ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸರ್ಕಾರದ ನೈಟ್ ಕರ್ಫ್ಯೂಗೆ ಕರಾವಳಿಯ ಬಿಜೆಪಿ ಶಾಸಕರ ವಿರೋಧ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಏಪ್ರಿಲ್ 10: ರಾಜ್ಯ ಸರ್ಕಾರ ಇಂದಿನಿಂದ ಕರ್ನಾಟಕದ ಎಂಟು ಜಿಲ್ಲೆಗಳ ಜಿಲ್ಲಾ ಕೇಂದ್ರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಶನಿವಾರ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಮಾಡುವಂತೆ ಆದೇಶ ಹೊರಡಿಸಿದೆ.

ಹತ್ತು ದಿನಗಳ ಕರ್ಫ್ಯೂಗೆ ಕರಾವಳಿ ಭಾಗದ ಶಾಸಕರು ಮಾತ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ರಘಪತಿ ಭಟ್ ಸರ್ಕಾರದ ನೈಟ್ ಕರ್ಫ್ಯೂವನ್ನು ವಿರೋಧಿಸಿದ್ದು, ಹಿಂಪಡೆಯುವಂತೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿರುವ ಶಾಸಕ ವೇದವ್ಯಾಸ ಕಾಮತ್, ""ಮಂಗಳೂರಿನಲ್ಲಿ ರಾತ್ರಿ ವೇಳೆ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಿಗೆ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಅವಕಾಶ ಕಲ್ಪಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ.''

Coastal Area MLAs Opposition To The State Governments Night Curfew Order

ಕಳೆದ ವರ್ಷವೂ ಲಾಕ್ ಡೌನ್ ಕಾರಣದಿಂದ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಸಾಧ್ಯವಾಗಿಲ್ಲ. ಈ‌ ವರ್ಷವೂ ಕೊರೊನಾ ಕಾರಣದಿಂದ ಧಾರ್ಮಿಕ ಕಾರ್ಯಕ್ರಮ ಗಳು ನಿಂತು ಹೋದರೆ ಸಮಾಜದ ಮೇಲೆ‌ ನಕಾರಾತ್ಮಕ ಪರಿಣಾಮ ಬೀರುತ್ತದೆ. ಹಾಗಾಗಿ ಸರ್ಕಾರ ಕರಾವಳಿಯಲ್ಲಿ ನಡೆಯುವ, ಈಗಾಗಲೇ ನಿಗದಿಯಾಗಿರುವ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ಕಲ್ಪಿಸಬೇಕಾಗಿ ವಿನಂತಿ ಮಾಡಿದ್ದೇನೆ ಅಂತಾ ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.

ಉಡುಪಿ ಶಾಸಕ ರಘುಪತಿ ಭಟ್ ವಿರೋಧ

ಇನ್ನು ಉಡುಪಿ, ಮಣಿಪಾಲ ನಗರದಲ್ಲಿ ನೈಟ್ ಕರ್ಫ್ಯೂ ಬೇಡ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರಿಗೆ ಮನವಿ ಮಾಡಿದ್ದಾರೆ. ಎಪ್ರಿಲ್-ಮೇ ತಿಂಗಳಲ್ಲಿ ಅನೇಕ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ದೈವದ ಕೋಲ, ನಾಗಾರಾಧನೆ, ಯಕ್ಷಗಾನ ನಡೆಯಲಿದೆ.

Coastal Area MLAs Opposition To The State Governments Night Curfew Order

ಕಳೆದ ವರ್ಷ ಕೋವಿಡ್ ಲಾಕ್ ಡೌನ್‌ನಿಂದ ಯಾವುದೇ ಧಾರ್ಮಿಕ ಕಾರ್ಯಕ್ರಮ ನಡೆಯಲಿಲ್ಲ. ಸಾಕಷ್ಟು ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ. ದೈವದ ಕೋಲಗಳು ಮುಂಚಿತವಾಗಿ ನಿಗದಿಯಾಗಿರುತ್ತದೆ. ನೈಟ್ ಕರ್ಫ್ಯೂ ಜಾರಿಯಾದ್ರೆ ರಾತ್ರಿ ನಡೆಯುವ ಧಾರ್ಮಿಕ ಕಾರ್ಯಕ್ರಮಕ್ಕೆ ತೊಂದರೆ ಆಗುತ್ತದೆ.

ಎಂಐಟಿ ಹೊರತು ಪಡಿಸಿದರೆ ಉಡುಪಿ ಹಾಗೂ ಮಣಿಪಾಲದಲ್ಲಿ ಯಾವುದೇ ಆತಂಕ ಇಲ್ಲ. ಎಂಐಟಿಯಲ್ಲಿ ಕಂಟೋನ್ಮೆಂಟ್ ಜೋನ್ ಮಾಡಿ ಪಾಸಿಟಿವ್ ರೇಟ್ ಕಡಿಮೆ ಆಗಿದೆ. ಜಿಲ್ಲೆಯಲ್ಲಿ ಕೇವಲ 400 ಮಾತ್ರ ಸಕ್ರಿಯ ಪ್ರಕರಣ ಇದೆ. ಕೇವಲ 59 ಮಂದಿ ಆಸ್ಪತ್ರೆಯಲ್ಲಿ ಇದ್ದು, ಯಾರೊಬ್ಬರ ಆರೋಗ್ಯ ಸ್ಥಿತಿ ಗಂಭೀರ ಇಲ್ಲ, ಡೆತ್ ರೇಟ್ ಕಡಿಮೆ ಇದೆ. ಸರಾಸರಿ ಎರಡೂವರೆ ಸಾವಿರ ಟೆಸ್ಟ್ ಮಾಡುತ್ತಿದ್ದೇವೆ ಕೇವಲ 50 ರಿಂದ 60 ಪಾಸಿಟಿವ್ ಬರುತ್ತಿದೆ. ಹೀಗಾಗಿ ನೈಟ್ ಕರ್ಫ್ಯೂ ಜಾರಿ ಮಾಡದೇ, ಧಾರ್ಮಿಕ ಭಾವನೆಗಳಿಗೆ ಬೆಲೆ ಕೊಡಿ ಅಂತಾ ಉಡುಪಿ ಶಾಸಕ ರಘುಪತಿ ಭಟ್ ಮನವಿ ಮಾಡಿದ್ದಾರೆ.

ಇನ್ನು ಸರ್ಕಾರದ ನಿಯಮಗಳಿಗೆ ಹಿಂದೂ ಸಂಘಟನೆಗಳಿಂದಲೂ ವಿರೋಧ ವ್ಯಕ್ತವಾಗಿದ್ದು, ಸರ್ಕಾರ ಧಾರ್ಮಿಕ ಭಾವನೆಗಳಿಗೆ ಬೆಲೆ‌ ನೀಡಬೇಕು. ನಿಯಮದ ಹೆಸರಿನಲ್ಲಿ ಹಿಂದೂ ಧಾರ್ಮಿಕ ನಂಬಿಕೆಗಳ ಮೇಲೆ‌ ಗದಾಪ್ರಹಾರ ಬೇಡ. ಸರ್ಕಾರ ಈ ಬಗ್ಗೆ ವಿಶೇಷ ಗಮನ ಹರಿಸಬೇಕೆಂದು ಒತ್ತಾಯಿಸಿದ್ದಾರೆ. ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾದುನೋಡಬೇಕು.

English summary
Mangaluru South MLA Vedavyas Kamat, Udupi MLA Raghupati Bhatt has opposed the government's night curfew and has requested for withdrawal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X