ದಕ್ಷಿಣ ಕನ್ನಡದಲ್ಲಿ ಮತ್ತೆ ಪ್ರಚಾರ ವೈಖರಿ ಬದಲಿಸಿದ ಕಾಂಗ್ರೆಸ್
ಮಂಗಳೂರು, ಏಪ್ರಿಲ್ 08: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನೇರ ಹಣಾಹಣಿ ಇರುವುದೇ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ. ಇಲ್ಲಿ ಇತರೆ ಪಕ್ಷಗಳು ಆಟಕ್ಕುಂಟು ಲೆಕ್ಕಕ್ಕಿಲ್ಲದ ಪರಿಸ್ಥಿತಿ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಕಳೆದ 28 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಾಗಿದ್ದು, ಈ ಬಾರಿ ಗೆಲ್ಲುವ ಹುಮ್ಮಸ್ಸಿನಲ್ಲಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಆದರೆ ಕಾಂಗ್ರೆಸ್ ಈ ಬಾರಿ ಬಿಜೆಪಿ ಕೋಟೆಯನ್ನು ಕೈ ವಶಪಡಿಸಿಕೊಳ್ಳಲು ತಂತ್ರ ರೂಪಿಸಿದೆ. ಈ ಹಿನ್ನೆಲೆಯಲ್ಲಿ ಯುವ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ ಪರವಾಗಿ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಲಾಗುತ್ತಿದೆ.

ಈವರೆಗೆ ಕೇಸರಿ ಶಾಲು ಹಾಕಿ ತಿರುಗಿ ಮತಯಾಚನೆ ಮಾಡಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ಪ್ರಚಾರ ಶೈಲಿಯನ್ನು ಮತ್ತೆ ಬದಲಿಸಿ ಕೊಂಡಿದ್ದಾರೆ. ಮಿಥುನ್ ರೈ ಫೋಟೋ ಮತ್ತು ಕಾಂಗ್ರೆಸ್ ಚಿಹ್ನೆ ಇರುವ ಟಿ ಶರ್ಟ್ ಹಾಕಿಕೊಂಡು ಪ್ರಚಾರ ಆರಂಭಿಸಿದ್ದಾರೆ. ಈ ಟಿ ಶರ್ಟ್ ಧರಿಸಿ ಮನೆ, ಮನೆಗೆ ಭೇಟಿ ನೀಡಿ ಪ್ರಚಾರ ನಡೆಸುತ್ತಿದ್ದಾರೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಇತರ ಭಾಗಗಳು ಸೇರಿದಂತೆ ಮಂಗಳೂರಿನ ಉರ್ವಾಸ್ಟೋರ್ ವ್ಯಾಪ್ತಿಯ ದಂಬೆಲ್, ಉರ್ವಾ ಮಾರ್ಕೆಟ್, ಹೊಯ್ಗೆ ಬೈಲ್, ಅಶೋಕನಗರ ಪರಿಸರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರಚಾರ ನಡೆಸಿದ್ದಾರೆ.












Click it and Unblock the Notifications