ಮಂಗಳೂರು : ರಾಮದೇವ್ ಹೇಳಿಕೆ ಖಂಡಿಸಿ ಪ್ರತಿಭಟನೆ
ಮಂಗಳೂರು,
ಮೇ 4 : ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಕುರಿತು ಯೋಗಗುರು ಬಾಬಾ ರಾಮ್ ದೇವ್ ನೀಡಿರುವ ಹೇಳಿಕೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವತಿಯಿಂದ ಪ್ರತಿಭಟನೆ ನಡೆಸಿದರು id="toptextpromo"> id='are-slot-1' class='oiad oi-axt oiadv'>ಶನಿವಾರ
ಕಾಂಗ್ರೆಸ್ ಮುಖಂಡರಾದ ಮೋಹನ್ ಪಿ.ವಿ., ಇಬ್ರಾಹಿಂ ಕೋಡಿಜಾಲ್ ಅವರ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಬಾಬಾ ರಾಮ್ ದೇವ್ ಅವರ ಪ್ರತಿಕೃತಿಯನ್ನು ಸುಟ್ಟು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. [ಚಿತ್ರಗಳು
ಬಾಬಾ ರಾಮದೇವ್ ವಿರುದ್ಧ ಪ್ರತಿಭಟನೆ
"ದಲಿತರ ಮನೆಗೆ ರಾಹುಲ್ ಗಾಂಧಿ ಹೋಗುವುದು ಹನಿಮೂನ್ ಮತ್ತು ಪಿಕ್ನಿಕ್ ಮಾಡಲು" ಎಂದು ಹೇಳಿದ್ದ ಯೋಗಗುರು ಬಾಬಾ ರಾಮ್‌ದೇವ್ ಅವರ ಹೇಳಿಕೆಯನ್ನು ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡದಿಂದ ಪ್ರತಿಭಟನೆ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಭಾಗದ ವತಿಯಿಂದ ಬಾಬಾ ರಾಮದೇವ್ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ಪ್ರತಿಕೃತಿ ದಹಿಸಿ ಆಕ್ರೋಶ
ಶನಿವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ಮುಖಂಡರಾದ ಮೋಹನ್ ಪಿ.ವಿ., ಇಬ್ರಾಹಿಂ ಕೋಡಿಜಾಲ್ ಅವರ ನೇತೃತ್ವದಲ್ಲಿ ಬಾಬಾ ರಾಮದೇವ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು.

ರಾಮದೇವ್ ಹೇಳಿದ್ದೇನು?
ಇತ್ತೀಚೆಗೆ ಉತ್ತರ ಪ್ರದೇಶದ ಲಕ್ನೋದಲ್ಲಿ ಬಾಬಾ ರಾಮದೇವ್ ಬಿಜೆಪಿ ಪರ ಚುನಾವಣಾ ಪ್ರಚಾರ ನಡೆಸುವಾಗ ರಾಹುಲ್ ಗಾಂಧಿ ಹನಿಮೂನ್ ಮಾಡಲು ದಲಿತರ ಮನೆಗಳಲ್ಲಿ ವಾಸ್ತವ್ಯ ಹೂಡುತ್ತಿದ್ದಾರೆಂದು ಹೇಳಿಕೆ ನೀಡಿದ್ದರು ಇದರು ದಲಿತರಿಗೆ ಮಾಡಿದ ಅವಮಾನ ಎಂದು ದೇಶಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ.

ಹಲವು ಕಡೆ ದೂರು ದಾಖಲು
ರಾಮದೇವ್ ಹೇಳಿಕೆ ಖಂಡಿಸಿ ವಿವಿಧ ರಾಜ್ಯಗಳಲ್ಲಿ ಅವರ ವಿರುದ್ಧ ದೂರು ದಾಖಲಾಗಿದೆ. ಹಲವು ಕಡೆ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.












Click it and Unblock the Notifications