ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲು
ಮಂಗಳೂರು, ಜೂನ್ 10: ಕಾಂಗ್ರೆಸ್‌ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
Recommended Video
ಲಾಕ್‌ಡೌನ್ ಸಂದರ್ಭದಲ್ಲಿ ಅತಿ ಹೆಚ್ಚು ಮಾರಾಟವಾದ ಬಿಸ್ಕತ್| Parle G biscuit register Highest sale in Lockdown
ಅವರಿಗೆ ಎದೆನೋವು ಕಾಣಿಸಿಕೊಂಡ ಪರಿಣಾಮ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.79 ವರ್ಷದ ಆಸ್ಕರ್ ಫರ್ನಾಂಡಿಸ್ ಅವರು ಎದೆ ನೋವು ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಅವರಿಗೆ ನಗರದ ಕೊಡಿಯಾಲಬೈಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿಲಾಗುತ್ತಿದೆ.

ಉಡುಪಿ ಮೂಲದವರಾದ ಆಸ್ಕರ್ ಫರ್ನಾಂಡಿಸ್ ಅವರು ಉಡುಪಿ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಹಿರಿಯ ಕಾಂಗ್ರೆಸ್ ಮುಖಂಡ ಎದೆ ನೋವು ಮತ್ತು ಕಿಡ್ನಿ ಸಮಸ್ಯೆಯಿಂದ ಅವರು ಬಳಲುತ್ತಿದ್ದರೂ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.












Click it and Unblock the Notifications