• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಂಗಳೂರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ

|

ಮಂಗಳೂರು, ಡಿಸೆಂಬರ್ 20 : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಬೃಹತ್ ಹೋರಾಟ ನಡೆದಿದೆ. ಪೊಲೀಸರು ನಡೆಸಿದ ಗೋಲಿಬಾರ್‌ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಶುಕ್ರವಾರ ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ.

ಮಂಗಳೂರು ನಗರದಲ್ಲಿ ಗುರುವಾರ ನಡೆದ ಹಿಂಸಾಚಾರದ ಬಳಿಕ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇಂದು ಜನ ಮತ್ತು ವಾಹನಗಳ ಸಂಚಾರ ವಿರಳವಾಗಿದ್ದು, ಪರಿಸ್ಥಿತಿ ಹತೋಟಿಯಲ್ಲಿದೆ. ಗುರುವಾರ ಗೋಲಿಬಾರ್‌ನಲ್ಲಿ ಮೃತಪಟ್ಟ ಇಬ್ಬರ ಮರಣೋತ್ತರ ಪರೀಕ್ಷೆ ವೆನ್‌ಲಾಕ್ ಆಸ್ಪತ್ರೆಯಲ್ಲಿ ನಡೆಯಲಿದೆ.

ಸಿಎಎ ವಿರುದ್ಧ ಪ್ರತಿಭಟನೆ: ಮಂಗಳೂರು ಪೊಲೀಸರ ಗುಂಡಿಗೆ ಇಬ್ಬರು ಬಲಿ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಶುಕ್ರವಾರ ಮಧ್ಯಾಹ್ನ ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಆಂಜಿಯೋಪ್ಲಾಸ್ಟಿ ಚಿಕಿತ್ಸೆ ಪಡೆದಿರುವ ಸಿದ್ದರಾಮಯ್ಯಗೆ 15 ದಿನಗಳ ಕಾಲ ಕಡ್ಡಾಯವಾಗಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚನೆ ನೀಡಿದ್ದರು.

ಮಂಗಳೂರು ಪೊಲೀಸರ ಫೈರಿಂಗ್, ಪೊಲೀಸ್ ಆಯುಕ್ತ ಏನು ಹೇಳುತ್ತಾರೆ?

ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ; ಯಡಿಯೂರಪ್ಪ ಮನವಿ ಏನು?

12 ಗಂಟೆಗೆ ಪತ್ರಿಕಾಗೋಷ್ಠಿ

12 ಗಂಟೆಗೆ ಪತ್ರಿಕಾಗೋಷ್ಠಿ

ವೈದ್ಯರ ಸೂಚನೆಯ್ನು ಬದಿಗೊತ್ತಿ ಸಿದ್ದರಾಮಯ್ಯ ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಇದಕ್ಕೂ ಮೊದಲು ಬೆಂಗಳೂರಿನ ಸಿದ್ದರಾಮಯ್ಯ ನಿವಾಸ 'ಕಾವೇರಿ'ಯಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ.

ಸಿದ್ದರಾಮಯ್ಯ ಟ್ವೀಟ್

ಸಿದ್ದರಾಮಯ್ಯ ಟ್ವೀಟ್

ಗುರುವಾರ ಗೋಲಿಬಾರ್ ನಡೆದ ಬಳಿಕ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, "ಮೊದಲಬಾರಿ ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾದಾಗ ಇಬ್ಬರು ರೈತರು ಗುಂಡಿಗೆ ಆಹುತಿಯಾದರು, ಎರಡನೇ ಬಾರಿ ಮುಖ್ಯಮಂತ್ರಿಯಾದಾಗ ಇಬ್ಬರು ಅಮಾಯಕ ಯುವಕರು ಗುಂಡಿಗೆ ಬಲಿಯಾಗಿದ್ದಾರೆ. ಬಿಜೆಪಿ ಮೂಲತ: ರೈತ ಮತ್ತು ಯುವಜನ ವಿರೋಧಿ ಎನ್ನುವುದು ಸಾಬೀತಾಗಿದೆ" ಎಂದು ಟ್ವೀಟ್ ಮಾಡಿದ್ದರು.

ಮೊಬೈಲ್ ಇಂಟರ್‌ನೆಟ್ ಸ್ಥಗಿತ

ಮೊಬೈಲ್ ಇಂಟರ್‌ನೆಟ್ ಸ್ಥಗಿತ

ಮಂಗಳೂರು ಕಮೀಷನರೇಟ್ ವ್ಯಾಪ್ತಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿ. 19ರ ರಾತ್ರಿ 10 ಗಂಟೆಯಿಂದ 48 ಗಂಟೆಗಳ ಕಾಲ ಮೊಬೈಲ್ ಇಂಟರ್‌ ನೆಟ್ ಸೇವೆ ಸ್ಥಗಿತಗೊಳಿಸಲಾಗುತ್ತದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಜಮೀರ್ ಅಹಮದ್ ಖಾನ್ ಹೇಳಿಕೆ

ಜಮೀರ್ ಅಹಮದ್ ಖಾನ್ ಹೇಳಿಕೆ

ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿದ ಮಾಜಿ ಸಚಿವ ಜಮೀರ್ ಅಹಮದ್ ಖಾನ್, "ಸಿದ್ದರಾಮಯ್ಯ ವೈದ್ಯರ ಅನುಮತಿ ಪಡೆದು ಮಂಗಳೂರಿಗೆ ಹೊರಟಿದ್ದಾರೆ. ಅನಾಹುತ ಆಗಿದೆ ಹೋಗಲೇಬೇಕು ಎಂದು ವೈದ್ಯರಿಗೆ ಹೇಳಿದ್ದಾರೆ. ಪಕ್ಷದ ಕೆಲವು ನಾಯಕರು ಸಹ ಹೋಗುತ್ತಿದ್ದಾರೆ. ಮಧ್ಯಾಹ್ನ 2 ಗಂಟೆಗೆ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಹೋಗಲಿದ್ದೇವೆ. ಏನು ಸಂದೇಶ ಕೊಡಬೇಕೋ ಅದನ್ನು ಅಲ್ಲಿಗೆ ಹೋಗಿ ಕೊಡುತ್ತೇವೆ" ಎಂದರು.

English summary
Two killed in golibar in Mangaluru in the time of protests against the controversial Citizenship Amendment Act (CAA). Opposition leader of Karnataka Siddaramaiah will visit Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X