ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಕಾಂಗ್ರೆಸ್ ಗೆ ಚುನಾವಣೆ ಸಂದರ್ಭದಲ್ಲಿ ಮಾತ್ರ ಬಡವರ ನೆನಪಾಗುತ್ತದೆ'

|
Google Oneindia Kannada News

ಮಂಗಳೂರು, ಏಪ್ರಿಲ್ 11:ಕಾಂಗ್ರೆಸ್ ಚುನಾವಣೆ ಸಂದರ್ಭದಲ್ಲಿ ಬಡತನ ನಿರ್ಮೂಲನೆಗೆಂದು ನ್ಯಾಯದ ಘೋಷಣೆ ಮಾಡಿದೆ. ಹಾಗಾದ್ರೆ ಈವರೆಗೆ ಕಾಂಗ್ರೆಸ್ ಬಡವರಿಗೆ ಮಾಡಿದ್ದು ಅನ್ಯಾಯವೇ? ಎಂದು ಬಿಜೆಪಿ ವಕ್ತಾರೆ ಮಾಳವಿಕಾ ಕಿಡಿಕಾರಿದರು.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ 1971ರಲ್ಲಿ ಗರೀಬಿ ಹಠಾವೋ ಘೋಷಣೆ ಮಾಡಿದ್ದರು. ಕಾಂಗ್ರೆಸ್ ಗೆ ಚುನಾವಣೆ ಸಂದರ್ಭದಲ್ಲಿ ಮಾತ್ರ ಬಡವರ ನೆನಪಾಗುತ್ತದೆ. ಆದರೆ ಇಷ್ಟು ವರ್ಷ ಅಧಿಕಾರದಲ್ಲಿದ್ದರೂ ಈವರೆಗೆ ದೇಶದಿಂದ ಬಡತನ ನಿರ್ಮೂಲನೆ ಮಾಡಲಾಗಿಲ್ಲ ಎಂದು ಟೀಕಿಸಿದರು.

Congress remembers poor people only during election:Malavika

ಕರಾವಳಿಯಲ್ಲಿ ಕೇಸರಿಯಾಗಿ ಬದಲಾದ ಕಾಂಗ್ರೆಸ್: ಉದ್ದೇಶವೇನು?ಕರಾವಳಿಯಲ್ಲಿ ಕೇಸರಿಯಾಗಿ ಬದಲಾದ ಕಾಂಗ್ರೆಸ್: ಉದ್ದೇಶವೇನು?

ಈ ಹಿನ್ನೆಲೆಯಲ್ಲಿ ಪರೋಕ್ಷವಾಗಿ 70 ವರ್ಷಗಳಲ್ಲಿ ಅನ್ಯಾಯ ಮಾಡಿದ್ದೇವೆಂದು ಕಾಂಗ್ರೆಸ್ ನವರು ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ 124 ಎ ಕಲಂ ರದ್ದುಪಡಿಸುವ ಭರವಸೆ ನೀಡಿದ್ದು, ಇದರಿಂದ ಪ್ರತ್ಯೇಕತಾವಾದಿಗಳಿಗೆ ಕಾಂಗ್ರೆಸ್ ಬೆಂಬಲಿಸುವ ಸೂಚನೆ ನೀಡಿದೆ ಎಂದು ಮಾಳವಿಕಾ ತಿಳಿಸಿದರು.

Congress remembers poor people only during election:Malavika

 'ಮತ್ತೊಮ್ಮೆ ಮೋದಿ ಸರ್ಕಾರ ಬಂದರೆ ಭಾರತ ವಿಶ್ವಕ್ಕೆ ಗುರುವಾಗಲಿದೆ' 'ಮತ್ತೊಮ್ಮೆ ಮೋದಿ ಸರ್ಕಾರ ಬಂದರೆ ಭಾರತ ವಿಶ್ವಕ್ಕೆ ಗುರುವಾಗಲಿದೆ'

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಗುಡುಗಿದ ಮಾಳವಿಕಾ ಅವರು ಚುನಾವಣೆ ಹೊತ್ತಲ್ಲಿ ಅಲ್ಪಸಂಖ್ಯಾತ ಅಪರಾಧಿಗಳನ್ನು ಬಿಡುಗಡೆ ಮಾಡಲು ರಾಜ್ಯ ಸರಕಾರ ಹೊರಟಿದೆ. ಈ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ಯಾವ ಸಂದೇಶ ನೀಡುತ್ತಿದ್ದಾರೆ? ಎಂದು ಪ್ರಶ್ನಿಸಿದರು.

English summary
In Mangaluru BJP spokes person Malavika slammed Congress over Nyay scheme. She said congress remembers poor people only during election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X