ಮಂಗಳೂರು: ಬಂಟಸಿರಿ ಕಲಾ ವೈಭವಕ್ಕೆ ಸಿದ್ಧತೆ
ಮಂಗಳೂರು ಫೆ. 6: ಸಾಮಾಜಿಕ ಕಳಕಳಿಯಿಂದ ಸಂಘಟಿತವಾಗಿರುವ ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಫೆ. 7ರಂದು ಉದ್ಘಾಟನೆಗೊಳ್ಳಲಿದೆ. ಉದ್ಘಾಟನೆ ಹಿನ್ನೆಲೆಯಲ್ಲಿ ಬಂಟಸಿರಿ ಕಲಾವೈಭವ ಕಾರ್ಯಕ್ರಮ ಸಹ ನಡೆಯಲಿದೆ.
ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಂಟ್ಸ್ ವೆಲ್ಫೇರ್ ಟ್ರಸ್ಟ್ ನ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ಸದಾನಂದ ಶೆಟ್ಟಿ, ಉದ್ಘಾಟನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಗ್ಗೆ 9ರಿಂದ ಸಂಜೆ 9.30ರವರೆಗೆ ಬಂಟಸಿರಿ ಕಲಾವೈಭವ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ. ನಾಡೋಜ ಕೈಯ್ಯಾರ ಕಿಂಞಣ್ಣ ರೈಯವರಿಗೆ ನುಡಿನಮನ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.[ಬೇಸಿಗೆಯಲ್ಲಿ ಮಂಗಳೂರು ನಗರಕ್ಕೆ ನೀರಿನ ಕೊರತೆ ಇಲ್ಲ]

ಇದೇ ವೇಳೆ ಮಾತನಾಡಿದ ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನ ಪದಾಧಿಕಾರಿಗಳಾದ ಭಾಸ್ಕರ್ ರೈ ಕುಕ್ಕುವಳ್ಳಿ, ಪ್ರದೀಪ್ ಆಳ್ವ, ಕದ್ರಿ ನವನೀತ್ ಶೆಟ್ಟಿ, ಬಂಟಸಿರಿ ಕಲಾವೈಭವದಲ್ಲಿ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸ್ಪರ್ಧೆಗಳ ಬಗ್ಗೆ ಮಾಹಿತಿ ನೀಡಿದರು.[ಮಂಗಳೂರು : ಕಟೀಲಿನ ಚಿನ್ನದ ರಥ ನೋಡಿದ್ದಿರಾ?]
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಪದಾಧಿಕಾರಿಗಳಾದ ಚಿತ್ತರಂಜನ್ ರೈ, ರಾಜಗೋಪಾಲ್ ರೈ, ದೇವಿಚರಣ್ ಶೆಟ್ಟಿ, ವಸಂತ್ ಕುಮಾರ್ ಶೆಟ್ಟಿ, ಭಾಸ್ಕರ ಅರಸ್, ಇನ್ನಿತರರು ಉಪಸ್ಥಿತರಿದ್ದರು.












Click it and Unblock the Notifications