ಮಂಗ್ಳೂರಲ್ಲಿ ಗೃಹ ಸಚಿವರ ಎದುರೇ ಕೈ ಮಿಲಾಯಿಸಿದ ಕಾಂಗ್ರೆಸ್ ನಾಯಕರು

ಮಂಗಳೂರು, ಸೆಪ್ಟೆಂಬರ್ 20: ರಾಜ್ಯ ಗೃಹ ಸಚಿವರ ಎದುರೇ ಕಾಂಗ್ರೆಸ್ ಮುಖಂಡರ ಮಾರಾಮಾರಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನಗರದ ಕಾಂಗ್ರೆಸ್ ಭವನದಲ್ಲಿ ಘಟನೆ ನಡೆದಿದ್ದು, ರಾಜ್ಯದ ಕಾನೂನು ಸುವ್ಯವಸ್ಥೆಯ ಜವಾಬ್ದಾರಿ ಹೊತ್ತಿರುವ ಗೃಹ ಸಚಿವ ರಾಮಲಿಂಗಾರೆಡ್ಡಿ ಎದುರೇ ಕಾಂಗ್ರೆಸ್ ಮುಖಂಡರು ಕೈ ಕೈ ಮಿಲಾಯಿಸಿದ್ದು ಮುಜುಗರಕ್ಕೆ ಕಾರಣವಾಗಿದೆ.

Clash erupts between Mangaluru Congress leaders in front of Home Minister Ramalinga Reddy

ಗೃಹ ಸಚಿವ ರಾಮಲಿಂಗ ರೆಡ್ಡಿ ಅವರು ಬುಧವಾರ ಮಂಗಳೂರಿಗೆ ಆಗಮಿಸಿದ್ದರು. ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಬಳಿಕ ಮಧ್ಯಾಹ್ನ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದರು. ಅಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಏರ್ಪಡಿಸಲಾಗಿತ್ತು.

ಈ ಸಭೆಯಲ್ಲಿ ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ಸಭಾ ವೇದಿಕೆಯ ಮೇಲೆ ಆಸೀನರಾಗಿದ್ದು, ಪಂಚಾಯಿತಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಕೆರಳಿಸಿದೆ. ಆಗ ವಿಜಯಕುಮಾರ್ ಶೆಟ್ಟಿ ಅವರನ್ನು ಏಕ ವಚನದಲ್ಲಿ ನಿಂದಿಸಿದ್ದಾರೆ. ಸಭೆ ಮುಗಿದ ಬಳಿಕ ಗೃಹ ಸಚಿವ ರಾಮಲಿಂಗಾರೆಡ್ಡಿ ಎದುರಲ್ಲೇ ವಿಜಯಕುಮಾರ್ ಶೆಟ್ಟಿಯವರನ್ನು ಚಂದ್ರಪ್ರಕಾಶ್ ಶೆಟ್ಟಿ ತುಂಬೆ ತರಾಟೆಗೆ ತೆಗೆದುಕೊಂಡು, ಹಲ್ಲೆ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷ ಹಾಗೂ ರೈ ಅವರ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡಿ, ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವ ನೀವು ಪಕ್ಷದ ಸಭೆ ಹಾಗೂ ಕಚೇರಿಗೆ ಬರುವ ಅಗತ್ಯ ಏನಿದೆ, ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದು ಚಂದ್ರಪ್ರಕಾಶ್ ಶೆಟ್ಟಿ ತುಂಬೆಯವರು ವಿಜಯಕುಮಾರ್ ಶೆಟ್ಟಿಯವರನ್ನು ತರಾಟೆಗೆ ತೆಗೆದುಕೊಂಡು, ಹಲ್ಲೆ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+