ಮಂಗಳೂರು ಪಾಲಿಕೆ ವಿರುದ್ಧ ರಾಜ್ಯ ನಗರಾಭಿವೃದ್ಧಿ ಇಲಾಖೆಗೆ ದೂರು
ಮಂಗಳೂರು, ಫೆಬ್ರವರಿ 1 : ಅಮೃತ್ ಮಿಷನ್ ಯೋಜನೆಯಡಿ ಕೇಂದ್ರ ಸರಕಾರ ಬಿಡುಗಡೆ ಮಾಡಿದ ಅನುದಾನವನ್ನು ಮಂಗಳೂರು ಮಹಾನಗರ ಪಾಲಿಕೆ ಅಪವ್ಯಯಗೊಳಿಸುತ್ತಿದೆ ಎಂದು ಆರೋಪಿಸಿ ಪಾಲಿಕೆ ಪ್ರತಿಪಕ್ಷ ನಾಯಕಿ ರೂಪಾ ಡಿ.ಬಂಗೇರ ರಾಜ್ಯ ನಗರಾಭಿವೃದ್ಧಿ ಇಲಾಖೆಗೆ ದೂರು ನೀಡಿದ್ದಾರೆ.
ಈ ಅಮೃತ್ ಮಿಷನ್ ಯೋಜನೆಯಡಿ ಕೇಂದ್ರ, ರಾಜ್ಯ ಸರಕಾರ ಮತ್ತು ಮನಪಾ ಆಡಳಿತವು 185.52 ಕೋಟಿ ರೂ. ಬಿಡುಗಡೆ ಮಾಡಿತ್ತು. ಆದರೆ, ಮನಪಾ ಮೊದಲ ಹಂತದ 55.52 ಕೋಟಿ ರು. ಎಡಿಬಿ ಯೋಜನೆಯ ಕಳಪೆ ಕಾಮಗಾರಿಗಳ ದುರಸ್ತಿ ಮಾಡಲು ಕ್ರಿಯಾ ಯೋಜನೆ ಸಿದ್ಧತೆಪಡಿಸಿದೆ. ಇದನ್ನು ವಿರೋಧಿಸಿ ಸರಕಾರ ಮತ್ತು ಜಿಲ್ಲಾಡಳಿತಕ್ಕೆ ರೂಪಾ ಅವರು ದೂರು ನೀಡಿದ್ದಾರೆ.

ದೂರನ್ನು ಸ್ವೀಕರಿಸಿರುವ ನಗರಾಭಿವೃದ್ಧಿ ಇಲಾಖೆಯ ನಿರ್ದೇಶಕರು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಿಗೆ ಪತ್ರ ಬರೆದು ಈ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.












Click it and Unblock the Notifications