ಪುತ್ತೂರು ಪೊಲೀಸ್ ಠಾಣೆಯಲ್ಲಿ ಎಚ್.ಡಿ. ರೇವಣ್ಣ ವಿರುದ್ಧ ದೂರು

ಮಂಗಳೂರು, ಜೂನ್ 18: ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಖಾಸಗಿ ನರ್ಸಿಂಗ್ ಹೋಮ್‌ಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧ ಪುತ್ತೂರಿನ ಐಎಂಎ ಹೆರಾಸ್ಮೆಂಟ್ ಕಮಿಟಿಯ ಚೇರ್‌ಮೇನ್ ಆಗಿರುವ ಡಾ. ಗಣೇಶ್ ಪ್ರಸಾದ್ ಮುದ್ರಾಜೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ಒತ್ತಾಯಿಸಿದ್ದಾರೆ.

ಹಾಸನದಲ್ಲಿ ಖಾಸಗಿ ನರ್ಸಿಂಗ್ ಹೋಮ್‌ಗಳ ಬಗ್ಗೆ ಮಾತನಾಡಿದ್ದ ಎಚ್.ಡಿ ರೇವಣ್ಣ, ಹಾಸನ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳಿಂದ ಸುಲಿಗೆ ನಡೆಯುತ್ತಿದೆ. ಆಸ್ಪತ್ರೆಗಳು ಕೊರೊನಾ ಸಂದರ್ಭದಲ್ಲಿ ದಂಧೆ ಮಾಡುತ್ತಿದೆ. ಈ ಸುಲಿಗೆಯನ್ನು ಆಸ್ಪತ್ರೆಗಳು ನಿಲ್ಲಿಸದೇ ಇದ್ದಲ್ಲಿ ಜನರಿಗೆ ಹೇಳಿ ಹೊಡೆಸುತ್ತೇನೆ ಅಂತಾ ಎಚ್.ಡಿ. ರೇವಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದರು.

Mangaluru: Complaint Lodged Against HD Revanna In Puttur Police Station

ರೇವಣ್ಣ ಹೇಳಿಕೆ ವಿರುದ್ಧ ಖಾಸಗಿ ಆಸ್ಪತ್ರೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಜನಪ್ರತನಿಧಿಯಾದವರು ಜನರಿಗೆ ಕಾನೂನು ಕೈಗೆ ತೆಗೆದುಕೊಳ್ಳುವಂತೆ ಪ್ರಚೋದಿಸಿದ್ದು ತಪ್ಪು ಅಂತಾ ಖಂಡನೆ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+