ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಸ್ಕರ್ ಫರ್ನಾಂಡೀಸ್ ಗಂಭೀರ ಹಿನ್ನಲೆ; ಕಾಂಗ್ರೆಸ್ ಮಹತ್ವದ ಸಭೆ ರದ್ದು

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜುಲೈ 22: ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡೀಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಜುಲೈ 23ರಂದು ನಡೆಯಬೇಕಿದ್ದ ಕಾಂಗ್ರೆಸ್ ನಾಯಕರ ಸಭೆ ರದ್ದುಗೊಳಿಸಲಾಗಿದೆ. ಸಭೆ ರದ್ದುಗೊಳಿಸಿದ ಬಗ್ಗೆ ಕಾಂಗ್ರೆಸ್ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಭಾಗವಹಿಸಬೇಕಾಗಿದ್ದ ಸಭೆ ಇದಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಪಕ್ಷದ ನಾಯಕರು ಸಭೆಯಲ್ಲಿ ಭಾಗವಹಿಸುವವರಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡಾ ಸಭೆಯಲ್ಲಿ ಭಾಗವಹಿಸಲಿದ್ದರು.

ಆಸ್ಕರ್ ಫರ್ನಾಂಡೀಸ್ ಆರೋಗ್ಯ ವಿಚಾರಿಸಿದ ಜನಾರ್ದನ ಪೂಜಾರಿ ಆಸ್ಕರ್ ಫರ್ನಾಂಡೀಸ್ ಆರೋಗ್ಯ ವಿಚಾರಿಸಿದ ಜನಾರ್ದನ ಪೂಜಾರಿ

ಸಭೆ ರದ್ದುಗೊಳಿಸಿ ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡೀಸ್ ಆರೋಗ್ಯ ವಿಚಾರಿಸಲು ಗುರುವಾರ ಸಂಜೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಂಗಳೂರಿಗೆ ಆಗಮಿಸಲಿದ್ದಾರೆ. ಸಂಜೆ 6 ಗಂಟೆ ಹೊತ್ತಿಗೆ ಮಂಗಳೂರಿಗೆ ಆಗಮಿಸಲಿರುವ ಡಿ.ಕೆ. ಶಿವಕುಮಾರ್, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿರುವ ಆಸ್ಕರ್ ಫರ್ನಾಂಡೀಸ್‌ರವರ ಆರೋಗ್ಯ ವಿಚಾರಣೆ ಮಾಡಲಿದ್ದಾರೆ.

Mangaluru: Congress Leaders Cancels July 23rd Meeting After Oscar Fernandes Hospitalised

ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಸ್ಕರ್ ಫರ್ನಾಂಡಿಸ್ ಮನೆಯಲ್ಲಿ ಜಾರಿ ಬಿದ್ದು ಗಾಯಗೊಂಡಿದ್ದರು. ಮೆದುಳಿಗೆ ಏಟು ಬಿದ್ದು ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ.

English summary
Congress leaders Meeting scheduled on 23rd July in Mangaluru canceled after senior Congress leader Oscar Fernandes hospitalized.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X