ವೃದ್ಧನಿಗೆ ಸಹಾಯ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ

ಮಂಗಳೂರು, ಏಪ್ರಿಲ್ 18:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ 1861 ಮತಗಟ್ಟೆಗಳಲ್ಲಿ ಏಕಕಾಲಕ್ಕೆ ಸರಿಯಾಗಿ 7 ಗಂಟೆಗೆ ಮತದಾನ ಆರಂಭಗೊಂಡಿದೆ. ಸರತಿ ಸಾಲಿನಲ್ಲಿ ನಿಂತು ಮತದಾರರು ಮತ ಚಲಾಯಿಸುತ್ತಿದ್ದಾರೆ.

ಮುಂಜಾನೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲು ಜನರು ಮುಂದಾಗುತ್ತಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಮಂಗಳೂರಿನ‌ ಬಲ್ಮಠ ಕೇಂದ್ರದಲ್ಲಿ ಮತ ಚಲಾಯಿಸಿದರು. ಜನಸಾಮಾನ್ಯನಂತೆ ಸರತಿ ಸಾಲಿನಲ್ಲಿ ನಿಂತು ಮಿಥುನ್ ರೈ ಮತದಾನ ಮಾಡಿದರು.

Congress candidate Mithun Rai who helped the senior citizen

ಹಿಂದುತ್ವ ಹಾಗೂ ಬಿಲ್ಲವರ ವೋಟಿನ ಮೇಲೆ ಕಣ್ಣಿಟ್ಟಿರುವ ಮಿಥುನ್ ರೈ ಮತದಾನ ಸಂದರ್ಭದಲ್ಲೂ ಹೆಗಲ ಮೇಲೆ‌ ಕೇಸರಿ, ಹಳದಿ ಶಾಲು ಹಾಕಿ ಮತದಾನ ಮಾಡಿದ್ದು ಗಮನ ಸೆಳೆಯಿತು. ಅಷ್ಟೇ ಅಲ್ಲ , ಮಂಗಳೂರು ಬಲ್ಮಠ ಸರ್ಕಾರಿ ಪ್ರೌಢ ಶಾಲೆ ಮತಗಟ್ಟೆಗೆ ಆಗಮಿಸಿದ ವೃದ್ಧರೊಬ್ಬರಿಗೆ ಮಿಥುನ್ ರೈ ಸಹಾಯ ಮಾಡಿದರು. ನಡೆಯಲು ಅಶಕ್ತರಾಗಿದ್ದ 83 ವರ್ಷದ ರಮೇಶ್ ರಾವ್ ಗೆ ಮಿಥುನ್ ರೈ ಸಹಾಯ ಮಾಡಿದ್ದು ಗಮನ ಸೆಳೆಯಿತು.

Congress candidate Mithun Rai who helped the senior citizen

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 17,24, 460 ಮತದಾರರಿದ್ದಾರೆ. ಈ ಪೈಕಿ 8,79,050 ಮಹಿಳಾ ಮತದಾರರಾದರೆ , 8,45,308 ಪುರುಷ ಮತದಾರರಿದ್ದಾರೆ. ಕ್ಷೇತ್ರದಲ್ಲಿ 13 ಅಭ್ಯರ್ಥಿಗಳು ಕಣದಲ್ಲಿದ್ದು, ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+