ರೋಷನ್ ಬೇಗ್ ವಿರುದ್ಧ ಪುತ್ತೂರು ಠಾಣೆಯಲ್ಲಿ ದೂರು ದಾಖಲು
ಮಂಗಳೂರು, ಅಕ್ಟೋಬರ್ 13: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಾಚ್ಯ ಶಬ್ದ ಬಳಸಿದ ನಗರಾಭಿವೃದ್ಧಿ ಮತ್ತು ಹಜ್ ಸಚಿವ ರೋಷನ್ ಬೇಗ್ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ಎನ್ನುವವರು ದೂರನ್ನಾಧರಿಸಿ ಪ್ರಕರಣ ದಾಖಲಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರನ್ನು 13/10/2017ರಂದು ಬೆಂಗಳೂರಿನ ದೇವರಹಳ್ಳಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ರೋಷನ್ ಬೇಗ್ ಅತ್ಯಂತ ಅವ್ಯಾಚವಾಗಿ ನಿಂದಿಸಿದ್ದಾರೆ. ಇದು ದೇಶದ್ರೋಹದ ಕೃತ್ಯವಾಗಿದೆ. ಆದುದರಿಂದ ಆರೋಪಿಯನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.












Click it and Unblock the Notifications