ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಂಟ್ವಾಳದಲ್ಲಿ ಯುವತಿ ಸಾವು; ಡೆಂಗ್ಯೂ ಶಂಕೆ

|
Google Oneindia Kannada News

ಮಂಗಳೂರು, ಆಗಸ್ಟ್ 24: ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದು, ಡೆಂಗ್ಯೂ ಜ್ವರಕ್ಕೆ ಆಕೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಡೆಂಗ್ಯೂನಿಂದ ಮೃತಪಟ್ಟ ಸುದ್ದಿ ವಾಹಿನಿ ಛಾಯಾಗ್ರಾಹನ ಕುಟುಂಬಕ್ಕೆ 5 ಲಕ್ಷ ಪರಿಹಾರಡೆಂಗ್ಯೂನಿಂದ ಮೃತಪಟ್ಟ ಸುದ್ದಿ ವಾಹಿನಿ ಛಾಯಾಗ್ರಾಹನ ಕುಟುಂಬಕ್ಕೆ 5 ಲಕ್ಷ ಪರಿಹಾರ

ಬಂಟ್ವಾಳದ ಸಾಲೆತ್ತೂರು ನಿವಾಸಿ ಮಧುಶ್ರೀ (19) ಮೃತ ಕಾಲೇಜು ವಿದ್ಯಾರ್ಥಿನಿ. ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿಯಾಗಿರುವ ಮಧುಶ್ರೀ ಕೆಲದಿನಗಳ ಹಿಂದೆ ಡೆಂಗ್ಯೂ ಜ್ವರದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡು ಮೂರು ದಿನಗಳ ಹಿಂದೆಯಷ್ಟೇ ಮನೆಗೆ ಹೋಗಿದ್ದರು.

College Student Died From Suspected Dengue In Mangaluru

ಮನೆಯಲ್ಲಿ ವಿಶ್ರಾಂತಿಯಲ್ಲಿದ್ದ ಆಕೆಗೆ ತಡರಾತ್ರಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಮತ್ತೆ ಆಸ್ಪತ್ರೆಗೆ ದಾಖಲಿಸ ಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಆದರೆ ಯುವತಿಯ ಸಾವಿಗೆ ಡೆಂಗ್ಯೂ ಕಾರಣವಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

English summary
College student of Mangaluru died from suspected dengue fever. Disease student identified as Madhusree (19).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X