ನಂತೂರು ಸರ್ಕಲ್‌ನಲ್ಲಿ ಬಸ್ ಅಪಘಾತ, 2 ಸಾವು
ಮಂಗಳೂರು, ನ.26 : ಮಂಗಳೂರು ನಗರದ ನಂತೂರು ಸರ್ಕಲ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, 10ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬುಧವಾರ ಬೆಳಗ್ಗೆ ಮೂಡಬಿದಿರೆಯಿಂದ ಮಂಗಳೂರಿಗೆ ಬರುತ್ತಿದ್ದ ನಿಶ್ಮಿತ ಟ್ರಾವೆಲ್ಸ್ ಬಸ್ ಮತ್ತು ಮೀನನ ಲಾರಿ ನಡುವೆ ಅಪಘಾತವಾಗಿದ್ದು, ಬಸ್ ರಸ್ತೆಯ ಮೇಲೆ ಉರುಳಿ ಬಿದ್ದಿದೆ. ಬಸ್ಸಿನ ಕ್ಲೀನರ್ ಗಣೇಶ್ ಮತ್ತು ಉಮಾನಾಥ್ ಎನ್ನುವ ಪಾಲಿಟೆಕ್ನಿಕ್ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. [ಚಿತ್ರಗಳು : ಐಸಾಕ್ ರಿಚರ್ಡ್, ಮಂಗಳೂರು]

ಕದ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಬಸ್ಸನ್ನು ಕ್ರೇನ್ ಸಹಾಯದಿಂದ ಮೇಲೆತ್ತಿ, ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಅಪಘಾತದಲ್ಲಿ 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. [ನಂತೂರು ವೃತದಲ್ಲಿ ಉರುಳಿ ಬಿದ್ದ ಲಾರಿ]

ನಂತೂರು ಸರ್ಕ್‌ಲ್‌ನಲ್ಲಿ ಪದೇ-ಪದೇ ಅಪಘಾತಗಳು ಸಂಭವಿಸುತ್ತಿದ್ದರೂ ಸಂಚಾರಿ ಪೊಲೀಸರು ಅಗತ್ಯ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ಹಿಂದೆ ಇದೇ ಸರ್ಕಲ್‌ನಲ್ಲಿ ಕೋಕಾಕೋಲಾ ಲಾರಿ, ಮತ್ತು ಕಟ್ಟಡ ನಿರ್ಮಾಣಕ್ಕೆ ಕಬ್ಬಿಣ ಸಾಗಿಸುತ್ತಿದ್ದ ಲಾರಿ ಉರುಳಿ ಬಿದ್ದಿತ್ತು. ಜೂನ್ ತಿಂಗಳಿನಲ್ಲಿ ಇದೇ ವೃತ್ತದಲ್ಲಿ ಎರಡು ಅಪಘಾತ ನಡೆದಿತ್ತು.













Click it and Unblock the Notifications