ಇಂದು ಬೆಳ್ತಂಗಡಿ, ಬಂಟ್ವಾಳದಲ್ಲಿ ಯಡಿಯೂರಪ್ಪ ಮಳೆಹಾನಿ ಪರಿಶೀಲನೆ

ಮಂಗಳೂರು, ಆಗಸ್ಟ್ 12: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಉಕ್ಕಿ ಹರಿಯುತ್ತಿದ್ದ ನೇತ್ರಾವತಿ ಮತ್ತು ಕುಮಾರಧಾರಾ ನದಿಗಳು ಈಗ ಶಾಂತವಾಗಿ ಹರಿಯುತ್ತಿವೆ. ನದಿ ಪ್ರವಾಹದಿಂದ ನಲುಗಿದ್ದ ಬಂಟ್ವಾಳ ಮತ್ತು ಬೆಳ್ತಂಗಡಿ ಪ್ರದೇಶಗಳಲ್ಲಿ ಪ್ರವಾಹದ ನೀರು ಇಳಿದಿದೆ. ಈ ನಡುವೆ ಮಳೆಹಾನಿ ಪರಿಶೀಲನೆಗಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುತ್ತಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು 11ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ರಸ್ತೆ ಮೂಲಕ ನೇರವಾಗಿ ಬೆಳ್ತಂಗಡಿಗೆ ತೆರಳಲಿದ್ದಾರೆ. ಬೆಳ್ತಂಗಡಿಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

CM Yeddyurappa Visiting Dakshina Kannada

ಮಧ್ಯಾಹ್ನ 2. 30ರಿಂದ ಧರ್ಮಸ್ಥಳದಲ್ಲಿ ನೆರೆ ಹಾವಳಿಯ ಪರಿಹಾರ ಕ್ರಮಗಳ ಕುರಿತಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಚರ್ಚೆ ನಡೆಸಲಿದ್ದಾರೆ. ಬಳಿಕ ಬಂಟ್ವಾಳಕ್ಕೆ ತೆರಳಿ ವೀಕ್ಷಣೆ ನಡೆಸಲಿದ್ದಾರೆ. ಸಂಜೆ 5. 15ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಮೈಸೂರಿಗೆ ತೆರಳಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+