ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಿಂದೂ ಮಹಾಸಭಾದ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ

|
Google Oneindia Kannada News

ಮಂಗಳೂರು, ಫೆಬ್ರವರಿ 04: ಹುತಾತ್ಮ ದಿನದಂದು ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಪ್ರತಿಕೃತಿಗೆ ಗುಂಡಿಕ್ಕಿದ ಹಿಂದೂ ಮಹಾಸಭಾದ ಕೃತ್ಯ ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ನಗರದ ಮಲ್ಲಿಕಟ್ಟೆಯಲ್ಲಿರುವ ಪಕ್ಷದ ಕಚೇರಿಯೆದುರು ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ರಮಾನಥ್ ರೈ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಫೆ.4 ರಂದು ಹಿಂದೂ ಮಹಾಸಭಾದ ಕೃತ್ಯ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆಫೆ.4 ರಂದು ಹಿಂದೂ ಮಹಾಸಭಾದ ಕೃತ್ಯ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಹಿಂದೂ ಮಹಾಸಭಾದಂತಹ ಮತೀಯವಾದಿಗಳ ಪೋಷಣೆ ಕೇಂದ್ರ ಸರ್ಕಾರದಿಂದ ನಡೆಯುತ್ತಿದೆ. ಗಾಂಧೀಜಿ ಅವರಿಗೆ ಅಪಮಾನ ಮಾಡಿದ್ರೂ ಕೇಂದ್ರ ಸರ್ಕಾರ ಸುಮ್ಮನಿದೆ. ಇದು ಕೇಂದ್ರ ಸರ್ಕಾರದ ನೀತಿಯನ್ನು ತೋರಿಸುತ್ತದೆ. ಮಹಾತ್ಮಗಾಂಧಿ ಅವರ ಪ್ರತಿಕೃತಿಗೆ ಗುಂಡಿಕ್ಕಿದ ಹಿಂದೂ ಮಹಾಸಭಾದ ಮುಖಂಡರನ್ನು ಈ ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.

Congress protest against Hindu Mahasabha

ಪ್ರತಿಭಟನೆಯಲ್ಲಿ ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ, ವಿಧಾನ ಪರಿಷತ್ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಹರೀಶ್ ಕುಮಾರ್, ಪಕ್ಷದ ಮುಖಂಡರಾದ ಕವಿತಾ ಸನಿಲ್, ಇಬ್ರಾಹೀಂ ಕೋಡಿಜಾಲ್, ಶಶಿಧರ್ ಹೆಗ್ಡೆ, ಮಮತಾ ಗಟ್ಟಿ ಮತ್ತಿತರರು ಉಪಸ್ಥಿತರಿದ್ದರು.

English summary
Congress activists staged protest against Hindu Mahasabha in Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X