ಸಿದ್ಧಾರ್ಥ ಚಿತೆಗೆ ಅಗ್ನಿ ಸ್ಪರ್ಶ: ಕಣ್ಣೀರ ವಿದಾಯ, ಮಡುಗಟ್ಟಿದ ಶೋಕ
ಮಂಗಳೂರು, ಜುಲೈ 31: ಕಾಫಿ ಡೇ ಮಾಲೀಕ ವಿಜಿ ಸಿದ್ಧಾರ್ಥ ಅವರ ಮೃತದೇಹ ಹೊಯಿಗ್ ಬಜಾರ್ ಎಂಬ ಪ್ರದೇಶದ ನಧಿ ಭಾಗದಲ್ಲಿ ಪತ್ತೆಯಾಗಿದೆ.
ಸೋಮವಾರ ತಡರಾತ್ರಿಯಿಂದ ಮಂಗಳವಾರ ತಡರಾತ್ರಿವರೆಗೆ ನೇತ್ರಾವತಿ ನದಿ ತಟದಲ್ಲಿ ಶೋಧ ಕಾರ್ಯ ನಡೆಸಲಾಗಿದ್ದು, ಆ ಬಳಿಕ ಸ್ಥಗಿತಗೊಳಿಸಲಾಗಿತ್ತು. ಇಂದು ಬೆಳಗ್ಗೆ ಮತ್ತೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಈ ಮಧ್ಯೆ ಹೊಯಿಗೆ ಬಜಾರ್ ಎಂಬ ಪ್ರದೇಶದ ನದಿಭಾಗದಲ್ಲಿ ಮೃತದೇಹ ಪತ್ತೆಯಾಗಿದೆ.
ಸ್ಥಳೀಯ ಮೀನುಗಾರರು ಗಮನಿಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಒಟ್ಟಿನಲ್ಲಿ 36 ಗಂಟೆಗಳ ನಿರಂತರ ಕಾರ್ಯಾಚರಣೆಯ ಬಳಿಕ ಇದೀಗ ಸಿದ್ಧಾರ್ಥ್ ಪತ್ತೆಯಾಗಿದ್ದಾರೆ.

ಮಂಗಳಾದೇವಿ ದೇವಸ್ಥಾನದ ಹಿಂಭಾಗದಲ್ಲಿ ರಸ್ತೆಯಿದೆ. ಆ ರಸ್ತೆಯಲ್ಲಿ ಹೊಯಿಗೆ ಬಜಾರ್ ಎಂಬ ಪ್ರದೇಶವಿದೆ. ಇಲ್ಲಿ ನದಿ ಒಂದು ಕಡೆಯಿಂದ ಮಂಗಳೂರು ಬಂದರನ್ನು ತಲುಪುತ್ತದೆ. ಇನ್ನೊಂದು ಕಡೆಯಿಂದ ಸಮುದ್ರವನ್ನು ತಲುಪುತ್ತದೆ. ಈ ಪ್ರದೇಶದಲ್ಲಿ ಸಿದ್ಧಾರ್ಥ್ ಮೃತದೇಹ ಸಿಕ್ಕಿದೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಧಾವಿಸಿದ್ದಾರೆ. ಮೃತದೇಹದ ಪರಿಶೀಲನೆ ನಡೆಸಿ, ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತದೆ. ಕುಟುಂಬಸ್ಥರು, ಸಂಬಂಧಿಕರು ನಿರ್ಧಾರದಂತೆ ಮರಣೋತ್ತರ ಪರೀಕ್ಷೆ ಮುಂದಿನ ಕಾರ್ಯಗಳು ನಡೆಯಲಿವೆ ಎಂದು ನಮ್ಮ ಪ್ರತಿನಿಧಿ ತಿಳಿಸಿದ್ದಾರೆ.
ಎರಡು ಕಡೆ ಪಾರ್ಥಿಕ ಶರೀರ ದರ್ಶನಕ್ಕೆ ವ್ಯವಸ್ಥೆ, ಚಿಕ್ಕಮಗಳೂರಿನಲ್ಲಿ ಮಧ್ಯಾಹ್ನ ಅಂತ್ಯಕ್ರಿಯೆ, ಎಬಿಸಿ ಕಾಫಿ ಕ್ಯೂರಿಂಗ್,ಚೇತನಹಳ್ಳಿ ಎಸ್ಟೇಟ್‌ನಲ್ಲಿ ಅಂತಿಮ ದರ್ಶನ, ಮೆನ್‌ಲಾಕ್ ಆಸ್ಪತ್ರೆಯಲ್ಲಿ ಸಿದ್ಧಾರ್ಥ್ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.
ವೆನ್‌ಲಾಕ್ ಆಸ್ಪತ್ರೆಯಿಂದ ರಸ್ತೆ ಮೂಲಕವೇ ಚಿಕ್ಕಮಗಳೂರಿಗೆ ಸಿದ್ಧಾರ್ಥ ಮೃತದೇಹ ರವಾನೆಯಾಗಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.














Click it and Unblock the Notifications