ಮಂಗಳೂರಲ್ಲಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದವನ ಬಂಧನ
ಮಂಗಳೂರು, ಅಕ್ಟೋಬರ್ 23: ನಗರದ ನೀರುಮಾರ್ಗ ಪರಿಸರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೀರುಮಾರ್ಗ ಎಂಬಲ್ಲಿ ಒಳಬೈಲು ಬಳಿಯ ಕರಾವಳಿ ಇನ್ಸಿಟ್ಯೂಟ್ ಆಫ್ ಟೆಕ್ನೋಲಾಜಿ ಕಾಲೇಜು ಎದುರುಗಡೆ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ವ್ಯಕ್ತಿಯಬ್ಬ ಗಾಂಜಾ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ, ಗಾಂಜಾ ಮಾರಾಟ ಮಾಡುತ್ತಿದ್ದ

ಸ್ಥಳಿಯ ನಿವಾಸಿ ಮೊಹಮ್ಮದ್ ರಿಯಾಸ್ ಎಂಬವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತನಿಂದ 250 ಗ್ರಾಂ ಗಾಂಜಾ ಹಾಗು ಬೈಕ್ ವಶಪಡಿಸಲಾಗಿದೆ. ಬಂಧಿತ ಮೊಹಮ್ಮದ್ ರಿಯಾಸ್ ಗಾಂಜಾವನ್ನು ಸಣ್ಣ ಸಣ್ಣ ಪ್ಯಾಕೇಟ್ ಗಳನ್ನಾಗಿ ಮಾಡಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.












Click it and Unblock the Notifications