ಹುತಾತ್ಮ ವೀರಯೋಧರಿಗಾಗಿ ದ.ಕ.ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ

ಮಂಗಳೂರು, ಫೆಬ್ರವರಿ 18: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆಯ ವಾಹನದ ಮೇಲೆ ಉಗ್ರರು ನಡೆಸಿದ ಭೀಕರ ದಾಳಿಗೆ ಒಂದೆಡೆ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಇನ್ನೊಂದೆಡೆ ಘಟನೆಯಲ್ಲಿ ವೀರಮರಣ ಅಪ್ಪಿದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ.

ಉಗ್ರರ ದಾಳಿಯಲ್ಲಿ ಮಡಿದ ವೀರ ಯೋಧರಿಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ದೇವಾಲಯ, ಚರ್ಚ್ ಸೇರಿದಂತೆ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ.

Condolence to brave soldiers in temple, church and Mosque of Dakshina Kannada

ದೇವಾಲಯಗಳಲ್ಲಿ ಕೆಲ ಸಂಘಟನೆಗಳು ವೀರ ಯೋಧರಿಗಾಗಿ ಪ್ರಾರ್ಥನೆ ಸಲ್ಲಿಸಿದರೆ, ಇನ್ನೊಂದೆಡೆ ಮಂಗಳೂರು ಕೆಥೋಲಿಕ್ ಕ್ರೈಸ್ತ ಧರ್ಮಪ್ರಾಂತದ ಎಲ್ಲಾ ಚರ್ಚ್ ಗಳಲ್ಲಿ ಉಗ್ರರ ಕೃತ್ಯ ಖಂಡಿಸಲಾಗಿದ್ದು, ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

Condolence to brave soldiers in temple, church and Mosque of Dakshina Kannada

ಮಸೀದಿಗಳಲ್ಲಿ ನಡೆದ ಪ್ರಾರ್ಥನಾ ಸಭೆಗಳಲ್ಲಿ ಉಗ್ರರ ಕೃತ್ಯವನ್ನು ಒಕ್ಕೊರಲಿನಿಂದ ಖಂಡಿಸಲಾಗಿದ್ದು, ಅಲ್ಲಾಹು ಯೋಧರ ಕುಟುಂಬಕ್ಕೆ ಸಾಂತ್ವನ ನೀಡಲಿ ಎಂದು ಪ್ರಾರ್ಥಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+