ಬಂಟ್ವಾಳದಲ್ಲಿ ರೈ, ಸುಳ್ಯದಿಂದ ಡಾ. ರಘು, ಮುನೀರ್ ನಾಮಪತ್ರ ಸಲ್ಲಿಕೆ
ಮಂಗಳೂರು ಏಪ್ರಿಲ್ 19: ಮುಂಬರುವ ವಿಧಾನ ಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಭ್ಯರ್ಥಿಗಳ ನಾಮ ಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳಲ್ಲಿ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದಾರೆ.
ಬಂಟ್ವಾಳ ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ್ ರೈ ತನ್ನ ಅಪಾರ ಬೆಂಬಲಿಗರೊಂದಿಗೆ ಬಂಟ್ವಾಳ ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಇದೇ ವೇಳೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಿಂದ ಸಿಪಿಐಎಂ ಅಭ್ಯರ್ಥಿಯಾಗಿ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ನಾಮಪತ್ರ ಸಲ್ಲಿಸಿದರು.

ನಗರದ ಪಿವಿಎಸ್ ವೃತ್ತದಿಂದ ಪಾಲಿಕೆ ಕಚೇರಿಯವರೆಗೆ ಸಿಪಿಐಎನ ನೂರಾರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ತೆರಳಿದ ಮುನೀರ್ ಕಾಟಿಪಳ್ಳ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಚುನಾವಣಾಧಿಕಾರಿ ಎಸ್.ಬಿ. ಪ್ರಶಾಂತ್ ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ರಘು ಇಂದು ನಾಮಪತ್ರ ಸಲ್ಲಿಸಿದರು. ತಮ್ಮ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಸುಳ್ಯ ತಾಲೂಕು ಕಚೇರಿಗೆ ತೆರಳಿದ ಡಾ.ರಘು ನಾಮಪತ್ರ ಸಲ್ಲಿಸಿದರು.












Click it and Unblock the Notifications