ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸತೀಶ್ ಜಾರಕಿಹೊಳಿ ಅರೆ ಬರೆ ಓದಿದ ವ್ಯಕ್ತಿ ಎಂದ ಸಿಎಂ ಬೊಮ್ಮಾಯಿ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಉಡುಪಿ, ನವೆಂಬರ್‌ 8: ಹಿಂದೂ ಪದದ ಬಗ್ಗೆ ಕಾಂಗ್ರೆಸ್‌ ಮುಖಂಡ ಸತೀಶ್ ಜಾರಕಿಹೊಳಿ ನೀಡಿರುವ ವಿವಾದಾತ್ಮಕ ಹೇಳಿಕೆಯನ್ನು ಕಾಂಗ್ರೆಸ್‌ ಪಕ್ಷದ ಮುಖಂಡರು ಖಂಡಿಸಿದ್ದಾರೆ. ಇನ್ನು ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ಮುಖಂಡರು ಗರಂ ಆಗಿದ್ದಾರೆ.

ಉಡುಪಿಯಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸತೀಶ್ ಜಾರಕಿಹೊಳಿ ಅರೆ ಬರೆ ಓದಿದ ವ್ಯಕ್ತಿ. ಯಾವುದೇ ಆಳವಾದ ಅಧ್ಯಯನ ಇಲ್ಲದೇ ಮಾತನಾಡಿದ್ದಾರೆ. ಸತೀಶ್ ಜಾರಕಿಹೊಳಿ ಅಲ್ಪಸಂಖ್ಯಾತ ಮತ ಬರುತ್ತದೆ ಎಂಬ ಭ್ರಮೆಯಲ್ಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

Recommended Video

CM Bommai: ಕರ್ನಾಟಕದಲ್ಲಿ ಕಾಂಗ್ರೆಸ್ ಮೂಲೆಗುಂಪಾಗೋದಕ್ಕೆ Sathish Jarakiholiಯ ಈ ಹೇಳಿಕೆಯೇ ಸಾಕು | Oneindia

ಜಾರಕಿಹೊಳಿ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್‌ಜಾರಕಿಹೊಳಿ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್‌

ಇನ್ನು ಸತೀಶ್ ಜಾರಕಿಹೊಳಿ ಹೇಳಿಕೆಯಿಂದ ಭಾರತದ ಭಾವನೆಗೆ ಧಕ್ಕೆಯಾಗಿದೆ. ಕ್ಷೋಭೆ ಭರಿತ ಹೇಳಿಕೆ ಎಂಬುವುದು ದೇಶ ದ್ರೋಹದ ಕೆಲಸ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.u

ಸತೀಶ್ ತಮ್ಮ ಹೇಳಿಕೆಯ ಬಗ್ಗೆ ಇನ್ನೂ ಸಮರ್ಥನೆ ಮಾಡುತ್ತಾರೆ

ಸತೀಶ್ ತಮ್ಮ ಹೇಳಿಕೆಯ ಬಗ್ಗೆ ಇನ್ನೂ ಸಮರ್ಥನೆ ಮಾಡುತ್ತಾರೆ

ಸತೀಶ್ ಜಾರಕಿಹೊಳಿ ಮಾತಿಗೆ ರಾಹುಲ್ ಗಾಂಧಿ, ಸಿದ್ದರಾಮಯ್ಯ ಮೌನ ಯಾಕೆ..? ನಿಮ್ಮ ಮೌನ ಸತೀಶ್ ಜಾರಕಿಹೊಳಿ ಮಾತಿಗೆ ಸಮ್ಮತಿನಾ..? ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆಯ ಬಗ್ಗೆ ಇನ್ನೂ ಸಮರ್ಥನೆ ಮಾಡಿಕೊಳ್ಳುತ್ತಾರೆ. ಹುಳಿ ಹಿಂಡುವ ಕೆಲಸವನ್ನು ಮಾಡುತ್ತಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಅಲ್ಪ ಸ್ಪಲ್ಪ ಉಳಿದಿದೆ. ನೆಪ ಮಾತ್ರದ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ ಜನ ಮೂಲೆಯ ಸ್ಥಾನ ತೋರಿಸುತ್ತಾರೆ. ಇದೊಂದು ಪೂರ್ವಗ್ರಹ ಹೇಳಿಕೆ ಮತ್ತು ಯೋಜನಾ ಬದ್ಧವಾದ ಹೇಳಿಕೆ. ಹಿಂದೂಗಳ ಮನಸ್ಸಿಗೆ ಘಾಸಿಯಾಗುವ ಹೇಳಿಕೆ ನೀಡಿದ್ದಾರೆ. ರಾಜ್ಯದ ಜನ ಒಕ್ಕೊರಲಿನಿಂದ ಇದನ್ನು ವಿರೋಧಿಸಬೇಕು ಎಂದು ಬೊಮ್ಮಾಯಿ ಹೇಳಿದ್ದಾರೆ.

'ಹಿಂದೂ' ಪದದ ಹೇಳಿಕೆ ಕುರಿತು ಸತೀಶ್ ಜಾರಕಿಹೊಳಿ ಸ್ಪಷ್ಟನೆ'ಹಿಂದೂ' ಪದದ ಹೇಳಿಕೆ ಕುರಿತು ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಸತೀಶ್ ಜಾರಕಿಹೊಳಿ ಗೌರವದಿಂದ ನಡೆದುಕೊಳ್ಳಬೇಕು

ಸತೀಶ್ ಜಾರಕಿಹೊಳಿ ಗೌರವದಿಂದ ನಡೆದುಕೊಳ್ಳಬೇಕು

ಸತೀಶ್ ಜಾರಕಿಹೊಳಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಯಡಿಯೂರಪ್ಪ, ಹಿಂದೂಗಳಿಗೆ ಅಪಮಾನ ಮಾಡುವ ರೀತಿಯಲ್ಲಿ ಮಾತನಾಡಿದ್ದು ಖಂಡನೀಯ. ಕಾಂಗ್ರೆಸ್‌ನವರು ಇದನ್ನು ಖಂಡಿಸಿದ್ದಾರೆ. ಕಾಂಗ್ರೆಸ್ ಕೇವಲ ಖಂಡನೆ ಮಾಡಿದರೆ ಸಾಲುವುದಿಲ್ಲ. ಸತೀಶ್ ಜಾರಕಿಹೊಳಿ ರಾಜ್ಯದ ಜನರ ಬಳಿ ಕ್ಷಮಾಪಣೆ ಕೇಳಬೇಕು. ಹಗುರವಾಗಿ ಮಾತನಾಡಿದರೆ ದೊಡ್ಡವನಾಗುತ್ತೇನೆ ಅಂತಾ ಎಂದುಕೊಂಡಿದ್ದಾರೆ. ಅದೊಂದು ಭ್ರಮೆ. ಸತೀಶ್ ಜಾರಕಿಹೊಳಿ ಗೌರವದಿಂದ ನಡೆದುಕೊಳ್ಳಬೇಕು. ಹಿಂದೂಗಳಿಗೆ ಅಪಮಾನ ಆಗುವ ಹಾಗೆ ವರ್ತನೆ ಮಾಡಬಾರದು ಎಂದು ಬಿಎಸ್‌ವೈ, ಸತೀಶ್ ಜಾರಕಿಹೊಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಬಿಜೆಪಿಯ ಗೆಲುವನ್ನು ತಡೆಯಲು ಸಿದ್ದರಾಮಯ್ಯನಿಂದ ಸಾಧ್ಯವಿಲ್ಲ

ಬಿಜೆಪಿಯ ಗೆಲುವನ್ನು ತಡೆಯಲು ಸಿದ್ದರಾಮಯ್ಯನಿಂದ ಸಾಧ್ಯವಿಲ್ಲ

ಚುನಾವಣೆಯಲ್ಲಿ ಗೆದ್ದು ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಉಡುಗೊರೆ ಕೊಡುತ್ತೇವೆ ಎನ್ನುವ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಯಡಿಯೂರಪ್ಪ, ಸಿದ್ದರಾಮಯ್ಯ ಯಾವುದೋ ಭ್ರಮೆಯಲ್ಲಿದ್ದಾರೆ. ರಾಜ್ಯದ ಜನ ಅವರ ಜೇಬಿನಲ್ಲಿದ್ದಾರೆ ಎಂಬ ಭಾವನೆ ಸಿದ್ದರಾಮಯ್ಯ ಮನಸ್ಸಲ್ಲಿದ್ದಂತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲುವುದು ಅಸಾಧ್ಯ. ನಾನು ಮತ್ತು ಬೊಮ್ಮಾಯಿ ರಾಜ್ಯದಲ್ಲಿ ಪ್ರವಾಸ ಹೊರಟಾಗ ಅಭೂತಪೂರ್ವ ಜನಬೆಂಬಲ ಸಿಕ್ಕಿದೆ. ನರೇಂದ್ರ ಮೋದಿ ಅವರ ಬೆಂಬಲದೊಂದಿಗೆ ಬಿಜೆಪಿಗೆ ಕರ್ನಾಟಕದಲ್ಲಿ ಸ್ಪಷ್ಟ ಬಹುಮತ ಸಿಗಲಿದೆ. ಕರ್ನಾಟಕದಲ್ಲಿ ಬಿಜೆಪಿಯ ಗೆಲುವನ್ನು ತಡೆಯಲು ಸಿದ್ದರಾಮಯ್ಯನಿಂದ ಸಾಧ್ಯವಿಲ್ಲ ಎಂದು ಹೇಳಿದರು.

ಬೇರೆ‌ ಬೇರೆ ಪಕ್ಷದಿಂದ ಅನೇಕರು ಈಗಾಗಲೇ ಬಿಜೆಪಿ ಬಂದಿದ್ದಾರೆ

ಬೇರೆ‌ ಬೇರೆ ಪಕ್ಷದಿಂದ ಅನೇಕರು ಈಗಾಗಲೇ ಬಿಜೆಪಿ ಬಂದಿದ್ದಾರೆ

ಇನ್ನು ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎನ್ನುವ ನೀವು ಬಾದಾಮಿಯನ್ನು ಯಾಕೆ ಬಿಟ್ಟು ಬರುತ್ತಿದ್ದೀರಿ. ಬಾದಾಮಿಯಲ್ಲಿ ಸಿದ್ದರಾಮಯ್ಯಗೆ ಸೋಲು ನಿಶ್ಚಿತ. ಅಂದು ಶಾಸಕನಾಗಿ ಕೆಲವೇ ಮತಗಳಿಂದ ಗೆದ್ದಿದ್ದೀರಿ. ಆನಂತರ ಕ್ಷೇತ್ರವನ್ನು ಮರೆತು ಬಿಟ್ಟಿದ್ದೀರಿ. ಅಭಿವೃದ್ಧಿ ಮಾಡಿಲ್ಲ. ಬಾದಾಮಿಯನ್ನು ತೊರೆಯುತ್ತಿರುವುದು ನಿಮಗೆ ಎಷ್ಟರ ಮಟ್ಟಿಗೆ ಶೋಭೆ ತರುತ್ತದೆ. ರಾಜ್ಯದ ಜನ ಈಗಾಗಲೇ ತೀರ್ಮಾನ ಮಾಡಿದ್ದಾರೆ. ಜನರೇ ನಿಮಗೆ ಉತ್ತರ ಕೊಡುತ್ತಾರೆ. ಬೇರೆ‌ ಬೇರೆ ಪಕ್ಷದಿಂದ ಅನೇಕರು ಈಗಾಗಲೇ ಬಿಜೆಪಿಗೆ ಬಂದಿದ್ದಾರೆ, ಹಾಗೂ ಇನ್ನೂ ಬರುವವರಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

English summary
CM Basavaraj Bommai and Former CM B. S. Yediyurappa Criticize congress leader Satish Jarkiholi for his controversial statement.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X