ಕೊರೊನಾ ವೈರಸ್ ಅಪಪ್ರಚಾರ; ಮಂಗಳೂರಿನಲ್ಲಿ ದೂರು ದಾಖಲು
ಮಂಗಳೂರು, ಫೆಬ್ರವರಿ 14: ಚೀನಾದಲ್ಲಿ ನೂರಾರು ಜನರ ಸಾವಿಗೆ ಕಾರಣವಾಗಿರುವ ಕೊರೊನಾ ವೈರಸ್ ಬಗ್ಗೆ ಇಡೀ ಜಗತ್ತಿನಲ್ಲಿ ಆತಂಕ ಶುರುವಾಗಿದೆ. ಈ ನಡುವೆ ಭಾರತದ ಕೇರಳದಲ್ಲೂ ಕೊರೊನಾ ವೈರಸ್ ಪತ್ತೆಯಾಗಿರುವುದು ಆ ಆತಂಕವನ್ನು ಇಮ್ಮಡಿಗೊಳಿಸಿದೆ.
ಆದರೆ ಈ ಬಗ್ಗೆ ಅನಗತ್ಯವಾಗಿ ಆತಂಕ ಉಂಟು ಮಾಡುವ ಕೆಲಸವೂ ನಡೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ಹಲವು ವದಂತಿಗಳು ಹರಡುತ್ತಿವೆ.

ಈ ನಡುವೆ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳಲ್ಲಿಯೂ ಕೊರೊನಾ ವೈರಸ್ ಪತ್ತೆಯಾಗಿದೆ ಎಂದು ಯಾರೋ ವದಂತಿಯನ್ನು ಹಬ್ಬಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸಂದೇಶವನ್ನು ಹರಿಬಿಟ್ಟಿದ್ದಾರೆ. ಈ ವಿಚಾರವಾಗಿ ಕಾಲೇಜು ಆಡಳಿತ ಮಂಡಳಿಯ ಗಮನಕ್ಕೆ ಬಂದಿದ್ದು, ಕಾಲೇಜು ಪ್ರಾಂಶುಪಾಲರಾದ ಡಾ. ಶ್ರೀನಿವಾಸ ರಾವ್ ಮಂಗಳೂರು ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.












Click it and Unblock the Notifications