ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪುರಾಣ ಪ್ರಸಿದ್ಧ ಅನಂತೇಶ್ವರ ದೇವಾಲಯದಲ್ಲಿ ಚಂಪಾಷಷ್ಠಿ ‌ ಉತ್ಸವಕ್ಕೆ ಸಾಕ್ಷಿಯಾದ ಲಕ್ಷಾಂತರ ಜನ

|
Google Oneindia Kannada News

ಮಂಗಳೂರು, ಡಿಸೆಂಬರ್ 14: ತುಳುನಾಡಿನಲ್ಲಿ ಹಿಂದಿನಿಂದಲೂ ನಾಗ ದೇವರ ಆರಾಧನೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಗಡಿನಾಡ ಪ್ರದೇಶ ಕೇರಳದ ಕಾಸರಗೋಡಿನ ಶ್ರೀ ಕ್ಷೇತ್ರ ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ಸಂಪನ್ನಗೊಂಡಿದೆ.

ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ‌ಉತ್ಸವ ಸಂಪನ್ನನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ‌ಉತ್ಸವ ಸಂಪನ್ನ

ದೇವಳದ ರಥಬೀದಿಯಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ಸಂಭ್ರಮ ನಡೆಯಿತು. ಅನಂತೇಶ್ವರ ದೇವಾಲಯದಲ್ಲಿ ಸಾವಿರಾರು ಭಕ್ತಾದಿಗಳು ಶ್ರದ್ಧಾ ಭಕ್ತಿಯಿಂದ ಚಂಪಾಷಷ್ಠಿ ಆಚರಿಸಿದರು. ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

 400 ವರ್ಷ ಹಳೆಯ ಬ್ರಹ್ಮರಥಕ್ಕೆ ಇದು ಕೊನೆಯ ಚಂಪಾಷಷ್ಠಿ 400 ವರ್ಷ ಹಳೆಯ ಬ್ರಹ್ಮರಥಕ್ಕೆ ಇದು ಕೊನೆಯ ಚಂಪಾಷಷ್ಠಿ

ಕೋಟ್ಯಾಂತರ ಭಕ್ತರ ಆರಾಧ್ಯದೈವ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬ್ರಹ್ಮರಥದಲ್ಲಿ ರಥಾರೂಡನಾಗಿ ಭಕ್ತರಿಗೆ ದರ್ಶನ ನೀಡಿದ್ದು, ಲಕ್ಷಾಂತರ ಭಕ್ತರು ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ. ಮುಂಜಾನೆ ಶ್ರೀ ದೇವಳದಲ್ಲಿ ಪಂಚಾಮೃತ , ಕ್ಷೀರಾಭಿಷೇಕ, ಶತ ಕಲಶಾಭಿಷೇಕಗಳು ದೇವಳದಲ್ಲಿ ನೆರವೇರಿದವು.

Champa shasti Rathostsava in Anantheswara temple

ಬಳಿಕ ಸಾಯಂಕಾಲ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬೆಳ್ಳಿ ಪಲ್ಲಕಿಯಲ್ಲಿ ಭುಜ ಸೇವೆಯ ಮೂಲಕ ರಥಾರೂಢವಾಗಿದ್ದು ವೈಭವ ಪೂರ್ಣವಾಗಿ ತೇರು ಉತ್ಸವ ನಡೆಯಿತು. ದೇವಸ್ಥಾನದ ಎದುರಿನ ರಥಬೀದಿಯಲ್ಲಿ ಅಸಂಖ್ಯಾತ ಭಕ್ತರಿಗೆ ದರ್ಶನ ನೀಡಿದ್ದಾನೆ. ಲಕ್ಷಾಂತರ ಮಂದಿ ಭಕ್ತರು ಸುಬ್ರಹ್ಮಣ್ಯನ ಐತಿಹಾಸಿಕ ವಾರ್ಷಿಕ ಉತ್ಸವಕ್ಕೆ ಸಾಕ್ಷಿಯಾಗಿದ್ದಾರೆ.

ಪುರಾಣ ಪ್ರಸಿದ್ಧ ಈ ಅನಂತೇಶ್ವರ ದೇವಾಲಯಕ್ಕೆ ಚಂಪಾಷಷ್ಠಿ ಉತ್ಸವದ ಹಿನ್ನೆಲೆಯಲ್ಲಿ ಮಂಗಳೂರು, ಉಡುಪಿ ,ಕುಂದಾಪುರ , ಪುತ್ತೂರು , ಹಾಸನ, ಮಡಿಕೇರಿ, ಮುಂಬೈ , ಬೆಂಗಳೂರು , ಚೆನೈ ಮುಂತಾದ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.

English summary
Champa shasti celebration in Mangeshwara Anantheshwara temple at Kasaragod.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X