ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಏಪ್ರಿಲ್ 13 ರ ಮೋದಿ ಕಾರ್ಯಕ್ರಮಕ್ಕೆ ಮಂಗಳೂರಿನಲ್ಲಿ ಚಪ್ಪರ ಮುಹೂರ್ತ

|
Google Oneindia Kannada News

ಮಂಗಳೂರು, ಏಪ್ರಿಲ್ 06: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಪ್ರಧಾನಿ ಮೋದಿ ಇದೇ ಏಪ್ರಿಲ್ 13 ರಂದು ಮಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿರಣೋತ್ಸಾಹ ಹೆಚ್ಚಿದೆ.

ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ಏಪ್ರಿಲ್ 13 ರಂದು ಬೃಹತ್ ಸಮವೇಶವನ್ನು ಉದ್ಧೇಶಿಸಿ ಮಾತನಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಾವೇಶಕ್ಕಾಗಿ ಇಂದು ಚಪ್ಪರ ಮುಹೂರ್ತ ನೆರವೇರಿಸಲಾಯಿತು.

ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮೋದಿ ಅಲೆಯಿದೆ ಎಂದ ಜನಾರ್ದನ ಪೂಜಾರಿದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮೋದಿ ಅಲೆಯಿದೆ ಎಂದ ಜನಾರ್ದನ ಪೂಜಾರಿ

ನಗರದ ಕೇಂದ್ರ ಮೈದಾನದಲ್ಲಿ‌ ಬಿಜೆಪಿ ವತಿ ಯಿಂದ ಚಪ್ಪರ ಮುಹೂರ್ತ ನೆರವೇರಿಸಲಾಯಿತು. ಮಾಜಿ ಉಪಮಖ್ಯಮಂತ್ರಿ ಆರ್ ಅಶೋಕ್ ಚಪ್ಪರ ಮುಹೂರ್ತ ನೆರವೇರಿಸಿದರು. ಏಪ್ರಿಲ್ 13 ರಂದು ನಡೆಯಲಿರುವ ಐತಿಹಾಸಿಕ ಸಮಾವೇಶಕ್ಕೆ ಬಿಜೆಪಿ ಭರದ ಸಿದ್ಧತೆ ಆರಂಭಿಸಿದೆ.

Chappara Muhurtha for Modi massive rally in Mangaluru

ಈ ಸಮಾವೇಶಕ್ಕೆ ಎರಡು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಜನ ಸೇರಿಸುವ ನಿರೀಕ್ಷೆ ಹೊಂದಲಾಗಿದೆ. ಇಂದು ನಡೆದ ಚಪ್ಪರ ಮುಹೂರ್ತ ಕಾರ್ಯಕ್ರಮ ಸಂದರ್ಭದಲ್ಲಿ ಸಂಸದ ಹಾಗು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್,ಕಾರ್ಕಳ ಶಾಸಕ ಸುನೀಲ್ ಕುಮಾರ್., ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ ಭರತ್ ಶೆಟ್ಟಿ ಸೇರಿದಂತೆ ಇತರ ಬಿಜೆಪಿ ಮುಖಂಡರ ಉಪಸ್ಥಿತಿರಿದ್ದರು.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನ ಸಭಾ ಕ್ಷೇತ್ರಗಳ 1861 ಬೂತ್‌ಗಳಲ್ಲಿ ನಾಳೆಯಿಂದ ಅಂದರೆ ಏಪ್ರಿಲ್ 7 ಮತ್ತು 14ರಂದು ಬಿಜೆಪಿ ಮಹಾ ಸಂಪರ್ಕ ಅಭಿಯಾನ ನಡೆಸಲಿದೆ. ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್, ಶಾಸಕರು ಸಹಿತ ಪಕ್ಷದ ಎಲ್ಲ ನಾಯಕರು ವಿವಿಧ ಬೂತ್‌ ಮಟ್ಟದಲ್ಲಿ ನಡೆಯುವ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ.

English summary
PM Narendra Modi going to visit Mangaluru on April13. Modi will Address huge Conference in Mangaluru. On behalf of this program Chappara Muhurtha has conducted by Former DCM R Ashok.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X