ಬಂಟ್ವಾಳದಲ್ಲಿ ಯುವತಿ ಸಾವು; ಡೆಂಗ್ಯೂ ಶಂಕೆ
ಮಂಗಳೂರು, ಆಗಸ್ಟ್ 24: ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದು, ಡೆಂಗ್ಯೂ ಜ್ವರಕ್ಕೆ ಆಕೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಬಂಟ್ವಾಳದ ಸಾಲೆತ್ತೂರು ನಿವಾಸಿ ಮಧುಶ್ರೀ (19) ಮೃತ ಕಾಲೇಜು ವಿದ್ಯಾರ್ಥಿನಿ. ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿಯಾಗಿರುವ ಮಧುಶ್ರೀ ಕೆಲದಿನಗಳ ಹಿಂದೆ ಡೆಂಗ್ಯೂ ಜ್ವರದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡು ಮೂರು ದಿನಗಳ ಹಿಂದೆಯಷ್ಟೇ ಮನೆಗೆ ಹೋಗಿದ್ದರು.

ಮನೆಯಲ್ಲಿ ವಿಶ್ರಾಂತಿಯಲ್ಲಿದ್ದ ಆಕೆಗೆ ತಡರಾತ್ರಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಮತ್ತೆ ಆಸ್ಪತ್ರೆಗೆ ದಾಖಲಿಸ ಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಆದರೆ ಯುವತಿಯ ಸಾವಿಗೆ ಡೆಂಗ್ಯೂ ಕಾರಣವಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.












Click it and Unblock the Notifications