ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೈ, ತೆನೆ ಮುಖಂಡರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ ಪ್ರಮೋದ್ ಮಧ್ವರಾಜ್

|
Google Oneindia Kannada News

ಉಡುಪಿ, ಮಾರ್ಚ್ 25:ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಇಂದು ನಾಮಪತ್ರ ಸಲ್ಲಿಸಿದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರೊಂದಿಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಕೆ.ಜೆ.ಜಾರ್ಜ್, ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ , ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಮತ್ತಿತರರು ಹಾಜರಿದ್ದರು.

7 ಮಂದಿ ಮೀನುಗಾರರ ನಾಪತ್ತೆಗೆ ನೌಕಾಸೇನೆಯೇ ಕಾರಣ:ಪ್ರಮೋದ್ ಮಧ್ವರಾಜ್ ಗಂಭೀರ ಆರೋಪ7 ಮಂದಿ ಮೀನುಗಾರರ ನಾಪತ್ತೆಗೆ ನೌಕಾಸೇನೆಯೇ ಕಾರಣ:ಪ್ರಮೋದ್ ಮಧ್ವರಾಜ್ ಗಂಭೀರ ಆರೋಪ

ಈ ಮೊದಲು ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಧು ಬಂಗಾರಪ್ಪ ಸೇರಿದಂತೆ ಜಿಲ್ಲಾ ಜೆಡಿಎಸ್ ನಾಯಕರು ಕಾಂಗ್ರೆಸ್ ಕಚೇರಿಯಲ್ಲಿ ಹಾಜರಿದ್ದರು. ಈ ನಡುವೆ ಕಾಂಗ್ರೆಸ್ ಕಚೇರಿಯಲ್ಲಿ ಜೆಡಿಎಸ್ ಗೆ ಜಯಕಾರ ಕೇಳಿಬಂತು.

Congress-JDS coalition candidate Pramodh Madhwaraj filed the nomination

ಪ್ರಮೋದ್ ಮಧ್ವರಾಜ್ ನಾಮಪತ್ರ ಸಲ್ಲಿಕೆಗೂ ಮುನ್ನ ಶ್ರೀ ಕೃಷ್ಣಮಠ ಸೇರಿದಂತೆ ಉಡುಪಿಯ ಹಲವು ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದರು . ಅದಲ್ಲದೇ ಮಸೀದಿ ಹಾಗೂ ಚರ್ಚ್ ಗೆ ತೆರಳಿದ ಪ್ರಮೋದ್ ಮಧ್ವರಾಜ್ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

 ಪ್ರಮೋದ್ ಮಧ್ವರಾಜ್ ವಿರುದ್ಧ ಟಿ ಜೆ ಅಬ್ರಹಂ ವಾಗ್ದಾಳಿ ಪ್ರಮೋದ್ ಮಧ್ವರಾಜ್ ವಿರುದ್ಧ ಟಿ ಜೆ ಅಬ್ರಹಂ ವಾಗ್ದಾಳಿ

ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರಮೋದ್ ಮಧ್ವರಾಜ್, ಜೆಡಿಎಸ್ ಅಭ್ಯರ್ಥಿಯಾಗಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವುದಕ್ಕೆ ಖುಷಿ ಇದೆ. ಕೋಮು ಶಕ್ತಿಯ ವಿರುದ್ಧ ನಮ್ಮ ಹೋರಾಟವಿದು. ನಾನು ಬ್ರಹ್ಮಶ್ರೀ ನಾರಯಣ ಗುರುಗಳ ತತ್ವದಲ್ಲಿ ನಂಬಿಕೆ ಇಟ್ಟಿದ್ದೇನೆ. ಈ ಹಿನ್ನೆಲೆಯಲ್ಲಿ ದೇವಾಲಯ, ಮಸೀದಿ ಹಾಗೂ ಚರ್ಚ್ ಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದೇನೆ. ಚುನಾವಣೆಯಲ್ಲಿ ಗೆಲುವ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

English summary
Congress – JDS coalition candidate ofUdupi- Chikkamagaluru constituency Pramodh Madhwaraj field the nomination in Udupi DC office. Before that he visited temples church and Masque.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X