• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಷ್ಟ್ರೀಯ ಶಿಕ್ಷಣ ನೀತಿಗೆ ಸಿಎಫ್ಐ ವಿರೋಧ: ಶಿಕ್ಷಣ ಕೇಸರಿಕರಣಗೊಳಿಸುವ ಹುನ್ನಾರದ ಆರೋಪ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಆಗಸ್ಟ್ 30: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಆರಂಭಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇದರ ಪೂರ್ವಭಾವಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಉದ್ಘಾಟನಾ ಸಮಾರಂಭ ಜರುಗಿದೆ‌.

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಆದರೆ ಈ ನೀತಿ ಅನುಷ್ಠಾನಕ್ಕೆ ಮಂಗಳೂರಿನಲ್ಲೇ ವಿರೋಧ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವರು ಭಾಗವಹಿಸಿದ್ದ ಕಾರ್ಯಕ್ರಮದ ಸ್ಥಳದಲ್ಲೇ ಕ್ಯಾಂಪಸ್ ಫ್ರಂಟ್ ಆಪ್ ಇಂಡಿಯಾ (ಸಿಎಫ್ಐ) ಕಾರ್ಯಕರ್ತರು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಖಂಡಿಸಿ ಪ್ರತಿಭಟನೆ ಮಾಡಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ದೇಶದಲ್ಲೇ ಪ್ರಥಮವಾಗಿ ಕರ್ನಾಟಕ ರಾಜ್ಯದಲ್ಲಿ ಜಾರಿಗೊಳಿಸಲಾಗುತ್ತಿದೆ. ಆದರೆ ಈ ರಾಷ್ಟ್ರೀಯ ಶಿಕ್ಷಣ ನೀತಿ- 2020 ಜಾರಿಗೆ ವಿರೋಧ ವ್ಯಕ್ತವಾಗುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಮಂಗಳೂರಿನಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಮಂಗಳೂರು ಹೊರವಲಯದ ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಸಿಎಫ್ಐ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದದಲ್ಲೂ ರಾಷ್ಟ್ರೀಯ ಶಿಕ್ಷಣ ನೀತಿ- 2020ರ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ಭಾಗವಹಿಸಿದ್ದರು.

ಒಳಗಡೆ ಕಾರ್ಯಕ್ರಮ‌ ನಡೆಯುತ್ತಿದರೆ, ಹೊರಗಡೆ ಐವತ್ತಕ್ಕೂ ಹೆಚ್ಚು ಸಿಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಯತ್ನಿಸುತ್ತಿದ್ದಂತೆಯೇ ತಕ್ಷಣ ಪೊಲೀಸರು ಪ್ರತಿಭಟನಾಕಾರರನ್ನು ವಶಪಡಿಸಿಕೊಂಡಿದ್ದಾರೆ. ಇನ್ನು ಈ ಶಿಕ್ಷಣ ನೀತಿ ಬಗ್ಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರು ಸಹ ಅಸಮಾಧಾನ ಹೊರ ಹಾಕಿದ್ದಾರೆ.

ಹಾವೇರಿಯಲ್ಲಿ ಮಾತನಾಡಿರುವ ಸಭಾಪತಿ ಬಸವರಾಜ್ ಹೊರಟ್ಟಿ, "ನಮ್ಮಲ್ಲಿ ಸರ್ಕಾರಗಳು ಬದಲಾದಂತೆ ಶಿಕ್ಷಣ ನೀತಿಗಳು ಬದಲಾಗುತ್ತವೆ. ಇದರಿಂದ ಶಿಕ್ಷಣಕ್ಕೆ ತೊಂದರೆ ಆಗುತ್ತದೆ," ಎಂದು ಹೇಳಿದ್ದಾರೆ.

"ಯಾವುದೇ ಚರ್ಚೆಯನ್ನು ನಡೆಸದೇ, ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಸಾಧಕ- ಭಾದಕ ತಿಳಿಸದೇ ಜಾರಿಗೊಳಿಸಲಾಗುತ್ತಿದೆ ಎಂಬುದು ವಿರೋಧ ಮಾಡುತ್ತಿರುವವರ ಆರೋಪವಾಗಿದೆ. ಜೊತೆಗೆ ಗ್ರಾಮೀಣ ಶಿಕ್ಷಣಕ್ಕೆ ತೊಂದರೆ ಉಂಟಾಗುತ್ತದೆ. ಬಡ- ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಇದರಿಂದ ಶಿಕ್ಷಣ ಪಡೆಯುವುದು ಕಷ್ಟವಾಗುತ್ತದೆ. ಹೊಸ ಶಿಕ್ಷಣ ನೀತಿ ಮೌಢ್ಯತೆಯನ್ನು ತರುತ್ತದೆ ಮತ್ತು ಶಿಕ್ಷಣವನ್ನು ಕೇಸರಿಕರಣಗೊಳಿಸುತ್ತಿರುವ ಹುನ್ನಾರ ಮಾಡಲಾಗುತ್ತಿದೆ," ಎಂದು ಪ್ರತಿಭಟನಾಕಾರರು ಆರೋಪ ಮಾಡಿದ್ದಾರೆ.

ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ, "ಆತುರದಲ್ಲಿ ಈ ಶಿಕ್ಷಣ ನೀತಿ ಅನುಷ್ಠಾನಗೊಳಿಸಲಾಗಿಲ್ಲ. ಶಿಕ್ಷಣ ಕ್ಷೇತ್ರದ ಮೂಲತತ್ವಗಳಲ್ಲಿ ಸುಧಾರಣೆ ಮಾಡಲಾಗುತ್ತಿದೆ. ಕಲಾ ವಿದ್ಯಾರ್ಥಿಗಳಿಗೆ ಹೆಚ್ಚಿನ ಆಯ್ಕೆಗಳನ್ನು ನೀಡಲಾಗಿದೆ. ಯಾವುದೇ ವಿದ್ಯಾರ್ಥಿಗಳ ವಿರುದ್ಧವಾಗಿರುವಂತಹದ್ದು ಏನೂ ಇಲ್ಲ ಎಂದು ಹೇಳಿದ್ದಾರೆ. ಅಂತಹುದು ಏನಾದರೂ ವಿರುದ್ಧವಾದ ಅಂಶಗಳಿದ್ದರೆ ತೋರಿಸಿ," ಎಂದು ವಿರೋಧಿಸುವವರಿಗೆ ಸವಾಲು ಹಾಕಿದ್ದಾರೆ.

ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದಲ್ಲಿ ಭಾರೀ ಭದ್ರತೆಯ ನಡುವೆಯು ಸಿಎಫ್ಐ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ಮಾಡಿರುವುದು ಭದ್ರತಾ ವೈಫಲ್ಯ ಎಂಬ ದೂರುಗಳೂ ಕೇಳಿಬಂದಿವೆ.

English summary
NEP 2020: Inauguration function of the National Education Policy at Mangalore University. CFI opposed to NEP 2020 says BJP planning to Saffronise.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X