ಕರಾವಳಿಯಲ್ಲಿ ಹೆಚ್ಚಾದ ಸಮುದ್ರದ ಅಲೆಗಳ ಅಬ್ಬರ;ಮಳೆಯ ಮುನ್ಸೂಚನೆ

ಮಂಗಳೂರು, ಮೇ 11:ರಾಜ್ಯದ ಕರಾವಳಿಯಲ್ಲಿ ಮುಂದಿನ 2 ದಿನಗಳ ಕಾಲ ಉತ್ತಮ ಮಳೆಯಾಗುವ ಮುನ್ಸೂಚನೆ ದೊರೆತಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಒತ್ತಡದ ಪರಿಣಾಮ ಭಾನುವಾರದಿಂದ (ಮೇ.10) 2 ದಿನಗಳ ಕಾಲ ಕರಾವಳಿಯ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಕಳೆದ ಎರಡು ದಿನಗಳಿಂದ ರಾಜ್ಯದ ಕರಾವಳಿಯಲ್ಲಿ ಸಮುದ್ರದಲ್ಲಿ ಬಲವಾದ ಗಾಳಿ ಬೀಸುತ್ತಿದೆ.ಪರಿಣಾಮ ಅಲೆಗಳ ಅಬ್ಬರ ಹೆಚ್ಚಾಗಿದೆ. ಅಲೆಗಳ ಏರಿಳಿತದಲ್ಲಿ ವ್ಯತ್ಯಾಸ ಗೋಚರಿಸುತ್ತಿದ್ದು, ಶುಕ್ರವಾರ ಮತ್ತಷ್ಟು ಬಿರುಸುಗೊಂಡಿತ್ತು ಎಂದು ಹೇಳಲಾಗಿದೆ.

ಈ ನಡುವೆ ಕೇರಳದ ಕಾಸರಗೋಡು ಕಡಲತಡಿಯಲ್ಲಿ ಕಡಲ್ಕೊರೆತ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಕಾಸರಗೋಡು ಆಸುಪಾಸಿನಲ್ಲಿ ಮುಂದಿನ 24 ತಾಸುಗಳಲ್ಲಿ ತೀವ್ರ ಕಡಲ್ಕೊರೆತ ತಲೆದೋರುವ ಸಾಧ್ಯತೆಯಿದ್ದು, ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Coastal districts expected to get rain for two days

ರಾಜ್ಯದ ಕರಾವಳಿಯಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದರಿಂದ ಪ್ರವಾಸಿಗರನ್ನು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಉಡುಪಿಯ ಸೈಂಟ್‌ ಮೇರೀಸ್‌ ದ್ವೀಪಕ್ಕೆ ತೆರಳುವ ಟೂರಿಸ್ಟ್‌ ಬೋಟುಗಳ ಪ್ರಯಾಣವನ್ನು ನಿಲ್ಲಿಸಲಾಗಿದೆ.

ಸಮುದ್ರ ಕಿನಾರೆಗಳಲ್ಲಿ ಯಾವುದೇ ಜಲಸಾಹಸ ಕ್ರೀಡೆಗಳಿಗೆ ತಡೆ ಒಡ್ಡಲಾಗಿದೆ. ನಾಲ್ಕೈದು ದಿನಗಳವರೆಗೆ ಸಮುದ್ರದಲ್ಲಿ ಈ ವ್ಯತ್ಯಾಸ ಇರುವ ಸಾಧ್ಯತೆ ಇದೆ ಎಂದು ಮೀನುಗಾರರು ಅಭಿಪ್ರಾಯಪಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+