ಮಾಜಿ ಕೇಂದ್ರ ಸಚಿವ ವಿ. ಧನಂಜಯ್ ಕುಮಾರ್ ನಿಧನಕ್ಕೆ ಗಣ್ಯರ ಸಂತಾಪ
ಮಂಗಳೂರು, ಮಾರ್ಚ್ 04:ಮಾಜಿ ಕೇಂದ್ರ ಸಚಿವ ವಿ.ಧನಂಜಯ್ ಕುಮಾರ್ ನಿಧನಕ್ಕೆ ಹಲವಾರು ಗಣ್ಯರು ಹಾಗೂ ರಾಜಕೀಯ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.
ತಮ್ಮ ನಿಕಟವರ್ತಿಯಾಗಿದ್ದ ಧನಂಜಯ್ ಕುಮಾರ್ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ದುಃಖ ವ್ಯಕ್ತಪಡಿಸಿದ್ದು, ಕೇಂದ್ರ ಮಾಜಿ ಸಚಿವ, ಹಿರಿಯ ರಾಜಕಾರಣಿಗಳೂ ಆಗಿದ್ದ ವಿ.ಧನಂಜಯ ಕುಮಾರ್ ಅವರ ನಿಧನ ತೀವ್ರ ದುಃಖದ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.

ಬಿಜೆಪಿಯಿಂದ ಸಂಸತ್ ಸದಸ್ಯರಾಗಿ ವಾಜಪೇಯಿ ಅವರ ಸಂಪುಟದಲ್ಲಿ ಸಚಿವರಾಗಿ ಉತ್ತಮ ಕಾರ್ಯ ನಿರ್ವಹಿಸಿದ್ದರು. ನಾನು ಮುಖ್ಯಮಂತ್ರಿಯಾಗಿದ್ದಾಗ ಧನಂಜಯ್ ಕುಮಾರ್ ದೆಹಲಿಯಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ರಾಜ್ಯದ ಏಳಿಗೆಗೆ ಪೂರಕವಾದ ಕೆಲಸ ಮಾಡಿದ್ದರು. ಅವರ ನಿಧನದಿಂದ ವೈಯಕ್ತಿಕವಾಗಿ ನಾನು ಉತ್ತಮ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಯಡಿಯೂರಪ್ಪ ಪ್ರಾರ್ಥಿಸಿದ್ದಾರೆ.
ಧನಂಜಯ ಕುಮಾರ್ ಅವರು ಧೀರ್ಘಕಾಲದ ಅನಾರೋಗ್ಯದಿಂದ ಇವತ್ತು ನಿಧನರಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಗಲುವಿಕೆಯ ದು:ಖ ಭರಿಸುವ ಶಕ್ತಿ ಕುಟುಂಬಕ್ಕೆ ಸಿಗಲಿ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಪ್ರಾರ್ಥಿಸಿದ್ದಾರೆ.












Click it and Unblock the Notifications