ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನೇತ್ರಾವತಿ ಸೇತುವೆ ಬಳಿ ಸಿಸಿ ಟಿವಿ ಕ್ಯಾಮೆರಾ- ಶಾಸಕ ಕಾಮತ್

|
Google Oneindia Kannada News

ಮಂಗಳೂರು ಆಗಸ್ಟ್ 2: ಉದ್ಯಮಿ ಸಿದ್ಧಾರ್ಥ್ ಅವರ ಸಾವಿನ ಬಳಿಕ ಮಂಗಳೂರು- ಉಳ್ಳಾಲ ರಸ್ತೆಯಲ್ಲಿನ ನೇತ್ರಾವತಿ ಸೇತುವೆ ಹೆಚ್ಚು ಸುದ್ದಿಯಲ್ಲಿದೆ. ಇದೀಗ ನೇತ್ರಾವತಿ ಸೇತುವೆ ಬಳಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಚಿಂತನೆ ನಡೆಯುತ್ತಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಯವರೊಂದಿಗೆ ಚರ್ಚಿಸಲಾಗುವುದೆಂದು ಶಾಸಕ ಡಿ.ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗೊಳೊಂದಿಗೆ ಮಾತನಾಡಿದ ಅವರು, "ನೇತ್ರಾವತಿ ಸೇತುವೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಅಪಾಯಕಾರಿ ತಾಣವಾಗಿದೆ. ಆತ್ಮಹತ್ಯೆಯಂತಹ ಅಹಿತಕರ ಘಟನೆಗಳಿಗೆ ಇದು ನೆಲೆಯಾಗುತ್ತಿದೆ. ಸಿಸಿ ಟಿವಿಗಳನ್ನು ಅಳವಡಿಸಿದರೆ ಸೇತುವೆ ಮೇಲೆ ನಡೆದ ದುರ್ಘಟನೆಗಳನ್ನು ತಕ್ಷಣ ಪರಿಶೀಲಿಸಲು ಅನುಕೂಲವಾಗುತ್ತದೆ. ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದರಿಂದ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಸಮಯ ಮತ್ತು ಶ್ರಮ ವ್ಯರ್ಥವಾಗುವುದಿಲ್ಲ" ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

 ಸಿದ್ಧಾರ್ಥ್ ಮೃತದೇಹದ ಕುರಿತು ವ್ಯಕ್ತವಾಗಿದೆ ಹಲವು ಅನುಮಾನ ಸಿದ್ಧಾರ್ಥ್ ಮೃತದೇಹದ ಕುರಿತು ವ್ಯಕ್ತವಾಗಿದೆ ಹಲವು ಅನುಮಾನ

CC TV Camera Will Be Installed Near Netravathi Bridge

ಇಂತಹ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳು ನಾಪತ್ತೆಯಾದವರ ಮನೆಯವರಿಗೆ, ಗೆಳೆಯರಿಗೆ ಹಾಗೆಯೇ ನಾಪತ್ತೆ ಪ್ರಕರಣಗಳ ತನಿಖೆ ನಡೆಸುವ ಪೊಲೀಸ್ ಅಧಿಕಾರಿಗಳಿಗೆ ಅನುಕೂಲವಾಗುತ್ತದೆ. ಒಟ್ಟಿನಲ್ಲಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆಯಿಂದ ಪೊಲೀಸ್ ಇಲಾಖೆಗೆ ತನಿಖೆಗೆ ಸಹಕಾರಿಯಾಗುವುದನ್ನು ದೃಷ್ಟಿಯಲ್ಲಿಟ್ಟು ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

English summary
After the death of businessman Siddharth, the Netravathi Bridge on Mangalore-Ullal road is in the news. "We are planning to install a CCTV camera near the Netravathi Bridge. We will discuss this with the District Collector said vedavyas kamath.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X