ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೀದಿ ಕಾಳಗವಾಗಿ ಮಾರ್ಪಟ್ಟ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವಿವಾದ

By ಮಂಗಳೂರು ಪ್ರತಿನಿಧಿ
|
Google Oneindia Kannada News

Recommended Video

ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ವಿವಾದ ಬೀದಿ ಕಾಳಗವಾಗಿ ಮಾರ್ಪಾಡಾಯ್ತು | Oneindia Kannada

ಮಂಗಳೂರು, ಅಕ್ಟೋಬರ್ 25: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಸಂಪುಟ ನರಸಿಂಹ ಮಠದ ಮಧ್ಯದ ವಿವಾದ ಇದೀಗ ಎರಡು ತಂಡಗಳ ನಡುವೆ ಬೀದಿ ಕಾಳಗ ನಡೆಯುವವರೆಗೂ ಬಂದು ಮುಟ್ಟಿದೆ.

ಕುಕ್ಕೆ ಸುಬ್ರಹ್ಮಣ್ಯ, ಇದೇನು ನಿನ್ನ ಕ್ಷೇತ್ರದಲ್ಲಿ ಭುಗಿಲೆದ್ದಿರುವ ವಿವಾದ?ಕುಕ್ಕೆ ಸುಬ್ರಹ್ಮಣ್ಯ, ಇದೇನು ನಿನ್ನ ಕ್ಷೇತ್ರದಲ್ಲಿ ಭುಗಿಲೆದ್ದಿರುವ ವಿವಾದ?

ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಠ ಮತ್ತು ದೇವಸ್ಥಾನ ಮಧ್ಯದ ಸಂಘರ್ಷ ಹಿಂಸೆಗೆ ತಿರುಗಿದೆ. ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ಸರ್ಪ ಸಂಸ್ಕಾರ ಹಾಗೂ ಆಶ್ಲೇಷ ಬಲಿ ಪೂಜೆಯ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಎರಡು ಗುಂಪುಗಳ ನಡುವೆ ವೈಮನಸ್ಯ ಮೂಡಿಸಿದೆ.

ಕುಕ್ಕೆಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ: ಇತಿಹಾಸ, ಆಚರಣೆ ಮಹತ್ವ ಕುಕ್ಕೆಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ: ಇತಿಹಾಸ, ಆಚರಣೆ ಮಹತ್ವ

ಕುಕ್ಕೆ ವಿವಾದ ಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಹಾಗೂ ಸುಳ್ಯ ತಾಲೂಕು ಹಿಂದೂ ಜಾಗರಣ ವೇದಿಕೆ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಪಂಜ ನಡುವೆ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದ್ದ ವಾದ-ವಿವಾದ ಈಗ ಬೀದಿ ಕಾಳಗವಾಗಿ ಪರಿವರ್ತನೆಗೊಂಡಿದೆ.

Clash between two groups in Kukke Subrahmanya

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ ಚೈತ್ರಾ ಕುಂದಾಪುರ ಹಾಗೂ ಆಕೆಯ ತಂಡ ಸುಬ್ರಹ್ಮಣ್ಯಕ್ಕೆ ಆಗಮಿಸಿ, ಹಿಂದೂ ಜಾಗರಣಾ ವೇದಿಕೆ ಮುಖಂಡ ಗುರುಪ್ರಸಾದ್ ಪಂಜ ಅವರ ಅಂಗಡಿಗೆ ನುಗ್ಗಿದೆ. ಈ ಸಂದರ್ಭದಲ್ಲಿ ಇತ್ತಂಡಗಳ ನಡುವೆ ಘರ್ಷಣೆ ಸಂಭವಿಸಿದೆ. ಘಟನೆಯಲ್ಲಿ ಗುರುಪ್ರಸಾದ್ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆಗೊಳಗಾದ ಗುರುಪ್ರಸಾದ್ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚೈತ್ರಾ ಕುಂದಾಪುರ ಮತ್ತು ಇತರ 8 ಜನರನ್ನು ಸುಬ್ರಹ್ಮಣ್ಯ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ಎರಡೂ ಗುಂಪುಗಳನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರವನ್ನೂ ನಡೆಸಿದ್ದಾರೆ.

English summary
There was a clash between two pro Hindu organisation in Kukke Subrahmanya on Wednesday. This is the issue relating to temple. Police registered complaint against Chaitra Kundapura and other 8 people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X