ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

2009ರಲ್ಲಿ ನಡೆದ ಕೊಲೆ ಪ್ರಕರಣದ ತನಿಖೆಗೆ ಸಿಸಿಬಿಗೆ!

|
Google Oneindia Kannada News

ಮಂಗಳೂರು , ಜೂನ್ 17 : ಮಂಗಳೂರು ನಗರದ ಅಪಾರ್ಟ್‌ಮೆಂಟ್‌ನಲ್ಲಿ 2009ರಲ್ಲಿ ನಡೆದ ಕೊಲೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ. ಸಿಸಿಬಿ ಪೊಲೀಸರು ಕೊಲೆ ಕುರಿತು ಭೂಗತ ಪಾತಕಿ ರವಿ ಪೂಜಾರಿ ವಿಚಾರಣೆ ನಡೆಸಲಿದ್ದಾರೆ.

Recommended Video

History of India China border dispute | Oneindia Kannada

ಡಿಜಿ&ಐಜಿಪಿ ಪ್ರವೀಣ್ ಸೂದ್ ಕೊಲೆ ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ದಳ (ಸಿಸಿಬಿ)ಗೆ ವಹಿಸಿ ಆದೇಶ ಹೊರಡಿಸಿದ್ದಾರೆ. ಮಂಗಳೂರು ಪೊಲೀಸರು ತನಿಖೆಯನ್ನು ಸಿಸಿಬಿಗೆ ಹಸ್ತಾಂತರ ಮಾಡಿದ್ದಾರೆ.

ರವಿ ಪೂಜಾರಿ ಹೇಳಿಕೆಗೆ ಬೆಚ್ಚಿಬಿದ್ದ ಸಿಸಿಬಿ ಪೊಲೀಸರು!ರವಿ ಪೂಜಾರಿ ಹೇಳಿಕೆಗೆ ಬೆಚ್ಚಿಬಿದ್ದ ಸಿಸಿಬಿ ಪೊಲೀಸರು!

2009ರ ಏಪ್ರಿಲ್ 9ರಂದು ಮಂಗಳೂರು ನಗರದ ಅಪಾರ್ಟ್‌ಮೆಂಟ್‌ನಲ್ಲಿ ಯುವ ವಕೀಲ ನೌಶಾದ್ ಕಾಸೀಂಜಿ ಹತ್ಯೆ ನಡೆದಿತ್ತು. ಮಂಗಳೂರು ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದರು. ಈಗ ಸಿಸಿಬಿಗೆ ಪ್ರಕರಣ ಹಸ್ತಾಂತರವಾಗಿದೆ.

ಸಿಸಿಬಿ ತನಿಖೆಯಲ್ಲಿ ಹೊರಬಿದ್ದ ಬಿಜೆಪಿ ನಾಯಕನ ಹನಿಟ್ರ್ಯಾಪ್ ಕಥೆ!ಸಿಸಿಬಿ ತನಿಖೆಯಲ್ಲಿ ಹೊರಬಿದ್ದ ಬಿಜೆಪಿ ನಾಯಕನ ಹನಿಟ್ರ್ಯಾಪ್ ಕಥೆ!

CCB To Probe Lawyer Naushad Kashimji Murder Case

ನೌಶಾದ್ ಕಾಸೀಂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಆರೋಪಿಗಳನ್ನು ಹೆಸರಿಸಲಾಗಿತ್ತು. ಏಳು ಆರೋಪಿಗಳನ್ನು ಬಂಧಿಸಲಾಗಿತ್ತು. ಶಿವಪ್ರಕಾಶ್, ದೆಹಲಿಯ ರವಿ ಶುಕ್ವಾನಿ ವಿರುದ್ಧದ ಆರೋಪ ಸಾಬೀತು ಆಗದ ಕಾರಣ ಅವರು ಖುಲಾಸೆಗೊಂಡಿದ್ದರು.

ರೇಸ್‌ಕೋರ್ಸ್ ಮೇಲೆ ಸಿಸಿಬಿ ದಾಳಿ: 96 ಲಕ್ಷ ರೂ ನಗದು ಜಪ್ತಿರೇಸ್‌ಕೋರ್ಸ್ ಮೇಲೆ ಸಿಸಿಬಿ ದಾಳಿ: 96 ಲಕ್ಷ ರೂ ನಗದು ಜಪ್ತಿ

ಉಳಿದ ಐವರು ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು. ಭೂಗತ ಪಾತಕಿ ರಶೀದ್ ಮಲಬಾರಿ ಪರವಾಗಿ ನೌಶಾದ್ ಕಾಸೀಂಜಿ ವಾದಿಸಿದ್ದರು. ಈ ಕಾರಣಕ್ಕಾಗಿ ರವಿ ಪೂಜಾರಿ ಸೂಚನೆಯಂತೆ ನೌಶಾದ್ ಕಾಸೀಂಜಿ ಹತ್ಯೆ ನಡೆದಿದೆ ಎಂಬ ಆರೋಪವಿದೆ.

ಆದ್ದರಿಂದ, ಪೊಲೀಸ್ ಮಹಾ ನಿರ್ದೇಶಕರು ಪ್ರಕರಣವನ್ನು ಸಿಸಿಬಿಗೆ ವಹಿಸಿದ್ದಾರೆ. ಭೂಗತ ಪಾತಕಿ ರವಿ ಪೂಜಾರಿಯನ್ನು ನೌಶಾದ್ ಕಾಸೀಂಜಿ ಹತ್ಯೆ ಪ್ರಕರಣದ ತನಿಖೆಗಾಗಿಯೇ ಸಿಸಿಬಿ 10 ದಿನಗಳ ಕಾಲ ವಶಕ್ಕೆ ಪಡೆದಿದೆ.

English summary
DG & IGP of Karnataka Praveen Sood handover the probe of Mangaluru-based lawyer Naushad Kashimji murder case to CCB. Naushad Kashimji killed in 2009 April 9.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X