ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"ಗ್ರಾಮ ಪಂಚಾಯತಿ ಮಟ್ಟದಲ್ಲಿಯೇ ಜಾತಿ, ಆದಾಯ ಪ್ರಮಾಣಪತ್ರ ಮತ್ತು ವಿವಾಹ ನೋಂದಣಿ''

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜನವರಿ 11: ಇನ್ಮುಂದೆ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿಯೇ ಜಾತಿ ಮತ್ತು ಆದಾಯ ಪ್ರಮಾಣಪತ್ರ ನೀಡುವ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆಯುತ್ತಿರುವ ಬಿಜೆಪಿ ಪಕ್ಷದ ಜನಸೇವಕ ಸಮಾವೇಶದಲ್ಲಿ ಮಾತನಾಡಿದ ಅವರು, ಜನನ-ಮರಣ ಪ್ರಮಾಣಪತ್ರಗಳನ್ನೂ ಗ್ರಾಮ ಪಂಚಾಯಿತಿಗಳಲ್ಲೇ ನೀಡಲಾಗುವುದು ಎಂದರು.

ಭಾರತದ 30 ಕೋಟಿ ಜನರಿಗೆ ಕೊರೊನಾವೈರಸ್ ಲಸಿಕೆ: ಪ್ರಧಾನಿ ಮೋದಿ ಭಾರತದ 30 ಕೋಟಿ ಜನರಿಗೆ ಕೊರೊನಾವೈರಸ್ ಲಸಿಕೆ: ಪ್ರಧಾನಿ ಮೋದಿ

ಕೇರಳದ ಮಾದರಿಯಲ್ಲಿ ವಿವಾಹ ನೋಂದಣಿಯನ್ನೂ ಪಂಚಾಯತಿ ಮಟ್ಟದಲ್ಲಿಯೇ ಮಾಡಲು ಚರ್ಚೆ ನಡೆಸಲಾಗುತ್ತಿದೆ ಎಂದ ಅವರು, ಪಂಚಾಯತಿ ಸದಸ್ಯರಿಗೆ ಈ ಹಿಂದೆ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಗೌರವ ಧನ ನೀಡಲು ಪ್ರಾರಂಭಿಸಿತ್ತು.

Caste and Income Certificate Will Available In The Gram Panchayat: Minister Kota Srinivas Poojary

ಇದೀಗ ಗ್ರಾ.ಪಂ ಸದಸ್ಯರ ಗೌರವಧನವು 11 ಸಾವಿರ ಇದ್ದು, ಅದನ್ನು 72 ಸಾವಿರಕ್ಕೆ ಹೆಚ್ಚಿಸಲು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಕ್ರಮ ಕೈಗೊಳ್ಳಬೇಕು. ಇದಕ್ಕೆ 100 ಕೋಟಿ ರುಪಾಯಿ ಅನುದಾನದ ಅಗತ್ಯವಿದೆ ಎಂದು ಹೇಳಿದರು.

ಮದುವೆ ಪ್ರಮಾಣ ಪತ್ರ ಪಡೆಯುವುದು ಹೇಗೆ? ಏಕೆ?ಮದುವೆ ಪ್ರಮಾಣ ಪತ್ರ ಪಡೆಯುವುದು ಹೇಗೆ? ಏಕೆ?

15ನೇ ಹಣಕಾಸು ಯೋಜನೆಯಡಿ ಗ್ರಾಮ ಪಂಚಾಯಿತಿಗಳಿಗೆ ತಲಾ 71 ಕೋಟಿ ರೂ. ಅನುದಾನ ಬರುತ್ತಿದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಗ್ರಾಮದ ಅಭಿವೃದ್ಧಿ ಮಾಡಬೇಕು, ಬಿಜೆಪಿ ಸರ್ಕಾರವು ಗ್ರಾಮಾಭಿವೃದ್ಧಿಗೆ ಆದ್ಯತೆಯನ್ನು ನೀಡುತ್ತಿದೆ ಎಂಬುದನ್ನು ಗ್ರಾಮೀಣ ಜನರಿಗೆ ತಿಳಿಸಿಕೊಡುವ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಪಕ್ಷ ಬಲವರ್ಧನೆ ಮಾಡಬೇಕು ಎಂದು ಕರೆ ನೀಡಿದರು.

English summary
Minister Kota Srinivasa Poojary said a caste and income certificate available scheme is being prepared in every Gram panchayat center in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X