ಬಾಡಿ ಮಸಾಜ್ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ, ಮಂಗಳೂರಿನಲ್ಲಿ 3 ಯುವತಿಯರ ರಕ್ಷಣೆ
ಮಂಗಳೂರು, ಡಿಸೆಂಬರ್ 07: ಮಸಾಜ್ ಪಾರ್ಲರ್ ನಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪಾರ್ಲರ್ ಮೇಲೆ ದಾಳಿ ನಡೆಸಿ ನೊಂದ ಯುವತಿಯರನ್ನು ರಕ್ಷಣೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರು ನಗರದ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಎಸ್ ರಾವ್ ರಸ್ತೆಯ ಕಟ್ಟಡವೊಂದರಲ್ಲಿ ಬಾಡಿ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ನಗರದ ಕೆ.ಎಸ್ ರಾವ್ ರಸ್ತೆಯಲ್ಲಿರುವ ಕ್ಲಾಸಿಕ್ ಆರ್ಕೆಡ್ ಕಟ್ಟಡದಲ್ಲಿ ದೀಪಂ ಆರ್ಯುವೇಧಿಕ್ ಥೆರಫಿ ಸೆಂಟರ್ ಎಂಬ ಹೆಸರಿನ ಮಸಾಜ್ ಪಾರ್ಲರ್ ನಲ್ಲಿ ಬಾಡಿ ಮಸಾಜ್ ಹೆಸರಿನಲ್ಲಿ ಯುವತಿಯರನ್ನು ಗಿರಾಕಿಗಳಿಗೆ ಒದಗಿಸಿ ವೇಶ್ಯಾವಾಟಿಕೆಗೆ ಪ್ರೇರೇಪಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಈ ಮಸಾಜ್ ಪಾರ್ಲರ್ ನಡೆಸುತ್ತಿದ್ದ ಆರೋಪಿ ರೋಶನ್ ದಾಳಿ ಸಮಯ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.












Click it and Unblock the Notifications