• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಂಗಳೂರು : ಬಂಟ್ಸ್ ಹಾಸ್ಟೆಲ್ ವೃತ್ತ ಲೋಕಾರ್ಪಣೆ

By Isaac Richard , Mangalore
|

ಮಂಗಳೂರು, ಮೇ 12 : ಬಂಟರ ಯಾನೆ ನಾಡವರ ಮಾತೃ ಸಂಘದ ಶತಮಾನೋತ್ಸವ ಆರಂಭದ ಅಂಗವಾಗಿ ಪುನರ್ ನಿರ್ಮಾಣಗೊಂಡಿರುವ ಬಂಟ್ಸ್ ಹಾಸ್ಟೆಲ್ ನೂತನ ವೃತವನ್ನು ಮಂಗಳೂರು ಮಹಾನಗರ ಪಾಲಿಕೆಗೆ ಹಸ್ತಾಂತರಿಸಲಾಗಿದೆ. ರಸ್ತೆಯ ಕಾಂಕ್ರೀಟ್ ಕಾಮಗಾರಿ ಸಂದರ್ಭದಲ್ಲಿ ವೃತ್ತವನ್ನು ತೆಗೆಯಲಾಗಿತ್ತು. ಸದ್ಯ ಅದನ್ನು ಪುನರ್ ಪ್ರತಿಷ್ಠಾಪಿಸಿ ಪಾಲಿಕೆಗೆ ನೀಡಲಾಗಿದೆ.

ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆಯವರು ನೂತನ ವೃತ್ತದಲ್ಲಿ ರಾಷ್ಟ್ರಧ್ವಜಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ವೃತ್ತವನ್ನು ಉದ್ಘಾಟಿಸಿದರು. ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಮಾಲಾಡಿ ಅವರು ಎಲೆ ಅಡಕೆಯನ್ನು ಮೇಯರ್ ಮಹಾಬಲ ಮಾರ್ಲ ಅವರಿಗೆ ನೀಡುವ ಮೂಲಕ ವೃತ್ತವನ್ನು ಮಂಗಳೂರು ಪಾಲಿಕೆಗೆ ಹಸ್ತಾಂತರಿಸಿದರು.

ನೂರು ವರ್ಷದ ಹಿಂದೆ ನಿರ್ಮಾಣ ಮಾಡಿದ ಬಂಟ್ಸ್ ಹಾಸ್ಟೆಲ್ ವೃತ್ತವು ಜೀರ್ಣಾವಸ್ಥೆಯಲ್ಲಿದ್ದ ಕಾರಣ ಇಪ್ಪತ್ತು ವರ್ಷಗಳ ಹಿಂದೆ ಬಂಟರ ಮಾತೃಸಂಘವು ಈ ವೃತ್ತವನ್ನು ಪುನರ್ ನಿರ್ಮಾಣ ಮಾಡಿತ್ತು. ಆದರೆ, ರಸ್ತೆಯ ಕಾಂಕ್ರಿಟೀಕರಣ ಸಂದರ್ಭ ಈ ವೃತ್ತವನ್ನು ತೆಗೆಯಲಾಗಿತ್ತು. ಸದ್ಯ ವೃತ್ತವನ್ನು ಪುನರ್ ನಿರ್ಮಾಣ ಮಾಡಲಾಗಿದೆ.

ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲ್ , ಶಾಸಕರಾದ ಜೆ. ಆರ್. ಲೋಬೋ, ಶಕುಂತಳಾ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಜಿಲ್ಲಾಧಿಕಾರಿ ಎ. ಬಿ. ಇಬ್ರಾಹಿಂ ಮುಂತಾದವರು ಪಾಲ್ಗೊಂಡಿದ್ದರು.

ಬಂಟರ ಯಾನೆ ನಾಡವರ ಮಾತೃ ಸಂಘದ ಪರವಾಗಿ ಉಪಾಧ್ಯಕ್ಷ ಕೆಂಚನೂರು ಸೋಮಶೇಖರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಮೇಘನಾಥ ಶೆಟ್ಟಿ, ಕೋಶಾಧಿಕಾರಿ ಸಿಎ. ಕೆ. ಮನಮೋಹನ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಕಷ್ಣಪ್ರಸಾದ್ ರೈ, ಜಗನ್ನಾಥ ಶೆಟ್ಟಿ ಬಾಳ, ಜಯರಾಮ ಸಾಂತ, ಉಮೇಶ್ ರೈ ಮುಂತಾದವರು ಉಪಸ್ಥಿತರಿದ್ದರು.

English summary
Opening of the renovated Bunts Hostel Circle marked the centenary celebration of Bunts Yane Nadavara Matru Sangha, the umbrella association of Bunt community. A grand procession was taken out from the association’s premises to the Bunts Hostel Circle. Minister B. Ramanath Rai, Urban Development Minister Vinay Kumar Sorake, Mayor Mahabala Marla took part in the procession.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X