ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

2022ರ ಸೆಪ್ಟೆಂಬರ್ ವೇಳೆಗೆ ಮಂಗಳೂರು ಕೇಂದ್ರ ನಿಲ್ದಾಣದಲ್ಲಿ 2 ಹೊಸ ಪ್ಲಾಟ್‌ಫಾರ್ಮ್‌ ನಿರ್ಮಾಣ

|
Google Oneindia Kannada News

ಮಂಗಳೂರು, ಡಿಸೆಂಬರ್ 22: ಮುಂದಿನ ವರ್ಷ (2022) ಸೆಪ್ಟೆಂಬರ್ ವೇಳೆಗೆ ಮಂಗಳೂರು ಕೇಂದ್ರ ರೈಲು ನಿಲ್ದಾಣದಲ್ಲಿ ಎರಡು ಹೊಸ ಪ್ಲಾಟ್‌ಫಾರ್ಮ್‌ಗಳ ಕಾಮಗಾರಿಯನ್ನು ಪೂರ್ಣಗೊಳಿಸಲು ಭಾರತೀಯ ದಕ್ಷಿಣ ರೈಲ್ವೆ (ಎಸ್‌ಆರ್) ಯೋಜಿಸಿದೆ.

ಮಂಗಳವಾರದಂದು ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಪ್ಲಾಟ್‌ಫಾರ್ಮ್‌ಗಳಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿದ ದಕ್ಷಿಣ ರೈಲ್ವೆ ಜನರಲ್ ಮ್ಯಾನೇಜರ್ ಜಾನ್ ಥಾಮಸ್ ಸುದ್ದಿಗಾರರೊಂದಿಗೆ ಮಾತನಾಡಿ, ಮಾರ್ಚ್‌ನೊಳಗೆ ನಿಲ್ದಾಣದಲ್ಲಿ ಪಿಟ್‌ಲೈನ್ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಆ ನಂತರ ಹೊಸ ಪ್ಲಾಟ್‌ಫಾರ್ಮ್‌ಗಳ ಕಾಮಗಾರಿಯನ್ನು ಕೈಗೆತ್ತಿಕೊಂಡು ಆರು ತಿಂಗಳೊಳಗೆ ಪೂರ್ಣಗೊಳಿಸಲಾಗುವುದು. ಹೊಸ ಪ್ಲಾಟ್‌ಫಾರ್ಮ್‌ಗಳು ನಿಲ್ದಾಣದಿಂದ ಹೆಚ್ಚಿನ ರೈಲುಗಳನ್ನು ಓಡಿಸಲು ದಾರಿ ಮಾಡಿಕೊಡುತ್ತದೆ ಮತ್ತು ಜನ ದಟ್ಟಣೆಯನ್ನು ಕಡಿಮೆ ಮಾಡುತ್ತದೆ. ಪ್ರದೇಶದ ಜನರ ಬಹುಕಾಲದ ಬೇಡಿಕೆಗಳನ್ನು ಪೂರೈಸುತ್ತದೆ ಎಂದು ದಕ್ಷಿಣ ರೈಲ್ವೆ ಜನರಲ್ ಮ್ಯಾನೇಜರ್ ಜಾನ್ ಥಾಮಸ್ ಹೇಳಿದರು. ಈ ವೇಳೆ ಪಾಲಕ್ಕಾಡ್ ರೈಲ್ವೆ ವಿಭಾಗೀಯ ವ್ಯವಸ್ಥಾಪಕ ತ್ರಿಲೋಕ್ ಕೊಠಾರಿ ಉಪಸ್ಥಿತರಿದ್ದರು.

Construction of 2 New Platform at Mangaluru Central Railway Station By September 2022

ಅತ್ತಾವರದ ಕಡೆಯಿಂದ ಮಂಗಳೂರು ಕೇಂದ್ರ ನಿಲ್ದಾಣಕ್ಕೆ ಎರಡನೇ ಪ್ರವೇಶ ದ್ವಾರವನ್ನು ಸೇರಿಸಲು ಮತ್ತು ಯಶವಂತಪುರ- ಮಂಗಳೂರು ಜಂಕ್ಷನ್ ಗೋಮ್ಮಟೇಶ್ವರ ಎಕ್ಸ್‌ಪ್ರೆಸ್ ಹಗಲು ರೈಲನ್ನು ಕೇಂದ್ರ ನಿಲ್ದಾಣದವರೆಗೆ ವಿಸ್ತರಿಸಬೇಕು ಎಂದು ಪಶ್ಚಿಮ ಕರಾವಳಿ ರೈಲ್ವೆ ಯಾತ್ರಿ ಅಭಿವೃದ್ಧಿ ಸಮಿತಿ ಸದಸ್ಯರು ಜಾನ್ ಥಾಮಸ್‌ರಿಗೆ ಮನವಿ ಸಲ್ಲಿಸಿದರು.

ಮಂಗಳೂರು- ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ರಸ್ತೆಯವರೆಗೆ ವಿಸ್ತರಿಸಲು, ಮುಂಬೈ ಸಿಎಸ್‌ಟಿ ಎಕ್ಸ್‌ಪ್ರೆಸ್ ರೈಲನ್ನು ಸೆಂಟ್ರಲ್ ಸ್ಟೇಷನ್‌ಗೆ ವಿಸ್ತರಿಸಲು ಮತ್ತು ಮಂಗಳೂರು ಜಂಕ್ಷನ್ ನಿಲ್ದಾಣದಲ್ಲಿ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿಗೆ ನಿಲುಗಡೆಗೆ ಮಂಜೂರು ಮಾಡಲು ಸಮಿತಿಯು ಕೋರಿದೆ. ಅವರ ಬೇಡಿಕೆಗಳನ್ನು ಪರಿಗಣಿಸುವುದಾಗಿ ಪ್ರಧಾನ ವ್ಯವಸ್ಥಾಪಕರು ಭರವಸೆ ನೀಡಿದರು.

ಮಂಗಳೂರಿನಲ್ಲಿ ಕಲಿಯುತ್ತಿರುವ ಕೇರಳದ ಸಾವಿರಾರು ವಿದ್ಯಾರ್ಥಿಗಳಿಗೆ ಸಹಾಯವಾಗುತ್ತಿರುವ ಚೆರುವತ್ತೂರು- ಮಂಗಳೂರು ಪ್ಯಾಸೆಂಜರ್ ರೈಲನ್ನು ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಿದ ನಂತರ ಮರುಪ್ರಾರಂಭಿಸಲಾಗುವುದು ಎಂದು ದಕ್ಷಿಣ ರೈಲ್ವೆ ಜನರಲ್ ಮ್ಯಾನೇಜರ್ ಜಾನ್ ಥಾಮಸ್ ಹೇಳಿದರು.

ಧಾರವಾಡ- ಬೆಳಗಾವಿ ರೈಲು ಮಾರ್ಗಕ್ಕೆ 927 ಕೋಟಿ
ಧಾರವಾಡ- ಕಿತ್ತೂರು- ಬೆಳಗಾವಿ ನೂತನ ರೈಲು ಮಾರ್ಗ ನಿರ್ಮಾಣಕ್ಕಾಗಿ 927.40 ಕೋಟಿ ರೂಪಾಯಿ ಮೊತ್ತದ ಯೋಜನೆಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.

2021-22ನೇ ಸಾಲಿನ ಐಇಬಿಆರ್ ಅಡಿ ಕರ್ನಾಟಕ ನೀರಾವರಿ ನಿಗಮಕ್ಕೆ ಅವಧಿ ಸಾಲಗಳ ಮೂಲಕ 650 ಕೋಟಿ, ವಿಶ್ವೇಶ್ವರಯ್ಯ ಜಲ ನಿಗಮಕ್ಕೆ 250 ಕೋಟಿ ರೂ. ಕಾವೇರಿ ಜಲ ನಿಗಮಕ್ಕೆ 250 ಕೋಟಿ ರೂ., ಕೃಷ್ಣಾ ಭಾಗ್ಯ ಜಲ ನಿಗಮಕ್ಕೆ 500 ಕೋಟಿ ರೂ. ಹಣ ಸಂಗ್ರಹಿಸಲು ಮತ್ತು ಸರ್ಕಾರಿ ಖಾತರಿಗೂ ಒಪ್ಪಿಗೆ ನೀಡಲಾಗಿದೆ.

English summary
The Southern Railway (SR) is planning to complete the work on two new platforms at the Mangaluru central railway station by September 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X