅಲ್ಲದೆ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದ ಬೋಟ್ ಗಳನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದಾರೆ.

ಕರಾವಳಿಯ ಆಳ ಸಮುದ್ರದಲ್ಲಿ ಮತ್ತೆ ಕಡಲ ಮಕ್ಕಳ ಕಲರವ ಆರಂಭಕರಾವಳಿಯ ಆಳ ಸಮುದ್ರದಲ್ಲಿ ಮತ್ತೆ ಕಡಲ ಮಕ್ಕಳ ಕಲರವ ಆರಂಭ

ಎರಡು ಪರ್ಸೀನ್ ಬೋಟ್ ಮೂಲಕ ಬೃಹತ್ ಬಲೆಗಳನ್ನು ಹಾಕಿ, ಬುಲ್ ಟ್ರಾಲ್ ಮೀನುಗಾರಿಕೆ ಮಾಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಈ ರೀತಿಯ ಬುಲ್ ಟ್ರಾಲ್ ಮೀನುಗಾರಿಕೆಯಿಂದ ಮೀನಿನ ಸಂತತಿ ನಾಶವಾಗಿ ಮತ್ಸ್ಯ ಕ್ಷಾಮ ತಲೆದೋರುವ ಆತಂಕದಿಂದಾಗಿ ದೇಶಾದ್ಯಂತ ಕೇಂದ್ರ ಸರಕಾರ ಈ ಮಾದರಿ ಮೀನುಗಾರಿಕೆಗೆ ನಿಷೇಧ ವಿಧಿಸಿದೆ.

Bull trawl fishing appeared again on the coast despite a ban

ನಾಡದೋಣಿ ಮೀನುಗಾರಿಕೆಗೆ ತೆರಳಿದ ಇಬ್ಬರು ಯುವಕರು ನೀರುಪಾಲುನಾಡದೋಣಿ ಮೀನುಗಾರಿಕೆಗೆ ತೆರಳಿದ ಇಬ್ಬರು ಯುವಕರು ನೀರುಪಾಲು

ಕಳೆದ ವರ್ಷದ ನವೆಂಬರ್ ನಲ್ಲಿ ಈ ರೀತಿಯ ಮೀನುಗಾರಿಕೆಗೆ ನಿಷೇಧ ಹೇರಲಾಗಿತ್ತು. ಆದರೆ ಮಂಗಳೂರಿನ ಮೀನುಗಾರರೇ ಈ ರೀತಿಯ ಮೀನುಗಾರಿಕೆ ನಡೆಸುತ್ತಿದ್ದು, ಇತರೆ ಪರ್ಸೀನ್ ಬೋಟ್ ಮೀನುಗಾರರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Bull trawl fishing appeared again on the coast despite a ban

ಗಂಗೊಳ್ಳಿಯ ಬಲೆಗೆ ಬಿದ್ದ ಭಾರೀ ಗಾತ್ರದ ಸ್ಟಿಂಗ್ ರೇ ಮೀನುಗಳುಗಂಗೊಳ್ಳಿಯ ಬಲೆಗೆ ಬಿದ್ದ ಭಾರೀ ಗಾತ್ರದ ಸ್ಟಿಂಗ್ ರೇ ಮೀನುಗಳು

ಇಂತಹ ಮೀನುಗಾರಿಕೆ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ. ಸದ್ಯ ರಾತ್ರಿ ಹೊತ್ತಿನಲ್ಲಿ ಮಾಡುವ ಲೈಟ್ ಫಿಶಿಂಗ್ ಮತ್ತು ಬುಲ್ ಟ್ರಾಲ್ ಮೀನುಗಾರಿಕೆಗೆ ನಿಷೇಧ ಇದೆ.

English summary
Bull trawl fishing appeared again on the coast despite a ban. This type of fishing was banned in November last year. But fishermen of Mangalore are fishing like this.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X