ಸುಹಾಸ್ ಶೆಟ್ಟಿ ಬರ್ಬರ ಹತ್ಯೆ: ಕರಾವಳಿ ರಾಜಕೀಯ ನಾಯಕರ ಆಗ್ರಹವೇನು?
ಮಂಗಳೂರು, ಮೇ,02: ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕಾರಿಗೆ ಮೀನಿನ ಟೆಂಪೋ ಗುದ್ದಿಸಿ ಬಳಿಕ ಬರ್ಬರವಾಗಿ ಕೊಲೆ ಮಾಡಲಾಗಿದೆ. ಈ ಘಟನೆಯಿಂದ ದಕ್ಷಿಣ ಕನ್ನಡ ಜಿಲ್ಲೆ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.
ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿರುವ ಈ ಘಟನೆಯ ಬಗ್ಗೆ ಕರಾವಳಿಯ ಜನಪ್ರತಿನಿಧಿಗಳು ಪ್ರತಿಕ್ರಿಯಿಸಿದ್ದು, ಆರೋಪಿಗಳಿಗೆ ಶಿಕ್ಷೆಯಾಗುವಂತೆ ಆಗ್ರಹಿಸಿದ್ದಾರೆ. ಜಿಹಾದಿಗಳ ಅಟ್ಟಹಾಸ ಮತ್ತೆ ಮುಂದುವರಿದಿದೆ. ನಮ್ಮ ಕಾರ್ಯಕರ್ತ ಸುಹಾಸ್ ಶೆಟ್ಟಿ ಜಿಹಾದಿಗಳಿಂದ ಬಲಿಯಾಗಿದ್ದಾನೆ. ಈ ಕೃತ್ಯಕ್ಕೆ ನೇರ ಕಾರಣ ರಾಜ್ಯ ಕಾಂಗ್ರೆಸ್ ಸರ್ಕಾರ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಗುಡುಗಿದ್ದಾರೆ.

ಪ್ರವೀಣ್ ನೆಟ್ಟಾರ್ ಹತ್ಯೆಯಾದ ಕೂಡಲೇ ಅಂದಿನ ನಮ್ಮ ಸರ್ಕಾರದಿಂದ ಎನ್ಐಎ ಕರೆಸಿ ತನಿಖೆ ನಡೆಸಿದ್ದೆವು. ಕೊಲೆಗೈದವರು ಮಾತ್ರವಲ್ಲದೇ ಅವರಿಗೆ ಬೆಂಬಲ ನೀಡಿದವರನ್ನೂ ಎನ್ಐಎ ಹುಡುಕಿ ಹುಡುಕಿ ಬಂಧಿಸಿದೆ. ಜಿಹಾದಿಗಳಿಗೆ ಇದರ ಭಯ ಇರುವಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಬಂದು ಆಗಂತುಕರ ಕೇಸ್ ವಾಪಾಸ್ ಪಡೆಯುವ ಕೃತ್ಯಕ್ಕೆ ಕೈ ಹಾಕಿತು. ಜಿಹಾದಿಗಳಿಗೆ ಪರೋಕ್ಷ ಬೆಂಬಲ ನೀಡಿತು. ಅದರ ಪರಿಣಾಮವೇ ಇಂದಿನ ಈ ಸ್ಥಿತಿಗೆ ಕಾರಣ.
ಕೂಡಲೇ ಈ ಪ್ರಕರಣದ ತನಿಖೆಯನ್ನು ಎನ್ಐಎಗೆ ಕೊಡಬೇಕು. ಈ ಮೂಲಕ ಜಿಹಾದಿಗಳನ್ನು ಬೇರಿನಿಂದಲೇ ಕಿತ್ತು ಹಾಕಬೇಕು.
ಮೃತ ಸುಹಾಸ್ ಶೆಟ್ಟಿ ಆತ್ಮಕ್ಕೆ ಶ್ರದ್ಧಾಂಜಲಿ ಅರ್ಪಿಸುತ್ತೇನೆ. ಮತ್ತೋರ್ವ ಕಾರ್ಯಕರ್ತನಿಗೂ ಹಲ್ಲೆಯಾಗಿದ್ದು ಪಕ್ಷದ ಮುಖಂಡರು ಭೇಟಿಯಾಗಿ ಆತನ ಜೊತೆಗೆ ನಿಂತಿದ್ದಾರೆ. ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

ಮೂಲಭೂತವಾದಿಗಳ ಅಟ್ಟಹಾಸಕ್ಕೆ ರಾಜ್ಯ ಕಾಂಗ್ರೆಸ್ ಸರಕಾರದ ಗ್ರೀನ್ ಸಿಗ್ನಲ್
ಈ ಘಟನೆಯ ಬಗ್ಗೆ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮತಾಂಧರ ದ್ವೇಷಕ್ಕೆ ಬಲಿಯಾಗಿದ್ದು, ಮಂಗಳೂರಿನಲ್ಲಿ ಮತ್ತೆ ಮೂಲಭೂತವಾದಿಗಳ ಅಟ್ಟಹಾಸಕ್ಕೆ ರಾಜ್ಯ ಕಾಂಗ್ರೆಸ್ ಸರಕಾರ ಗ್ರೀನ್ ಸಿಗ್ನಲ್ ನೀಡಿರುವುದು ಸ್ಪಷ್ಟ.
ಸುಹಾಸ್ ಆತ್ಮಕ್ಕೆ ಸದ್ಗತಿ ಕೋರುತ್ತಾ, ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮತ್ತೊಬ್ಬ ನಮ್ಮ ಹಿಂದೂ ಕಾರ್ಯಕರ್ತ ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ
ಧರ್ಮ ರಕ್ಷಣೆಯಲ್ಲಿ ತೊಡಗಿಸಿಕೊಂಡು ಹಿಂದುತ್ವಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ ಮಿತ್ರ ಸುಹಾಸ್ ಶೆಟ್ಟಿಯವರಿಗೆ ಭಾವಪೂರ್ಣ ಶ್ರದ್ಧಾಂಜಲಿ.
ರಾಜ್ಯದಲ್ಲಿ ಕಾನೂನು - ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡನೀಯ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ. ಪಾಕಿಸ್ತಾನ ಜಿಂದಾಬಾದ್ ಎಂದವರ ಪರ ಕಾಳಜಿ ತೋರುವ ಸರ್ಕಾರ ಹಿಂದು ಕಾರ್ಯಕರ್ತನ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ನೀಡಲೇಬೇಕು ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ.
ಈ ಸಾವಿನ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರವೇ ಹೊರಬೇಕು
ಸುಹಾಸ್ ಶೆಟ್ಟಿ ಕೊಲೆಯ ಬಗ್ಗೆ ಬಿಜೆಪಿ ನಾಯಕ ವೇದವ್ಯಾಸ ಕಾಮಾತ್ ಪ್ರತಿಕ್ರಿಯಿಸಿದ್ದು, ಮಂಗಳೂರಿನ ಬಜ್ಪೆಯಲ್ಲಿ ಮತಾಂಧ ಶಕ್ತಿಗಳು ಅಟ್ಟಹಾಸ ಮೆರೆದಿದ್ದು, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ಮೇಲೆ ನಡು ರಸ್ತೆಯಲ್ಲೇ ಭೀಕರ ದಾಳಿ ನಡೆಸಿ ಹತ್ಯೆಗೈದಿರುವುದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.
ನಿಷೇಧಿತ ಪಿ.ಎಫ್.ಐ ನಂತಹ ಸಂಘಟನೆಗಳ ಮೇಲಿನ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಅವರಿಗೆ ಇನ್ನಷ್ಟು ದುಷ್ಕೃತ್ಯಕ್ಕೆ ಪರೋಕ್ಷವಾಗಿ ಸಹಕರಿಸಿದ್ದೇ ಈಗಿನ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ. ಹಾಗಾಗಿ ಈ ಸಾವಿನ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರವೇ ಹೊರಬೇಕು.
ಪೊಲೀಸ್ ಇಲಾಖೆ ಕೂಡಲೇ ಹಂತಕರ ಹೆಡೆಮುರಿ ಕಟ್ಟಿ ಕಾನೂನಿನ ಪರಿಧಿಯೊಳಗೆ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸುತ್ತಾ, ಅಗಲಿದ ಸಹೋದರನಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುತ್ತೇನೆ ಎಂದಿದ್ದಾರೆ.
ಮಾರಕಾಸ್ತ್ರಗಳು ಅವನ ರಕ್ಷಣೆಗೆ ಇದ್ದರೆ ಸುಹಾಸ್ ಉಳಿಯುತ್ತಿದ್ದ- ಬಿಜೆಪಿ ಶಾಸಕ ಹರೀಶ್ ಪೂಂಜಾ
ಮಂಗಳೂರಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಬಗ್ಗೆ ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ವಿರುದ್ಧ ಕಿಡಿಕಾರಿದ್ದಾರೆ. ಸುಹಾಸ್ ಶೆಟ್ಟಿಯವರ ಅಂತಿಮ ಯಾತ್ರೆಯನ್ನು ಶಾಂತಿಯಿಂದ ನಡೆಸುತ್ತೇವೆ. ಎಲ್ಲರಿಗೂ ಗೊತ್ತಿರುವ ಹಾಗೆ ಸುಹಾಸ್ ಶೆಟ್ಟಿ ಅವರಿಗೆ ಜೀವ ಬೆದರಿಕೆ ಇತ್ತು.
ಆರು ಜನ ಇದ್ದ ಸಮಯದಲ್ಲೂ ಸಿನಿಮಾ ಮಾದರಿಯಲ್ಲಿ ಅಟ್ಟಹಾಸ ಮೆರೆದಿದ್ದಾರೆ. ಇದನ್ನು ಹಿಂದೂ ಸಮಾಜ ಸಹಿಸಿಕೊಂಡು ಕೂರುವುದಿಲ್ಲ. ಹಿಂದೂ ಸಮಾಜ ಮುಂದಿನ ದಿನಗಳಲ್ಲಿ ಇದಕ್ಕೆ ಉತ್ತರವನ್ನು ನೀಡುತ್ತೇವೆ. ಈ ಹತ್ಯೆಯ ಜವಾಬ್ದಾರಿಯನ್ನು ಪೊಲೀಸ್ ಇಲಾಖೆ ಹೊತ್ತುಕೊಳ್ಳಬೇಕಾಗುತ್ತದೆ. ಮಾಹಿತಿ ಇದ್ದರೂ ಪೊಲೀಸರು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಕಾಂಗ್ರೆಸ್ ಸರ್ಕಾರ ಎಂದು ಕಿಡಿಕಾರಿದರು.
ಇನ್ನು ಸುಹಾಸ್ ಕಾರಿನಲ್ಲಿ ಆಯುಧ ಇಟ್ಟುಕೊಳ್ಳದಂತೆ ನೋಡಿಕೊಂಡಿದ್ದಾರೆ. ಪದೇ ಪದೇ ಪೊಲೀಸರು ಅವನ ವಾಹನವನ್ನು ಚೆಕ್ ಮಾಡಿದ್ದಾರೆ. ಮಾರಕಾಸ್ತ್ರಗಳು ಅವನ ರಕ್ಷಣೆಗೆ ಇದ್ದರೆ ಸುಹಾಸ್ ಉಳಿಯುತ್ತಿದ್ದ. ರಕ್ಷಣೆ ಕೊಡದೇ ದ್ವೇಷ ಕಾರಣ ಎಂದರೆ, ಇದೆಲ್ಲಾ ಪೊಲೀಸರಿಗೆ ಮೊದಲೇ ಗೊತ್ತಿತ್ತಾ ಎಂದು ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರಶ್ನಿಸಿದ್ದಾರೆ.
ಸುಹಾಸ್ ಶೆಟ್ಟಿ ಕೊಲೆಯ ಬಗ್ಗೆ ಸಿ.ಟಿ ರವಿ ಹೇಳಿದ್ದೇನು?
ಮಂಗಳೂರಿನಲ್ಲಿ ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಕೊಲೆಯ ಬಗ್ಗೆ ಬಿಜೆಪಿ ಮಾಜಿ ಸಚಿವ ಸಿ.ಟಿ ರವಿ ಪ್ರತಿಕ್ರಿಯಿಸಿದ್ದು, ಹಿಂದುತ್ವಕ್ಕಾಗಿ ಜೀವನವನ್ನೇ ಮೂಡಿಪಾಗಿಟ್ಟ ಅಪ್ಪಟ ಹಿಂದೂ, ಬಜರಂಗದಳದ ಕಾರ್ಯಕರ್ತರಾದ ಸುಹಾಸ್ ಶೆಟ್ಟಿ ಬಜ್ಪೆ ರವರ ಅಗಲಿಕೆಯು ಹಿಂದೂ ಸಮಾಜಕ್ಕೆ ತುಂಬಲಾರದ ನಷ್ಟದೊಂದಿಗೆ ಅತೀವ ದುಃಖ ತಂದಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ, ದೇವರು ಅವರ ಕುಟುಂಬಕ್ಕೆ ದುಃಖವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications