ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಚಿಕ್ಕಮಗಳೂರು ಜಿಲ್ಲೆ ನನಗೇನೂ ಹೊಸದಲ್ಲ'

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜನವರಿ 18 : 'ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸುವುದು ಮುಖ್ಯಮಂತ್ರಿಗಳ ಪರಮಾಧಿಕಾರ. ಚಿಕ್ಕಮಗಳೂರು ಜಿಲ್ಲೆ ನನಗೇನೂ ಹೊಸದಲ್ಲ. ಮುಖ್ಯಮಂತ್ರಿಗಳು ನೀಡಿದ ಹೊಣೆಯನ್ನು ಉತ್ತಮವಾಗಿ ನಿಭಾಯಿಸುತ್ತೇನೆ' ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದ್ದಾರೆ.

ಪರಮೇಶ್ವರ ಅವರು ಸಿದ್ದರಾಮಯ್ಯ ಸಂಪುಟ ಸೇರುವಾಗ ತುಮಕೂರು ಜಿಲ್ಲಾ ಉಸ್ತುವಾರಿಗಾಗಿ ಬೇಡಿಕೆ ಇಟ್ಟಿದ್ದರು. ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ಬಳಿ ತುಮಕೂರು ಜಿಲ್ಲಾ ಉಸ್ತುವಾರಿ ಇದ್ದು, ಅದನ್ನು ಬದಲಾವಣೆ ಮಾಡದ ಸಿದ್ದರಾಮಯ್ಯ ಅವರು ಚಿಕ್ಕಮಗಳೂರು ಉಸ್ತುವಾರಿಯನ್ನು ಪರಮೇಶ್ವರ ಅವರಿಗೆ ನೀಡಿದ್ದರು. [ಚಿಕ್ಕಮಗಳೂರು ಜಿಲ್ಲೆಗೆ ಹೊಸ ಉಸ್ತುವಾರಿ ಸಚಿವರು]

Parameshwara

ತುಮಕೂರು ಜಿಲ್ಲೆಯವರಾದ ಪರಮೇಶ್ವರ ಅವರು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ವಹಿಸಿದ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಮಂಗಳೂರಿನಲ್ಲಿ ಭಾನುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. [ಜಿಲ್ಲಾ ಉಸ್ತುವಾರಿ ಸಚಿವರು ಅದಲು ಬದಲು]

'ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸುವುದು ಮುಖ್ಯಮಂತ್ರಿಗಳ ಪರಮಾಧಿಕಾರ. ಚಿಕ್ಕಮಗಳೂರು ಜಿಲ್ಲೆ ನನಗೇನೂ ಹೊಸದಲ್ಲ. ನನಗೆ ನೀಡಿದ ಈ ಹೊಣೆಯನ್ನು ನಿಭಾಯಿಸುತ್ತೇನೆ. ಅಲ್ಲದೆ, ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆಯನ್ನೂ ಎದುರಿಸುತ್ತೇನೆ' ಎಂದು ಪರಮೇಶ್ವರ ಹೇಳಿದ್ದಾರೆ. [ಜಿಲ್ಲಾ ಉಸ್ತುವಾರಿ ಸಚಿವರ ಸಮಗ್ರ ಪಟ್ಟಿ]

ಹೇಳಿಕೆಗೆ ಮಹತ್ವ ಕೊಡಬೇಕಿಲ್ಲ : 'ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳುಗಾರ' ಎಂಬ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿಕೆಗೆ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿರುವ ಪರಮೇಶ್ವರ ಅವರು, 'ಪ್ರತಿಪಕ್ಷ ನಾಯಕರು ನಮಗೆ ಶ್ಲಾಘನೆಯ ಪ್ರಶಸ್ತಿ ನೀಡುತ್ತಾರೆ ಎಂಬ ನಿರೀಕ್ಷೆಯಲ್ಲಿಲ್ಲ' ಎಂದು ತಿರುಗೇಟು ಕೊಟ್ಟಿದ್ದಾರೆ.

'ಕೆ.ಎಸ್.ಈಶ್ವರಪ್ಪ, ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್ ಅವರ ಇತ್ತೀಚಿನ ಹೇಳಿಕೆಗಳು ಹಾಸ್ಯಾಸ್ಪದವಾಗಿವೆ. ಅವರ ಎಲ್ಲ ಹೇಳಿಕೆಗಳಿಗೆ ಮಹತ್ವ ಕೊಡಬೇಕಿಲ್ಲ' ಎಂದು ಪರಮೇಶ್ವರ ಅವರು ತಿಳಿಸಿದ್ದಾರೆ.

English summary
Home minister Dr. G. Parameshwara said, ' Chief minister has full authority to name the district in-charge minister. Chikkamagaluru district is not new to me. I will do my best to fulfill the responsibility given to me by the CM'. Recently CM Siddaramaiah allotted Chikkamagaluru district in-charge post to Parameshwara.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X