ಜುಲೈ 7ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ
ಮಂಗಳೂರು, ಜುಲೈ 3: ಕಾಂಗ್ರೆಸ್ ಪಕ್ಷವನ್ನು ಬಲವರ್ಧನೆ ಮಾಡಬೇಕು ಎಂಬ ಉದ್ದೇಶದಿಂದ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಜುಲೈ 7 ರಂದು ಹಮ್ಮಿಕೊಳ್ಳಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.
ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜು.7ರಂದು ಅಪರಾಹ್ನ 3 ಗಂಟೆಗೆ ನಡೆಯುವ ಈ ಸಮಾವೇಶದಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸುವರು ಎಂದವರು ಹೇಳಿದ್ದಾರೆ.

ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ದಿನೇಶ್ ಗುಂಡೂರಾವ್, ಎಸ್.ಆರ್‌ಪಾಟೀಲ್, ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಮುಖಂಡರು ಭಾಗವಹಿಸುವರು ಎಂದು ಅವರು ತಿಳಿಸಿದ್ದಾರೆ.
ಮುಂದಿನ ಚುನಾವಣೆಗೆ ಕಾರ್ಯಕರ್ತರನ್ನು ಸಿದ್ಧಗೊಳಿಸುವ ಉದ್ದೇಶದಿಂದ ಪ್ರತೀ ಕ್ಷೇತ್ರಗಳಲ್ಲಿ ಈಗಾಗಲೇ ಕಾರ್ಯಾಗಾರಗಳನ್ನು ಆಯೋಜಿಸಲಾಗುತ್ತಿದೆ. ಸರಕಾರದ ಅಭಿವೃದ್ಧಿ ಪರ ಕಾರ್ಯಗಳನ್ನು ಜನತೆಗೆ ತಲುಪಿಸುವ ಉದ್ದೇಶದಿಂದ ಸಮಾವೇಶಗಳನ್ನು ಆಯೋಜಿಸಲಾಗುತ್ತಿದೆ ಎಂದವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಬಿ. ಜನಾರ್ಧನ ಪೂಜಾರಿ ಅವರ ಬಗ್ಗೆ ಕೀಳು ಭಾಷೆಯಲ್ಲಿ ನಿಂದಿಸಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸುವುದಿಲ್ಲ ಎಂದು ರೈ ಹೇಳಿದ್ದಾರೆ. 'ಸಾಕ್ಷ್ಯಾಧಾರಗಳಿಲ್ಲದ ಆರೋಪಕ್ಕೆ ಉತ್ತರಿಸುವುದಿಲ್ಲ' ಎಂದವರು ಸ್ಪಷ್ಟನೆ ನೀಡಿದ್ದಾರೆ.
ಮುಲ್ಕಿ ಸುಂದರರಾಮ ಶೆಟ್ಟಿಯವರ ಹೆಸರನ್ನು ರಸ್ತೆಗಿಡುವ ಪ್ರಕರಣದಲ್ಲಿ ಉಂಟಾದ ಗೊಂದಲವನ್ನು ಸೌಹಾರ್ದಯುತವಾಗಿ ಬಗೆಹರಿಸಲು ತಾತ್ಕಾಲಿಕ ತಡೆ ನೀಡಲಾಗಿದೆ ಎಂದೂ ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಹರೀಶ್ ಕುಮಾರ್, ನಾಯಕರಾದ ಶಶಿಧರ ಹೆಗ್ಡೆ, ಇಬ್ರಾಹಿಂ ಕೋಡಿಜಾಲ್ ಉಪಸ್ಥಿತರಿದ್ದರು.
-
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications