ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆ ಮುಚ್ಚಲು ಆದೇಶ

|
Google Oneindia Kannada News

ಮಂಗಳೂರು, ಆಗಸ್ಟ್ 19 : ಕೋವಿಡ್ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಲು ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆಯನ್ನು ಬಂದ್ ಮಾಡಲು ಜಿಲ್ಲಾಡಳಿತ ಆದೇಶ ನೀಡಿದೆ. ದಕ್ಷಿಣ ಕನ್ನಡದಲ್ಲಿ ಮಂಗಳವಾರ 279 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.

Recommended Video

ಸರ್ಕಾರಿ ಶಾಲೆಯಲ್ಲೊಬ್ಬ 3D ಶಿಕ್ಷಕ | Oneindia Kannada

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಈ ಮಾರುಕಟ್ಟೆ ಬಂದ್ ಮಾಡುವ ಕುರಿತು ಆದೇಶ ಹೊರಡಿಸಿದ್ದಾರೆ. ಮಾರುಕಟ್ಟೆಯಲ್ಲಿನ ವ್ಯಾಪಾರಿಗಳಿಗೆ ಬೈಕಂಪಾಡಿ ಎಪಿಎಂಸಿಯಲ್ಲಿ ವ್ಯಾಪಾರ ನಡೆಸಿ ಎಂದು ಸೂಚನೆ ನೀಡಿದ್ದಾರೆ.

ಅಂತರರಾಜ್ಯ ಸಂಚಾರಕ್ಕೆ ದಕ್ಷಿಣ ಕನ್ನಡ-ಕೇರಳ ಗಡಿ ಓಪನ್ಅಂತರರಾಜ್ಯ ಸಂಚಾರಕ್ಕೆ ದಕ್ಷಿಣ ಕನ್ನಡ-ಕೇರಳ ಗಡಿ ಓಪನ್

ಜಿಲ್ಲಾಡಳಿತ ಆದೇಶ ಪಾಲನೆ ಮಾಡದ ವ್ಯಾಪಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಆದೇಶ ಪಾಲನೆಯಾಗುವ ಕುರಿತು ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

 ಮಂಗಳೂರು; ಆಸ್ಪತ್ರೆ ಗೇಟ್ ಮುರಿದು ಕೊರೊನಾ ಸೋಂಕಿತ ಪತ್ನಿ, ಮಗು ಕರೆದೊಯ್ದ ಪತಿ ಮಂಗಳೂರು; ಆಸ್ಪತ್ರೆ ಗೇಟ್ ಮುರಿದು ಕೊರೊನಾ ಸೋಂಕಿತ ಪತ್ನಿ, ಮಗು ಕರೆದೊಯ್ದ ಪತಿ

ಮಂಗಳೂರು ಮಹಾನಗರ ಪಾಲಿಕೆ ನ್ಯಾಯಾಲಯದಲ್ಲಿ ಸೆಂಟ್ರಲ್ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಬಂದ್ ಮಾಡುವ ಕುರಿತು ದಾಖಲಿಸಿದ್ದ ದೂರನ್ನು ವಾಪಸ್ ಪಡೆದಿತ್ತು. ಈ ಹಿನ್ನಲೆಯಲ್ಲಿ ಆಗಸ್ಟ್ 13ರಂದು ವ್ಯಾಪರಿಗಳು ಮಾರುಕಟ್ಟೆಯಲ್ಲಿ ವ್ಯಾಪಾರ ಆರಂಭಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ 60 ಹುದ್ದೆಗಳಿವೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ 60 ಹುದ್ದೆಗಳಿವೆ

Business In Central Market Mangaluru Closed

ಮಾರುಕಟ್ಟೆ ಪುನಃ ಬಾಗಿಲು ತೆರೆದಿರುವುದರಿಂದ ನೂರಾರು ಜನರು ಆಗಮಿಸುವ ನಿರೀಕ್ಷೆ ಇದೆ. ಇದರಿಂದಾಗಿ ಕೋವಿಡ್ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡಲು ಕಷ್ಟವಾಗಲಿದೆ. ಆದ್ದರಿಂದ, ಮಾರುಕಟ್ಟೆ ಬಂದ್ ಮಾಡಲಾಗುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ.

ದಕ್ಷಿಣ ಕನ್ನಡದಲ್ಲಿ ಮಂಗಳವಾರ 279 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 9296ಕ್ಕೆ ಏರಿಕೆಯಾಗಿದೆ.

English summary
To maintain COVID 19 guiltiness Dakshina Kannada deputy commissioner ordered for the closure of the Central Market in Mangaluru. Merchants can continue their business at APMC yard in Baikampady.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X