• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿನಲ್ಲಿ ಎಂಟು ವಿಧಾನಸಭಾ ಸ್ಥಾನಕ್ಕೆ ಕಣ್ಣಿಟ್ಟ‌ 44 ಕಾಂಗ್ರೆಸ್ ಅಭ್ಯರ್ಥಿಗಳು

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಡಿಸೆಂಬರ್‌, 02: ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಕಾವು ರಂಗೇರಿದೆ. ಹಾಗೆಯೇ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ಕ್ಷೇತ್ರಗಳಿಂದ ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್‌ಗಾಗಿ 44 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ.

ಮಂಗಳೂರು ಕ್ಷೇತ್ರಕ್ಕೆ ಶಾಸಕ ಯು.ಟಿ.ಖಾದರ್ ಅವರಿಂದ ಕೆಪಿಸಿಸಿಗೆ ಒಂದೇ ಒಂದು ಅರ್ಜಿ ಬಂದಿದೆ. ಬೆಳ್ತಂಗಡಿಯಿಂದ ಮೂವರು, ಮೂಡುಬಿದಿರೆಯಿಂದ ಮೂವರು, ಮಂಗಳೂರು ದಕ್ಷಿಣ ದಿಂದ ಏಳು, ಮಂಗಳೂರು ನಗರ ಉತ್ತರದಿಂದ 9, ಬಂಟ್ವಾಳದಿಂದ ಮೂವರು ಮತ್ತು ಸುಳ್ಯದಿಂದ ಐವರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಟಿಕೆಟ್ ಆಕಾಂಕ್ಷಿಗಳು ಕೆಪಿಸಿಸಿಗೆ ಅರ್ಜಿ ಸಲ್ಲಿಸಲು ನವೆಂಬರ್ 21 ಕೊನೆಯ ದಿನವಾಗಿತ್ತು. ಸಾಮಾನ್ಯ ವರ್ಗದ ಅಭ್ಯರ್ಥಿಗಳು 2 ಲಕ್ಷ ರೂಪಾಯಿ ಡಿಮ್ಯಾಂಡ್ ಡ್ರಾಫ್ಟ್ ಅನ್ನು ಠೇವಣಿ ಮಾಡುವುದನ್ನು ಕಾಂಗ್ರೆಸ್‌ ಪಕ್ಷ ಕಡ್ಡಾಯಗೊಳಿಸಿದೆ.

ಕೆ. ಆರ್. ಕ್ಷೇತ್ರದ ಬಿಜೆಪಿ ಶಾಸಕ ರಾಮದಾಸ್‌ ಪ್ರತಿಸ್ಪರ್ಧಿ ಯಾರು?ಕೆ. ಆರ್. ಕ್ಷೇತ್ರದ ಬಿಜೆಪಿ ಶಾಸಕ ರಾಮದಾಸ್‌ ಪ್ರತಿಸ್ಪರ್ಧಿ ಯಾರು?

ಕಾಂಗ್ರೆಸ್‌ನಲ್ಲಿ ತೀವ್ರ ಪೈಪೋಟಿ ಶುರು

ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಮಿಥುನ್ ರೈ ಈ ಬಾರಿ ಮೂಡುಬಿದಿರೆಯಿಂದ ಸ್ಪರ್ಧಿಸಲು ಅರ್ಜಿ ಸಲ್ಲಿಸಿದ್ದಾರೆ. ಕಳೆದ ಬಾರಿಯೇ ಮೂಡಬಿದಿರೆ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಚಿಸಿದ್ದರು. ಆದರೆ ಅಭಯಚಂದ್ರ ಜೈನ್‌ಗೆ ಮಣೆ ಹಾಕಿದ ಕೆಪಿಸಿಸಿ ಈ ಬಾರಿಯ ಚುನಾವಣೆಯಲ್ಲಿ ಅವಕಾಶ ನೀಡುವುದಾಗಿ ಭರವಸೆ ನೀಡಿತ್ತು. ಅದರಂತೆಯೇ ಈ ಬಾರಿ ಮಿಥುನ್ ರೈಗೆ ಕಾಂಗ್ರೆಸ್ ಅವಕಾಶ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಕ್ಷೇತ್ರವಾರು ಕಾಂಗ್ರೆಸ್‌ ಟಿಕೆಟ್‌ಗಾಗಿ ಅರ್ಜಿ

ಇನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕರಾದ ಕೆ. ವಸಂತ ಬಂಗೇರ, ಮಾಜಿ ಸಚಿವ ಗಂಗಾಧರ ಗೌಡ, ಕಾಂಗ್ರೆಸ್ ಯುವ ಮುಖಂಡ ರಕ್ಷಿತ್ ಶಿವರಾಂ ಅಭ್ಯರ್ಥಿ ಅಕಾಂಕ್ಷಿಯಾಗಿ ಅರ್ಜಿ ಸಲ್ಲಿಸಿದ್ದಾರೆ. ಇನ್ನು ಜೆ.ಆರ್. ಲೋಬೋ (ಮಂಗಳೂರು ನಗರ ದಕ್ಷಿಣ), ಬಿ.ಎ. ಮೊಹಿಯುದ್ದೀನ್ ಬಾವ (ಮಂಗಳೂರು ನಗರ ಉತ್ತರ), ಬಿ. ರಮಾನಾಥ್ ರೈ (ಬಂಟ್ವಾಳ) ಮತ್ತು ಶಕುಂತಲಾ ಟಿ. ಶೆಟ್ಟಿ (ಪುತ್ತೂರು) ಅರ್ಜಿ ಸಲ್ಲಿಸಿದ್ದಾರೆ. ಹಾಗೆಯೇ ಮಾಜಿ ಎಂಎಲ್‌ಸಿ ಐವನ್ ಡಿಸೋಜಾ ಕೂಡ ಮಂಗಳೂರು ನಗರ ದಕ್ಷಿಣದಿಂದ ಸ್ಪರ್ಧಿಸಲು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಕಾರ್ಪೊರೇಟರ್‌ಗಳಾದ ಎ.ಸಿ. ವಿನಯರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಮಂಗಳೂರು ನಗರ ದಕ್ಷಿಣ ಮಹಿಳಾ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೋ ಕೆಪಿಸಿಸಿ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ.

ಕಲ್ಯಾಣ ಕರ್ನಾಟಕ ಭಾಗದ ಜನರ ಜತೆ ಸರ್ಕಾರ ಆಡುತ್ತಿರುವ ಆಟವನ್ನ ನಿಲ್ಲಿಸಬೇಕಿದೆ: ಸುರ್ಜೇವಾಲಕಲ್ಯಾಣ ಕರ್ನಾಟಕ ಭಾಗದ ಜನರ ಜತೆ ಸರ್ಕಾರ ಆಡುತ್ತಿರುವ ಆಟವನ್ನ ನಿಲ್ಲಿಸಬೇಕಿದೆ: ಸುರ್ಜೇವಾಲ

ಈ ಬಗ್ಗೆ ಮಾಹಿತಿ‌ ನೀಡಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಎಂಎಲ್‌ಸಿ ಕೆ.ಹರೀಶ್ ಕುಮಾರ್, ರಾಜ್ಯ ಮಟ್ಟದ ಕಾಂಗ್ರೆಸ್ ಚುನಾವಣಾ ಸಮಿತಿಯು ಕ್ಷೇತ್ರವಾರು ಅರ್ಜಿಗಳನ್ನು ಪರಿಶೀಲನೆ ನಡೆಸಲಿದೆ. ನಂತರ ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗುವುದು. ತೀವ್ರ ಪೈಪೋಟಿ ಎದುರಾದರೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಸಿಎಲ್‌ಪಿ ನಾಯಕರ ಜೊತೆ ಪಕ್ಷದ ಹೈಕಮಾಂಡ್‌ ಕೂಡ ಈ ಬಗ್ಗೆ ಚರ್ಚೆ ನಡೆಸಲಿದೆ ಎಂದು ಹೇಳಿದ್ದಾರೆ.

English summary
44 aspirants applied for Congress ticket to contest assembly elections from eight constituencies of Dakshina Kannada district. know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X