ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಕುರಿತು ಬಸವರಾಜ ಬೊಮ್ಮಾಯಿ ಹೇಳಿದ್ದು ಹೀಗೆ
ಮಂಗಳೂರು, ಸೆಪ್ಟೆಂಬರ್, 14: ಹಿಂದೂ ಮುಖಂಡೆ ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ಕುರಿತು ಮಂಗಳೂರಿನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದ್ದು, ಚೈತ್ರಾ ಕುಂದಾಪುರ ಕೇಸ್‌ನ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು, ಯಾರೇ ಆರೋಪಿಗಳು ಇದ್ದರೂ ಅವರಿಗೆ ಉಗ್ರ ಶಿಕ್ಷೆ ಆಗಲಿ ಎಂದು ಹೇಳಿದರು.

ಬರೀ ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು. ಟಕೆಟ್ ಕೊಡಿಸುತ್ತೇವೆ ಅಂತಾ ಹಣ ಪಡೆದಿರುವುದನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಬಿಜೆಪಿಗೂ ಈ ಡೀಲ್‌ಗೂ ಯಾವುದೇ ಸಂಬಂಧ ಇಲ್ಲ. ತನಿಖೆ ಆಗಲಿ, ದೊಡ್ಡ ದೊಡ್ಡ ಹೆಸರನ್ನು ಅಪರಾಧಿ ಸ್ಥಾನದಲ್ಲಿ ಇದ್ದವರು ಹೇಳುತ್ತಾರೆ ಎಂದು ಮಂಗಳೂರಿನಲ್ಲಿ ಬಸವರಾಜ ಬೊಮ್ಮಾಯಿ ಹೇಳಿದರು.












Click it and Unblock the Notifications