ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜೇಂದ್ರ ಕುಮಾರ್ ಗೆ ಟಿಕೆಟ್ ನೀಡಿದರೆ ಬಂಡಾಯ ಸ್ಪರ್ಧೆ ಖಚಿತ:ಜನಾರ್ದನ ಪೂಜಾರಿ

|
Google Oneindia Kannada News

ಮಂಗಳೂರು, ಮಾರ್ಚ್ 14: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲು ಎಸ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ ಎನ್ ರಾಜೇಂದ್ರ ಕುಮಾರ್ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂಬ ಮಾಹಿತಿ ತೇಲಿ ಬಂದಿದೆ. ಈ ಹಿನ್ನೆಲೆಯಲ್ಲಿ ರಾಜೇಂದ್ರ ಕುಮಾರ್ ವಿರುದ್ಧ ಕಾಂಗ್ರೆಸ್ ಹಿರಿಯ ಮುಖಂಡ ಬಿ ಜನಾರ್ದನ ಪೂಜಾರಿ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರಿನಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜೇಂದ್ರ ಕುಮಾರ್ ದೊಡ್ಡ ಭ್ರಷ್ಟಾಚಾರಿ. ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಧ್ಯಮಗಳಲ್ಲಿ ಬಂದಿದೆ. ಬಡವರ ಹಣವನ್ನು ರಾಜೇಂದ್ರ ಕುಮಾರ್ ನುಂಗಿದ್ದಾರೆ ಎಂದು ಕಿಡಿಕಾರಿದರು.

ದಕ್ಷಿಣ ಕನ್ನಡದಲ್ಲಿ ಸಮರ್ಥ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ನಲ್ಲಿ ಕಸರತ್ತುದಕ್ಷಿಣ ಕನ್ನಡದಲ್ಲಿ ಸಮರ್ಥ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ನಲ್ಲಿ ಕಸರತ್ತು

ಒಂದು ವೇಳೆ ಕಾಂಗ್ರೆಸ್ ಪಕ್ಷ ರಾಜೇಂದ್ರ ಕುಮಾರ್ ರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದರೆ ತಾವು ಅವರ ವಿರುದ್ಧ ಬಂಡಾಯವಾಗಿ ಸ್ಪರ್ಧೆ ಮಾಡುವುದು ಖಚಿತ ಎಂದು ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ನಾನೂ ಟಿಕೆಟ್ ಆಕಾಂಕ್ಷಿ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಸಿದ್ಧನಿದ್ದೇನೆ. ಟಿಕೆಟ್ ಸಿಕ್ಕಿದರೆ ಸ್ಪರ್ಧೆ ಖಂಡಿತ ಎಂದು ತಿಳಿಸಿದರು.

Congress should not give ticket to MN Rajendra Kumar:Janardhana Poojari

ಎರಡು ದಿನದಲ್ಲಿ ಸೋನಿಯಾ, ರಾಹುಲ್ ಗಾಂಧಿಯನ್ನು ಭೇಟಿಯಾಗುತ್ತೇನೆ. ಪಕ್ಷದ ಹಿರಿಯ ಪ್ರಭಾವಿ ಮುಖಂಡರನ್ನು ಭೇಟಿಯಾಗಿ ಟಿಕೆಟ್ ಕೇಳುತ್ತೇನೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಎಂ ಎನ್ ರಾಜೇಂದ್ರ ಕುಮಾರ್ ಅವರನ್ನು ಹೊರತುಪಡಿಸಿ ಬೇರೆ ಯಾರಿಗೆ ಟಿಕೆಟ್ ನೀಡಿದರೂ ನನ್ನ ಬೆಂಬಲವಿದೆ ಎಂದು ಪೂಜಾರಿ ಸ್ಪಷ್ಟಪಡಿಸಿದರು.

 ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಗೆ ಐವನ್ ಡಿಸೋಜಾ ಕಿಡಿ ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಗೆ ಐವನ್ ಡಿಸೋಜಾ ಕಿಡಿ

ಭ್ರಷ್ಟಾಚಾರ ನಿರ್ಮೂಲನೆ ಮೋದಿಯಿಂದ ಮಾತ್ರ ಸಾಧ್ಯ ಎಂದು ಹೇಳಿದ ಪೂಜಾರಿ, ಮೋದಿ ರಾಜಕೀಯವಾಗಿ ಇನ್ನಷ್ಟು ಪ್ರಬಲರಾಗಬೇಕು.ಮೋದಿ ಭ್ರಷ್ಟಚಾರದ ವಿರುದ್ಧ ಹೋರಾಡಿ ಗೆದ್ದಿದ್ದಾರೆ. ಮುಂದೆಯೂ ಗೆಲ್ಲುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

English summary
Lok Sabha Election 2019:Congress senior leader B Janardhana Poojari said in Mangaluru press met. SCDCC Bank Chairman MN Rajendra Kumar is a highly corrupt man. Congress should not give him ticket to contest from Dakshina kannad Lokasbha constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X