ವಿದ್ಯಾರ್ಥಿನಿ ಸಾವು, ಕ್ಯಾಂಡಲ್ ಲೈಟ್ ಪ್ರತಿಭಟನೆ
ಮಂಗಳೂರು, ಜು. 18 : ನಿಗೂಢವಾಗಿ ಸಾವನ್ನಪ್ಪಿದ್ದ ವಿದ್ಯಾರ್ಥಿನಿ ರತ್ನಾ ಕೊಠಾರಿ ಪ್ರಕರಣದ ಬಗ್ಗೆ ತ್ವರಿತವಾಗಿ ವಿಚಾರಣೆ ನಡೆಸಬೇಕು ಎಂದು ಮಂಗಳೂರಿನ ವಿವಿಧ ವಿದ್ಯಾರ್ಥಿ ಸಂಘಟನೆಗಳು ಆಗ್ರಹಿಸಿವೆ. ಗುರುವಾರ ಸಂಜೆ ಮೋಂಬತ್ತಿ ಹಚ್ಚಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿನಿ ರತ್ನಾ ಕೊಠಾರಿ ಅಸಹಜ ಸಾವು ಪ್ರಕರಣದ ತನಿಖೆಯನ್ನು ತ್ವರಿತವಾಗಿ ಮುಗಿಸುವಂತೆ ಆಗ್ರಹಿಸಿದ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಮಂಗಳೂರು ತಾಲೂಕು ಸಮಿತಿ ವತಿಯಿಂದ ಲಾಲ್ ಬಾಗ್ ನ ಗಾಂಧಿ ಪ್ರತಿಮೆ ಮುಂಭಾಗ ಗುರುವಾರ ಸಂಜೆ ಪ್ರತಿಭಟನೆ ನಡೆಸಲಾಯಿತು. [ರತ್ನಾ ಕೊಠಾರಿ ಸಾವು ಪ್ರಕರಣ, ಪ್ರತಿಭಟನೆ]
ಉಡುಪಿ ಜಿಲ್ಲೆಯ ಶಿರೂರಿನ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿದ್ದ ರತ್ನ ಕೊಠಾರಿ ನಿಗೂಢವಾಗಿ ಕಣ್ಮರೆಯಾಗಿದ್ದರು. ಜು.12ರ ಶನಿವಾರ ಬೈಂದೂರು ಸಮೀಪದ ಥೂದಳ್ಳಿ ಸಮೀಪದ ಕಾಡಿನಲ್ಲಿ ಆಕೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಬೈಂದೂರು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಪ್ರತಿಭಟನೆಯ ಚಿತ್ರಗಳು

ರತ್ನಾ ಕೊಠಾರಿಗೆ ನ್ಯಾಯ ದೊರೆಯಬೇಕು
ಕುಂದಾಪುರದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದ ವಿದ್ಯಾರ್ಥಿನಿ ರತ್ನಾ ಕೊಠಾರಿ ಪ್ರಕರಣದ ಬಗ್ಗೆ ತ್ವರಿತವಾಗಿ ವಿಚಾರಣೆ ನಡೆಸಬೇಕು ಎಂದು ಮಂಗಳೂರಿನ ವಿವಿಧ ವಿದ್ಯಾರ್ಥಿ ಸಂಘಟನೆಗಳು ಆಗ್ರಹಿಸಿವೆ.

ಮೋಂಬತ್ತಿ ಹಚ್ಚಿ ಪ್ರತಿಭಟನೆ
ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಮಂಗಳೂರು ತಾಲೂಕು ಸಮಿತಿ ವತಿಯಿಂದ ಲಾಲ್ ಬಾಗ್ ನ ಗಾಂಧಿ ಪ್ರತಿಮೆ ಮುಂಭಾಗ ಗುರುವಾರ ಸಂಜೆ ಮೋಂಬತ್ತಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು.

ಆರೋಪಿಗಳನ್ನು ಬಂಧಿಸಲು ಒತ್ತಾಯ
ರತ್ನಾ ಕೊಠಾರಿ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ದಕ್ಷಿಣ ಕನ್ನಡದಲ್ಲಿ ವಿದ್ಯಾರ್ಥಿಗಳ ಸರಣಿ ಪ್ರತಿಭಟನೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸೇರಿದಂತೆ ವಿವಿಧ ಸಂಘಟನೆಗಳು ರತ್ನಾ ಕೊಠಾರಿ ಕೊಲೆ ಪ್ರಕರಣ ಖಂಡಿಸಿ ಸರಣಿ ಪ್ರತಿಭಟನೆಯನ್ನು ನಡೆಸುತ್ತಿವೆ.

ನಾಲ್ಕು ತಂಡಗಳನ್ನು ರಚಿಸಲಾಗಿದೆ
ರತ್ನ ಕೊಠಾರಿ ಕೊಲೆ ಪ್ರಕರಣದ ಬಗ್ಗೆ ತನಿಖೆ ನಡೆಸಲು ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಜು.12ರಂದು ಶವವಾಗಿ ಪತ್ತೆಯಾಗಿದ್ದಳು
ಬುಧವಾರ ನಿಗೂಢವಾಗಿ ನಾಪತ್ತೆಯಾಗಿದ್ದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ರತ್ನ ಕೊಠಾರಿ ಜು.12ರ ಶನಿವಾರ ಶವವಾಗಿ ಪತ್ತೆಯಾಗಿದ್ದಳು. ಕಾಣೆಯಾದ ಮೂರು ದಿನಗಳ ಬಳಿಕ ರತ್ನಾ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದೊಂದು ಅತ್ಯಾಚಾ ಮತ್ತು ಕೊಲೆ ಪ್ರಕರಣ ಎಂದು ಶಂಕಿಸಲಾಗಿದೆ.

ಕಾಲೇಜಿಗೆ ಹೋಗಿದ್ದಾಗ ನಾಪತ್ತೆಯಾಗಿದ್ದಳು
ಜು.9ರಂದು ಕಾಲೇಜಿಗೆ ಹೋಗಿದ್ದ ರತ್ನ, ಕಾಲೇಜಿಗೆ ಹಾಜರಾಗಿದ್ದಳು ಆದರೆ, ಸಂಜೆ ವೇಳೆಗೆ ನಾಪತ್ತೆಯಾಗಿದ್ದಾಳೆ ಎಂದು ಬೈಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.












Click it and Unblock the Notifications